ಗ್ರಾಮದೇವಿಯ ಭವ್ಯ ರಥೋತ್ಸವ
The grand chariot festival of the village deity
ತಾಳಿಕೋಟಿ 17: ಪಟ್ಟಣದಲ್ಲಿ ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ದ್ಯಾಮವ್ವ ಜಾತ್ರಾ ಮಹೋತ್ಸವದ ಅಂಗವಾಗಿ ಗ್ರಾಮ ದೇವತೆಯ ಭವ್ಯ ರಥೋತ್ಸವ ಶುಕ್ರವಾರ ಅದ್ದೂರಿಯಾಗಿ ಜರುಗಿತು.
ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ತಾಯಿ ದೇವಸ್ಥಾನದಿಂದ ಮುಂಜಾನೆ 11ಘಂಟೆಗೆ ಆರಂಭವಾದ ರಥೋತ್ಸವಕ್ಕೆ ಸ್ಥಳೀಯ ಖಾಸ್ಗತೇಶ್ವರ ಮಠದ ಸಿದ್ದಲಿಂಗ ಮಹಾಸ್ವಾಮಿಗಳು ಚಾಲನೆ ನೀಡಿದರು.
ಅಲ್ಲಿಂದ ಸಕಲ ವಾದ್ಯ ಮೇಳಗಳೊಂದಿಗೆ ಆರಂಭವಾದ ರಥೋತ್ಸವವು ಡಾ.ಅಂಬೇಡ್ಕರ್ ಸರ್ಕಲ್, ಅಂಬಾಭವಾನಿ ದೇವಸ್ಥಾನ ರಸ್ತೆ, ಕತ್ರಿ ಬಜಾರ್ ಮಾರ್ಗವಾಗಿ ದ್ಯಾಮವ್ವ ತಾಯಿಯ ಪ್ರತಿಷ್ಠಾಪನಾ ಸ್ಥಳವಾದ ರಾಜವಾಡೆಗೆ ತಲುಪಿತು. ಅಲ್ಲಿ ಸಕಲ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದ ನಂತರ ಗ್ರಾಮದೇವತೆಯನ್ನು ಪ್ರತಿಷ್ಠಾಪಿಸಲಾಯಿತು.
ಸಾವಿರಾರು ಭಕ್ತರು ಭಾಗವಹಿಸಿ ಪುನೀತರಾದರು. ರಥೋತ್ಸವ ಕಾರ್ಯಕ್ರಮದಲ್ಲಿ ಗ್ರಾಮ ದೇವತೆ ಜಾತ್ರಾ ಮಹೋತ್ಸವ ಕಮಿಟಿ ಪದಾಧಿಕಾರಿಗಳು, ಪಟ್ಟಣದ ಗಣ್ಯರು, ಹಿರಿಯರು ಹಾಗೂ ಅಪಾರ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದ್ದರು. ಜುಲೈ 17 ರಿಂದ 21ರವರೆಗೆ ಐದು ದಿನಗಳ ಕಾಲ ನಡೆಯಲಿರುವ ಈ ಜಾತ್ರೋತ್ಸವದಲ್ಲಿ ಪ್ರತಿದಿನವೂ ವಿಶೇಷ ಕಾರ್ಯಕ್ರಮಗಳು ಜರುಗಲಿವೆ.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 