ಸಾರ್ವಜನಿಕರಿಗೆ ಅನುಕೂಲವಾದ ಬಗ್ಗೆ ಯಶೋಗಾಥೆ ಮೂಲಕ ಸರ್ಕಾರದ ಗಮನ ಸೆಳೆಯಬೇಕು
The government's attention should be drawn to the benefits of the public through success stories
ಹಾವೇರಿ 04: ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಕವಾಗಿ ಬಡವರಿಗೆ ತಲುಪಿಸಬೇಕು. ಹೀಗಾಗಿ ಸಮಿತಿಯ ಎಲ್ಲಾ ಸದಸ್ಯರು ತಮ್ಮ ಹಂತದಲ್ಲಿ ಕೆಲಸಮಾಡಬೇಕು. ಯೋಜನೆಗಳ ಅನುಷ್ಠಾನದಿಂದ ಸಾರ್ವಜನಿಕರಿಗೆ ಅನುಕೂಲವಾದ ಬಗ್ಗೆ ಯಶೋಗಾಥೆ ಮೂಲಕ ಸರ್ಕಾರದ ಗಮನ ಸೆಳೆಯಬೇಕು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಂ ಎಂ ಹಿರೇಮಠ ಹೇಳಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ ಹಾಗೂ ಯುವನಿಧಿ ಗ್ಯಾರಂಟಿ ಯೋಜನೆಗಳು ಸಮರ್ಕವಾಗಿ ತಲುಪುತ್ತಿವೆಯೇ ಎಂಬುದನ್ನು ಪರೀಶೀಲಿಸಿದರು. ಅಧಿಕಾರಿಗಳು ಅಂಕಿ ಅಂಶಗಳ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿನ ಎಲ್ಲ ಬಸ್ ನಿಲ್ದಾಣಗಳಲ್ಲಿನ ಶೌಚಾಲಯ ಸ್ವಚ್ಛತೆ, ಸಿ ಸಿ ಟಿವಿ ಕ್ಯಾಮರಾ ಅಳವಡಿಕೆ ಹಾಗೂ ಹೊಸ ಮಾರ್ಗಗಳಲ್ಲಿ ಮತ್ತು ಕೋರಿರುವ ಮಾರ್ಗದಲ್ಲಿ ಹೊಸ ಸಾರಿಗೆ ಸೌಲಭ್ಯ ಅವಶ್ಯವಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲು, ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಮಾರ್ಗಗಳನ್ನು ಹೊಂದಾಣಿಕೆ ಮಾಡಿ ಪ್ರಯತ್ನಸುವಂತೆ ಅಧಿಕಾರಿಗಳಿಗೆ ಅಧ್ಯಕ್ಷರು ಸೂಚಿಸಿದರು.
ಗೃಹಜ್ಯೋತಿ ಯೋಜನೆ ಕುರಿತು ಚರ್ಚಿಸಿ ಪಿ.ಎಂ ಸೂರ್ಯಘರ್ ಯೋಜನೆ, ಸೋಲಾರ ಬಳಕೆ ಕುರಿತು ಸಾರ್ವಜನಿಕರಲ್ಲಿ ತಿಳಿವಳಿಕೆ ಮೂಡಿಸಿ ಮತ್ತು ಗ್ರಾಮೀಣ ಭಾಗಗಳಲ್ಲಿ ದಿನವಿಡಿ ವಿದ್ಯತ್ ಉರಿಯುತ್ತಿರುತ್ತವೆ ಇದರಿಂದ ಅನಗತ್ಯ ವಿದ್ಯತ್ ಬಳಕೆ ಯಾಗುತ್ತಿದೆ, ಇದನ್ನು ತಡೆಯಲು ಆಯಾ ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಗೃಹಲಕ್ಷ್ಮಿ ಯೋಜನೆ ಕುರಿತು ಪರೀಶೀಲನೆ ನಡೆಸಿ, ಜುಲೈ ಮಾಹೆಯ ವರೆಗೆ ರೂ. 2 ಸಾವಿರ ಜಮೆ ಮಾಡಲಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಇತ್ತೀಚಿಗೆ ಗ್ರಾಮೀಣ ಬ್ಯಾಂಕ್ ಮರ್ಜ ಆಗಿ ಕೆಲ ಫಲನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿರುವುದಿಲ್ಲ ಇದನ್ನು ಕೂಡಲೇ ಪರಿಹರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಯುವನಿಧಿಯಡಿ ವಿದ್ಯಾರ್ಥಿಗಳ ನೋಂದಣಿಗಾಗಿ ಅಭಿಯಾನ ಕೈಕೊಂಡು ನೋಂದಣಿ ಮಾಡಿಸಿ, ಇದು ನಿರಂತರ ಕ್ರಿಯೆಯಾಗಿದೆ. ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ಈ ಯೋಜನೆ ಕುರಿತು ಅರಿವು ಮೂಡಿಸಿ, ಜಿಲ್ಲೆಯಲ್ಲಿ ಪ್ರತಿಶತ ಶೇ.88 ರಷ್ಟು ಗುರಿ ಸಾಧಿಸಲಾಗಿದೆ ಎಂದರು.
ಸಭೆಯಲ್ಲಿ ಮುಖ್ಯ ಯೋಜನಾಧಿಕಾರಿಗಳಾದ ಹೆಚ್ ವೈ ಮೀಸಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಧಿಕಾರದ ಉಪಾಧ್ಯಕ್ಷರು, ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಧಿಕಾರದ ಅಧ್ಯಕ್ಷರು, ಉಪಾಧ್ಯಕ್ಷರು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 