ಸಹಸ್ರಾರು ಭಕ್ತರ ಮದ್ಯೆ ಅದ್ಧೂರಿಯಾಗಿ ಜರುಗಿದ,,!ಶ್ರೀಕರಿಯಮ್ಮ ದೇವಿ ಜಾತ್ರಾ ಮಹೋತ್ಸವ,,
The grand celebration of Srikariamma Devi Jatra was held among thousands of devotees
ಕೊಪ್ಪಳ 20: ತಾಲೂಕಿನ ಕಿನ್ನಾಳ ಗ್ರಾಮದ ಶ್ರೀ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ ಅಂಗವಾಗಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಗುರುವಾರ ಸಂಜೆ ಸಂಭ್ರಮದಿದ ನಡೆಯಿತು.ಜಾತ್ರಾ ಮಹೋತ್ಸವ ಅಂಗವಾಗಿ ಬೆಳಿಗ್ಗೆಯಿಂದಲೇ ಶ್ರೀ ದೇವಿಗೆ ವಿಶೇಷ ಪೂಜಾ ಕಾರ್ಯಕ್ರಮ ಜರುಗಿದವು.ದೇವಸ್ಥಾನದಲ್ಲಿ ಭಕ್ತಾಧಿಗಳು ದೇವಿಗೆ ಕಾಯಿ ಕಪೂರ ನೈವೇದ್ಯ ಸಲ್ಲಿಸಿ ದರ್ಶನ ಪಡೆದರು. ಮದ್ಯಾಹ್ನ ಕರಿಯಮ್ಮ ದೇವಿಯ ಪೂಜಾರಿಯವರ ಮನೆಯಿಂದ ದೇವಿಯ ಪಲ್ಲಕ್ಕಿಯು, ಡೊಳ್ಳು ವಾಧ್ಯ ಮೇಳಗಳ ಮೆರವಣಿಗೆಯೊಂದಿಗೆ ತರಲಾಯಿತು. ಶ್ರೀ ದೇವಿಯ ಪಲ್ಲಕ್ಕಿಯು ಸಹಸ್ರಾರು ಭಕ್ತರ ಜಯಘೋಷದೊಂದಿಗೆ ಮೆರವಣಿಗೆ ಪ್ರಾರಂಭವಾಯಿತು. ಬಸವೇಶ್ವರ ವೃತ್ತ ಮಾರ್ಗವಾಗಿ ಅಂಬೇಡ್ಕರ್ ವೃತ್ತದಿಂದ ದೇವಸ್ಥಾನ ತಲುಪಿತು.
ಸಾಯಂಕಾಲ ವಿಷೇಶ ಪೂಜೆಯೊಂದಿಗೆ ರಥೋತ್ಸವಕ್ಕೆ ಚಾಲನೆ ಸಿಗುತ್ತಿದ್ದಂತೆ, ಭಕ್ತರು ರಥಕ್ಕೆ ಉತ್ತತ್ತಿ ಹಾಗೂ ಬಾಳೆಹಣ್ಣು ಸಮರ್ಿಸಿ ಭಕ್ತಿ ಹರಕೆ ತೀರಿಸಿದರು. ರಥೋತ್ಸವದ ಮುಂದೆ ಡೊಳ್ಳಿನ ಮೇಳ ಹಾಗೂ ವಿವಿಧ ವಾದ್ಯ ಮೇಳಗಳು ಗಮನ ಸೆಳೆದವು. ರಥೋತ್ಸವವು ಪಾದಗಟ್ಟಿವರೆಗೂ ತಲುಪಿ ನಂತರ ಮರಳಿ ಆಗಮಿಸಿತು.ರಥೋತ್ಸವ ಯಶಸ್ವಿಯಾಗಿ ಸ್ಥಳಕ್ಕೆ ಬಂದು ನಿಂತಾಗ ಭಕ್ತರು ಚಪ್ಪಾಳೆ ತಟ್ಟಿ, ಜಯಘೋಷಣೆ ಕೂಗಿದ್ದು ಮುಗಿಲು ಮುಟ್ಟಿತು. ಬೇಸಿಗೆಯ ನಡುವೆಯು ಬಿಸಿಲನ್ನು ಲೆಕ್ಕಿಸದೇ ಜಾತ್ರೋತ್ಸವದಲ್ಲಿ ಸಹಸ್ರಾರು ಸಂಖ್ಯೆಯ ಭಕ್ತರು ಪಾಲ್ಗೋಂಡು ಸೇವೆಯಲ್ಲಿ ನಿರತರಾಗಿದ್ದು ಅಮ್ಮನ ಶಕ್ತಿಯ ಅವತಾರವೇ ಸರಿ ಎನ್ನುವ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬಂದವು.ಒಟ್ಟಾರೇ ಮಹಿಳೆಯರು, ಮಕ್ಕಳು, ಹಿರಿಯರು, ಯುವಕರು ಜಾತ್ರೆಯ ಹರ್ಷವನ್ನು ವ್ಯಕ್ತಪಡಿಸಿದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 