ಸಮಾಜದ ಪ್ರಗತಿಗೆ ಕಾರ್ಮಿಕರ ಪರಿಶ್ರಮ ಅಪಾರವಾಗಿದೆ: ವೆಂಕಟೇಶ ದೇಶಪಾಂಡೆ
The hard work of workers for the progress of society is immense: Venkatesh Deshpande
ಲೋಕದರ್ಶನ ವರದಿ
ಕೊಪ್ಪಳ 01: ಸಮಾಜದ ಪ್ರಗತಿಗೆ ಕಾರ್ಮಿಕರ ಪರಿಶ್ರಮ ಅಪಾರವಾಗಿದೆ ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ವೆಂಕಟೇಶ ದೇಶಪಾಂಡೆ ತಿಳಿಸಿದರು. ಶ್ರೀ.ವೀರಭದ್ರೇಶ್ವರ ವಿಕಲಚೇತನರ ಗ್ರಾಮೀಣಾಭಿವೃದ್ಧಿ ವತಿಯಿಂದ ವಿಶ್ವ ಕಾರ್ಮಿಕರ ದಿನಾಚರಣೆ ಅಂಗವಾಗಿ ನಗರದ ಸಂಸ್ಥೆಯ ಯೋಜನಾ ಕಚೇರಿಯಲ್ಲಿ ಕಾರ್ಮಿಕರಿಗೆ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಾರ್ಮಿಕರು ಹಗಲಿರುಳು ಎನ್ನದೇ ನಿರಂತರವಾಗಿ ದುಡಿಯುತ್ತಿದ್ದು ಅವರಿಗೆ ಇನ್ನೂ ಸಾಮಾಜಿಕ ಭದ್ರತೆ ಮತ್ತು ಸೌಲಭ್ಯಗಳು ಸಿಗಬೇಕಿದೆ ಎಂದರು.
ಪ್ರಾಸ್ತಾವಿಕವಾಗಿ ಸಮಾಜ ಕಾರ್ಯಕರ್ತ ಪ್ರಸಾದ್ ಮಾತನಾಡಿ ಕಾರ್ಮಿಕರು ತೆರೆಯ ಹಿಂದಿನ ಹೀರೋಗಳು. ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಮತ್ತು ಉದ್ಯೋಗ ಭದ್ರತೆಯಲ್ಲಿ ಕನಿಷ್ಠ ಸೌಲಭ್ಯಗಳಿದ್ದು ಸರ್ಕಾರ ನೀತಿ ನಿಯಮಗಳಲ್ಲಿ ಬದಲಾವಣೆ ತಂದು ಅವರ ಶ್ರೇಯೋಭಿವೃದ್ಧಿಗೆ ಕಾರ್ಯನಿರ್ವಹಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಕೊಪ್ಪಳ ನಗರಸಭೆ ಪೌರ ಕಾರ್ಮಿಕರಾದ ಶಿವಪ್ಪ ಗಿಣಿಗೇರಿ, ಖಾಸಗಿ ಹೊಟೇಲ್ನ ವಿಕಲಚೇತನ ಮಾಲೀಕರಾದ ಶಿವಣ್ಣ ಹಾಗೂ ವಿಕಲಚೇತನರ ಸಾಧನ ಸಲಕರಣೆಗಳ ತಯಾರಕರಾದ ಬಸವರಾಜ ಕೋಮಾರ ಇವರುಗಳಿಗೆ ಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಈರ್ಪ ಕರೇಕುರಿ, ರಾಜ್ಯ ವಿಕಲಚೇತನರ ಒಕ್ಕೂಟದ ಉಪಾಧ್ಯಕ್ಷ ಮಲ್ಲಿಕಾರ್ಜುನ ಪೂಜಾರ, ಮಂಜುನಾಥ ಹೊಸಕೇರಾ, ವೆಂಕಟೇಶ, ಮಲ್ಲಪ್ಪ ಗುತ್ತಿ, ಯಮನೂರ್ಪ ಕಾಗೇರಿ, ರಾಘವೇಂದ್ರ, ಷಣ್ಮುಖಪ್ಪ ಮತ್ತಿತರರು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 