ಸಮಾನತೆಯ ಹರಿಕಾರ ಬಸವಣ್ಣನವರ ವಿಚಾರಗಳು ಸಾರ್ವಕಾಲಿಕವಾಗಿವೆ. ರಾಜ್ಯ ಗ್ಯಾರಂಟಿ ಅಧ್ಯಕ್ಷ ಎಸ್ ಆರ್ ಪಾಟೀಲ
The ideas of Basavanna, the pioneer of equality, are timeless. State Guarantee President S.R. Patil
ಬ್ಯಾಡಗಿ 21 : ಬಸವಣ್ಣನವರು. ಸಮಾಜದಲ್ಲಿ ಅನ್ಯಾಯ ವಿರುದ್ಧ ಹೋರಾಟ ಮಾಡಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮಾನತೆ ಇದೆಯೆಂದು ಪ್ರತಿಪಾದಿಸಿದ್ದರು. ಆದರೆ, ಸಮಾಜದಲ್ಲಿ ಅಸಮಾನತೆ ಮುಂದುವರಿದಿದೆ. ಎಲ್ಲರೂ ಒಂದಾಗಿ ಅಸಮಾನತೆಯನ್ನು ಹೋಗಲಾಡಿಸಬೇಕಿದೆ’ ಎಂದು ತಿಳಿಸಿದರು.ಪಟ್ಟಣದ ಶ್ರೀ ಬಸವೇಶ್ವರ ವೃತ್ತದಲ್ಲಿ ಇರುವ ಶ್ರೀ ಬಸವೇಶ್ವರ ಮೂರ್ತಿಗೆ ಮಾಲಾರೆ್ಣ ಮಾಡುವ ಮೂಲಕ ಮಾತನಾಡಿದವರು‘ನಾವು ಬಸವಣ್ಣನವರ ತತ್ವ ಹಾಗೂ ಆದರ್ಶಗಳನ್ನು ಮೊದಲು ಅಚ್ಚುಕಟ್ಟಾಗಿ ಪಾಲಿಸಬೇಕಿದೆ. ಅಂದಾಗ ಮಾತ್ರ ನಮ್ಮ ಬದುಕಿಗೆ ಅರ್ಥ ಸಿಗುತ್ತದೆ’ ಎಂದು ಹೇಳಿದರು. ಪುರಸಭೆಯ ಮಾಜಿ ಅಧ್ಯಕ್ಷ ಮುಖಂಡ ಮುರಿಗೆಪ್ಪ ಶೆಟ್ಟರ್ ಮಾತನಾಡಿ, ‘ಬಸವಣ್ಣನವರು 12ನೇ ಶತಮಾನದಲ್ಲಿ ವಚನಗಳ ಮೂಲಕ ಅಸ್ಪೃಶ್ಯತೆಯನ್ನು ಹೋಗಲಾಡಿಸಲಿಕ್ಕೆ ಹೋರಾಟ ಮಾಡಿದರು’ ಎಂದು ಹೇಳಿದರು.
ತಹಶೀಲ್ದಾರ್ ಶಿವಶಂಕರ ನಾಯಕ್ ಮಾತನಾಡಿ‘ಪ್ರಸ್ತುತ ಸಮಾಜದಲ್ಲಿ ಧರ್ಮಗಳ ನಡುವೆ ಅಶಾಂತಿ ಸೃಷ್ಟಿಯಾಗುತ್ತಿದೆ. ದಯವೇ ಧರ್ಮದ ಮೂಲವಯ್ಯ ಎಂಬ ಬಸವಣ್ಣನವರ ತತ್ವ ಪಾಲಿಸಿದರೆ ಸಾಮರಸ್ಯ ಮೂಡುತ್ತದೆ’ ಎಂದು ತಿಳಿಸಿದರು.ಪುರಸಭೆ ಮುಖ್ಯ ಅಧಿಕಾರಿ ವಿನಯ್ ಕುಮಾರ ಹೊಳೆಯಪ್ಪ ಗೋಳ ಮಾತನಾಡಿ‘ಬಸವಣ್ಣನವರ ಸಂದೇಶ ವನ್ನು ನೆನಪು ಮಾಡಿಕೊಳ್ಳಬೇಕು. ಯುವ ಪೀಳಿಗೆಗೆ ತಿಳಿಸುವಂತಹ ಕೆಲಸ ಮಾಡಬೇಕು. ಸಂವಿಧಾನದ ಮುನ್ನಡೆ ನೋಡಿದಾಗ ಬಸವಣ್ಣನವರು ನೆನಪಿಗೆ ಬರುತ್ತಾರೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಗುಡ್ಡಪ್ಪ ಆಡಿನವರ್. ಶಶಿಧರ ಗೊಲ್ಲರಹಳ್ಳಿ ಮಠ. ಮಜೀದ್ ಮುಲ್ಲಾ. ಶಿವಯೋಗಿ ಗಡಾದ. ಗೀರೀಶ್ ಇಂಡಿಮಠ ಹಾಗೂ ಅನೇಕರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 