ದಕ್ಷಿಣಾಭಿಮುಖ ಹನುಮಾನ ಜಯಂತಿಯ ಅದ್ದೂರಿ ಉತ್ಸವ
The grand festival of Hanuman Jayanti facing south
ಬೆಳಗಾವಿ 03 : ತಾಲೂಕಿನ ಪಂತ ಬಾಳೇಕುಂದ್ರಿ ಗ್ರಾಮದಲ್ಲಿರು ದಕ್ಷಿಣಾಭಿಮುಖ ಹನುಮಾನ ಜಯಂತಿ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಚೈತ್ರ ಮಾಸದ ಹುಣ್ಣಿಮೆ ದಿನದಂದು ಹನುಮಂತನ ಜನ್ಮ ದಿನವನ್ನು ಆಚರಿಸಲಾಗುವುದು. ಈ ದಿನ ನಿಮ್ಮ ರಾಶಿಗೆ ಅನುಸಾರವಾಗಿ ಕೆಲವೇ ವಿಶೇಷ ವಸ್ತುಗಳನ್ನು ದಾನ ಮಾಡುವುದರಿಂದ ನಿಮ್ಮ ಅಪೂರ್ಣ ಕೆಲಸಗಳೆಲ್ಲವೂ ಪೂರ್ಣಗೊಳ್ಳುವುದು ಎಂದು ಹೇಳಲಾಗುತ್ತದೆ.ಪ್ರತಿ ವರ್ಷದಂತೆ ಈ ವರ್ಷವೂ ಪೂಜೆ, ಬುಧವಾರ ಸಂಜೆಯಿಂದ ಹನುಮಾನ ಜಯಂತಿ ಭಕ್ತಿಯಲ್ಲಿ ಮೂಳಗಿದ ಭಕ್ತ ಸಾಗರ, ಅರ್ಚನೆ, ಸಂಜೆ ವೇಳೆ ಭಜನಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಗುರುವಾರ ಬೆಳಿಗ್ಗೆ ಸೂರ್ಯೋದಯಕ್ಕೆ ಪೂರ್ವವಾಗಿಯೇ ಜನ್ಮ ತೊಟ್ಟಿಲು ನಾಮಕರಣ, ಅಭಿಷೇಕ, ಹಾಗೂ ವಿಶೇಷ ಪೂಜೆಯನ್ನು ಅರ್ಚಕರುಗಳಾದ ಸುಖದೇವ ಫ. ಬಾಳೇಕುಂದ್ರಿ, ಸುರೇಶ ಯ. ಹತ್ತರವಾಡ ಅವರು ವಿಶೇಷ ಪೂಜೆಗಳನ್ನು ನೆರವೇರಿಸಿದರು. ಬಳಿಕ ಮಧ್ಯಾಹ್ನದ ವೇಳೆ ಸಾರ್ವಜನಿಕರಿಗೆ ಮಹಾ ಪ್ರಸಾದದ ವ್ಯವಸ್ಥೆಗೆ ಪಂತ ಬಾಳೇಕಂದ್ರಿ ಗ್ರಾಮದ ಹಿರಿಯರು ಹಾಗೂ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಬಿ.ಎನ್ ಪಾಟೀಲ ಸೇರಿದಂತೆ ಸುತ್ತಮುತ್ತಲಿನ ಭಕ್ತಾಧಿಗಳು ಸೇರಿ ಮಹಾ ಪ್ರಸಾದಕ್ಕೆ ಚಾಲನೆ ನೀಡಿದರು.
ಈ ಹನುಮಾನ ದೇವಸ್ಥಾನವು ಮೂರು ಗ್ರಾಮಗಳ ಸೀಮೆಯ ಹದ್ದಿನಲ್ಲಿದ್ದು ಬೆಳಗಾವಿ ಗ್ರಾಮೀಣ ಭಾಗದಲ್ಲಿಯೇ ಫೇಮಸ್ ಹನುಮಾನ ದೇವಸ್ಥಾನವೆಂದು ಕರೆಯಲಾಗುತ್ತದೆ. ಪ್ರತಿ ಶನಿವಾರ ಸಾವಿರಾರು ಭಕ್ತರು ದೇವಸ್ಥಾನಕ್ಕೆ ಬಂದು ಭಕ್ತಿಯಿಂದ ಬೇಡಿಕೊಳ್ಳುತ್ತಾರೆ.ಭಕ್ತಿಯಿಂದ ಬೇಡಿಕೊಂಡವರಿಗೆ ಇಷ್ಟಾರ್ಥಗಳು ಈಡೇರುತ್ತವೆ ಎಂಬ ನಂಬಿಕೆ ಪಂತ ಬಾಳೇಕುಂದ್ರಿ ದಕ್ಷಿಣಾಭಿಮುಖ ಹನುಮಾನನ್ನು ನಂಬಿದ ಸಾವಿರಾರು ಭಕ್ತಾಧಿಗಳು ಹೇಳಿಕೊಂಡಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 