ಅದ್ಧೂರಿಯಾಗಿ ನಡೆದ ಬೆಟಗೇರಿ ಹನುಮಂತ ದೇವರ ಓಕುಳಿ
The grand ceremony of the Hanuman Devata at Betageri was held
ಲೋಕದರ್ಶನ ವರದಿ
ಬೆಟಗೇರಿ 22: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ ಕಡೆ ಓಕುಳಿ ದಿನ ಜೂ.22ರಂದು ವಿಜೃಂಭನೆಯಿಂದ ನಡೆಯಿತು. ಮುಂಜಾನೆ 7 ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಮಹಾಭಿಷೇಕ, ಮಹಾಪೂಜೆ, ಪುರಜನರಿಂದ ಪೂಜೆ-ಪುನಸ್ಕಾರ, ನೈವೈದ್ಯ, ಹರಕೆ ಸಮರೆ್ಣ ನಡೆದ ಬಳಿಕ ಸಾಯಂಕಾಲ 5 ಗಂಟೆಗೆ ಓಕುಳಿ ಕೊಂಡಕ್ಕೆ ಸ್ಥಳೀಯ ವಿವಿಧ ದೇವರ ಪಲ್ಲಕ್ಕಿ ಪ್ರದಕ್ಷೀಣೆ, ಕಡೆ ಓಕಳಿ ನಡೆಯಿತು.
ಅಂದು ಸಂಜೆ 5 ಗಂಟೆಗೆ ಕುದುರೆ, ನವಿಲು, ಗರುಡ, ಕರಡಿ ಸೇರಿದಂತೆ ಹಲವು ಪ್ರಾಣಿ, ಪಕ್ಷಿಗಳ ಸೋಗಿನ ಮಜಲು(ಗುಂಪು)ಗಳ ಯುವಕರು ಕಾಲಿಗೆ ಮರಗಾಲು ಕಟ್ಟಿಕೊಂಡು ವಾಧ್ಯಮೇಳಗಳ ತಾಳಕ್ಕೆ ತಕ್ಕಂತೆ ಕುಣಿಯುವ ಕುಣಿತ ನೋಡುಗರ ಕಣ್ಮನ ತಣಿಸಿತು. ಬಣ್ಣದೊಕುಳಿ ಬಳಿಕ ಮಕ್ಕಳು, ಯುವಕರು, ವೃದ್ಧರು ಸಹ ಉತ್ಸಾಹದಿಂದ ಕಡೆ ಓಕುಳಿಯಲ್ಲಿ ನೀರು ಎರಚಿ ಸಂಭ್ರಮಿಸಿದರು.
ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಮಹಿಳೆಯರು, ಮಕ್ಕಳು, ವೃದ್ಧರು ಸಹಿತ ಸುಮಾರು ಮೂರಾ್ನಲ್ಕು ಗಂಟೆಗಳವರೆಗೆ ನಿಂತುಕೊಂಡು ಓಕುಳಿಯ ಸೋಬಗನ್ನು ಸವಿದರು. ಕೆಲವು ಬೀದಿಗಳು ಹಸಿರು ತಳಿರು ತೋರಣ, ವಿದ್ಯುತ್ ದೀಪ್ಗಳಿಂದ ಅಲಂಕಾರಗೊಂಡು ಕಂಗೊಳಿಸಿದವು. ಪ್ರತಿ ಓಣಿಯ ಎಲ್ಲ ಮನೆಯವರು ಸಾಮೂಹಿಕವಾಗಿ ಬಾಜಾ-ಭಜಂತ್ರಿಗಳ ಸಕಲ ವಾಧ್ಯಮೇಳಗಳೊಂದಿಗೆ ಇಲ್ಲಿಯ ಮಾರುತಿ ದೇವರ ದೇವಾಲಯಕ್ಕೆ ತೆರಳಿ ನೈವೇದ್ಯ, ಪೂಜೆ, ಪುನಸ್ಕಾರ, ಹರಕೆ ಸಮರ್ಿಸಿದರು.
ಕಡೆ ಓಕುಳಿ ದಿನ ಸ್ಥಳೀಯ ಪ್ರತಿ ಮನೆಗಳಲ್ಲಿ ನಾನಾ ಬಗೆಯ ಮೃಷ್ಟಾನ್ನ ಭೋಜನ ತಯಾರಿಸಿ, ಅಕ್ಕ-ಪಕ್ಕದ ಮನೆಯವರು, ಬಂಧು, ಬಾಂದವರು, ಆಪ್ತ ಮಿತ್ರರು ಒಟ್ಟಿಗೆ ಕುಳಿತು ಊಟ ಮಾಡುವುದು, ಊಣಬಡಿಸುವ ಸಡಗರದ ಸಂಭ್ರಮ ಸರ್ವಧರ್ಮಿಯರಲ್ಲಿ ಮತ್ತಷ್ಟು ಅವಿನಾಭಾವದ ಸಂಬಂಧ ಬೆಸೆದಂತತ್ತಿತ್ತು. ಮಾರುತಿ ದೇವರ ದೇವಾಲಯದ ಮುಂದೆ ರಾತ್ರಿ ಹಾರಿಸುವ ಸಿಡಿ ಮದ್ದುಗಳ ರಂಗು ರಂಗಿನ ಚಿತ್ತಾರ ಬಾನಂಗಳದಲ್ಲಿ ನೋಡುಗರ ಕಣ್ಮನ ತಣಿಸುತು. ವರ್ಷಕ್ಕೂಮ್ಮೆ ನಡೆಯುವ ಇಲ್ಲಿಯ ಹನುಮಂತ ದೇವರ ಓಕುಳಿ ನಿಮಿತ್ಯ ಗ್ರಾಮದ ಎಲ್ಲರ ಮನೆ-ಮನಗಳಲ್ಲಿ ಸಂಭ್ರಮ ತುಂಬಿತ್ತು. ಕಡೆ ಓಕುಳಿ ದಿನ ಓಕುಳಿ ಸೋಬಗು ನೋಡಲು ಅಪಾರ ಜನ ಸೇರಿದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 