ಜೀವನದಲ್ಲಿ ಪ್ರಗತಿ ಸಾಧಿಸಲು ಗುರಿ ಅತ್ಯವಶ್ಯಕ : ಡಾ. ಪ್ರಕಾಶ

ಕೊಪ್ಪಳ: ಜೀವನದಲ್ಲಿ ಪ್ರಗತಿ ಸಾಧಿಸಲು ಗುರಿ ಹೊಂದುವುದು ಅತ್ಯವಶ್ಯಕವಾಗಿದ್ದು, ವಿದ್ಯಾರ್ಥಿಗಳು ಒಂದು ನಿಧರ್ಿಷ್ಟ ಗುರಿ ಇಟ್ಟುಕೊಂಡು ವಿದ್ಯಾಭ್ಯಾಸ ಮಾಡಿ, ಯಶಸ್ಸು ಖಂಡಿತವಾಗಿಯೂ ಸಿಗುತ್ತದೆ ಎಂದು ಬೆಳಗಾವಿ ವಿ.ಟಿ.ಯು. ಸೆನೆಟ್ ಸದಸ್ಯರು ಹಾಗೂ ಹಾವೇರಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯರಾದ ಡಾ. ಕೆ.ಬಿ. ಪ್ರಕಾಶ ಅವರು ಹೇಳಿದರು.    

ಕೊಪ್ಪಳ ಜಿಲ್ಲೆಯ ತಳಕಲ್ ಸರ್ಕಾರಿ ಇಂಜಿನೀಯರಿಂಗ್ ಕಾಲೇಜಿನಲ್ಲಿ ಶುಕ್ರವಾರದಂದು (ಅ.18) ಹಮ್ಮಿಕೊಳ್ಳಲಾದ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ನೂತನವಾಗಿ ಪ್ರವೇಶ ಪಡೆದ ವಿದ್ಯಾಥರ್ಿಗಳಿಗೆ ಸ್ವಾಗತ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಅವರು ಮಾತನಾಡಿದರು.  

ಜೀವನದಲ್ಲಿ ಪ್ರಗತಿಯನ್ನು ಸಾಧಿಸಲು ಅಚಲ ಗುರಿ ಬಹುಮುಖ್ಯವಾಗಿರುತ್ತದೆ.  ವಿದ್ಯಾಥರ್ಿಗಳು ತಮ್ಮ ಜೀವನದಲ್ಲಿ ಮಹತ್ವಪೂರ್ಣ ಗುರಿಯನ್ನು ಹೊಂದಿರಬೇಕು. ಕಠಿಣ ಶ್ರಮವಿಲ್ಲದೆ ಯಾವುದೇ ನಿಮ್ಮ ಗುರಿ ಹಾಗೂ ಕನಸುಗನ್ನು ಸಾಧಿಸಲು ಅಸಾಧ್ಯ.  ಈ ನಿಟ್ಟಿನಲ್ಲಿ ಪ್ರತಿಯೊಬ್ಬ ವಿದ್ಯಾಥರ್ಿಯು ಒಂದು ಗುರಿಯನ್ನು ಬರೆದಿಟ್ಟುಕೊಂಡಿರಬೇಕು.  ಗುರಿಯನ್ನು ತಲುಪಲು ಉತ್ತಮ ವಿದ್ಯಾಭ್ಯಾಸ ಮತ್ತು ಶಿಸ್ತುನ್ನು ಅಗತ್ಯವಾಗಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು.  ಉನ್ನತ ಶಿಕ್ಷಣಕ್ಕೆ ಉತ್ತಮ ಉದಾಹರಣೆಯಂತಿರುವ ತಳಕಲ್ ಇಂಜಿನಿಯರಿಂಗ್ ಕಾಲೇಜನ್ನು ಸರ್ಕಾರವು ಉನ್ನತ ಶಿಕ್ಷಣ ಅಭಿವೃದ್ಧಿಯಡಿ 200 ಕೋಟಿ ರೂ. ವೆಚ್ಚದಲ್ಲಿ ನಿಮರ್ಿಸಿರುವದು ಸಂತೋಷದ ವಿಷಯ.  ಇಂತಹ ಶೈಕ್ಷಣಿಕ ಹಾಗೂ ಮೂಲಭೂತ ಸೌಲಭ್ಯಗಳನ್ನು, ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು ಎಂದು ಬೆಳಗಾವಿ ವಿ.ಟಿ.ಯು. ಸೆನೆಟ್ ಸದಸ್ಯರು ಹಾಗೂ ಹಾವೇರಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯರಾದ ಡಾ. ಕೆ.ಬಿ. ಪ್ರಕಾಶ ಅವರು ವಿದ್ಯಾರ್ಥಿ ಗಳಿಗೆ ಕರೆ ನೀಡಿದರು.  

ತಳಕಲ್ ಇಂಜಿನಿಯರಿಂಗ್ ಕಾಲೇಜು ಪ್ರಾಚಾರ್ಯರಾದ ಡಾ. ವಿರುಪಾಕ್ಷ ಬಾಗೋಡಿ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಂಸ್ಥೆಯ ಆಡಳಿತಾಧಿಕಾರಿ ಬಿ.ಆರ್. ದಂಡಗಿ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಪ್ರೊ..ಕೆ. ಸುರೇಶ್ ಹಾಗೂ ಸಂಸ್ಥೆಯ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಸೇರಿದಂತೆ ವಿದ್ಯಾರ್ಥಿ ಗಳು ಉಪಸ್ಥಿತರಿದ್ದರು.