ಬೆಂಗಳೂರು 07: ಇತ್ತೀಚೆಗೆ ಹೆಚ್ಚಿರುವ ಮೈಕ್ರೋ ಫೈನಾನ್ಸ್ ಹಾವಳಿಯನ್ನು ತಡೆಗಟ್ಟಲು ರಾಜ್ಯ ಸರ್ಕಾರ ಕಳುಹಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ. ಸುಗ್ರೀವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ವಾಪಾಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ.
ಸುಗ್ರೀವಾಜ್ಞೆಯಲ್ಲಿ ಹೇಳಲಾಗಿರುವ 10 ವರ್ಷಗಳ ಶಿಕ್ಷೆ ಹಾಗೂ ₹ 5 ಲಕ್ಷ ದಂಡ ವಿಪರೀತವಾಗಿದೆ, ಈಗ ಚಾಲ್ತಿಯಲ್ಲಿರುವ ಕಾನೂನನ್ನು ಉಪಯೋಗಿಸಿಕೊಂಡು ಪೊಲೀಸ್ ಇಲಾಖೆ ಪರಿಸ್ಥಿತಿಯನ್ನು ನಿಯಂತ್ರಿಸಬಹುದು, ಸುಗ್ರೀವಾಜ್ಞೆಯು ಮೈಕ್ರೊ ಫೈನಾನ್ಸ್ ಕಂಪನಿಗಳ ಮೇಲೆ ಋಣಾತ್ಮಕ ಪರಿಣಾಮ ಬೀರಲಿದೆ. ಬಡವರಿಗೂ ತೊಂದರೆಯಾಗಲಿದೆ ಎಂದು ಸುಗ್ರೀವಾಜ್ಞೆ ತಿರಸ್ಕರಿಸಲು ರಾಜ್ಯಪಾಲರ ಕಚೇರಿ ಕಾರಣ ಕೊಟ್ಟಿದೆ.