ಕೆಚ್ಚೆದೆಯ ವೀರ ರಾಯಣ್ಣನ ಸಾಹಸ ಯುವಕರಿಗೆ ಸ್ಫೂರ್ತಿ: ಐ.ಎಸ್. ಪೂಜಾರ್
The heroic exploits of the brave Rayanna are an inspiration to the youth: I.S. Poojar
ಲಕ್ಷ್ಮೇಶ್ವರ 30: ಬ್ರಿಟಿಷರ ಗುಲಾಮಗಿರಿಯ ವಿರುದ್ಧ ಕೆಚ್ಚೆದೆಯಿಂದ ಹೋರಾಡಿ ಹುತಾತ್ಮರಾದ ಕ್ರಾಂತೀವೀರ ಸಂಗೊಳ್ಳಿ ರಾಯಣ್ಣನ ಸಾಹಸ ಮತ್ತು ಹೋರಾಟ ಯುವಕರಿಗೆ ಸ್ಫೂರ್ತಿಯಾಗಿದೆ ಎಂದು ಬಿಜೆಪಿ ಪಕ್ಷದ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಸೇವಾ ಆಕಾಂಕ್ಷಿ ಐ.ಎಸ್. ಪೂಜಾರ್ ಹೇಳಿದರು. ಲಕ್ಷ್ಮೇಶ್ವರ ಪಟ್ಟಣದಲ್ಲಿ ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಜಿಲ್ಲಾ ಹಾಗೂ ತಾಲೂಕು ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಸಂಗೊಳ್ಳಿ ರಾಯಣ್ಣ ಜಯಂತಿಯ ಭವ್ಯ ಡಿಜೆ ಮೆರವಣಿಗೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ವೀರರಾಣಿ ಕಿತ್ತೂರು ಚೆನ್ನಮ್ಮನ ಬಲಗೈ ಬಂಟನಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಸಂಗೊಳ್ಳಿ ರಾಯಣ್ಣನ ಪರಾಕ್ರಮವನ್ನು ಸೂರ್ಯ-ಚಂದ್ರ ಇರುವವರೆಗೂ ಮರೆಯಲು ಸಾಧ್ಯವಿಲ್ಲ ಎಂದರು. ಮೆರವಣಿಗೆಯು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿತು. ಯುವಕರು ಡಿಜೆ ಮೆರವಣಿಗೆಯಲ್ಲಿ ಸಂಭ್ರಮದಿಂದ ಪಾಲ್ಗೊಂಡರು. ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ ಬಸವರಾಜ ಹಿರೇಮನಿ, ಉಪಾಧ್ಯಕ್ಷ ಸುರೇಶ ಹಟ್ಟಿ, ಮಂಜು ಮುಳುಗುಂದ ಸೇರಿದಂತೆ ಪದಾಧಿಕಾರಿಗಳು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 