ಶಿಕ್ಷಕರ ನೇಮಕಾತಿಯ ವಯೋಮಿತಿ ಸಡಿಲಿಕೆ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ನೊಂದ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಬೇಕು
The issue of relaxing the age limit for teacher recruitment must be seriously considered, and justic
ಲೋಕದರ್ಶನ ವರದಿ
ವಿಜಯಪುರ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಕರೆದಿರುವ 15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಅಂಗವಿಕಲ ವಿಧವಾ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಸೇರಿ ಇತರ ಎಲ್ಲ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡದೇ ಲಕ್ಷಾಂತರ ಶಿಕ್ಷಕ ಉದ್ಯೋಗಾಂಕ್ಷಿ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡದಿರುವುದು ಖಂಡನೀಯ ಎಂದು ಕರ್ನಾಟಕ ರಾಜ್ಯ ಪದವಿಧರ ಒಕ್ಕೂಟದ ಅಧ್ಯಕ್ಷ ಲಾಯಪ್ಪ ಇಂಗಳೆ ಹೇಳಿದರು. ಅವರು ವಿಜಯಪುರ ಜಿಲ್ಲಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ಪದವೀಧರ ಒಕ್ಕೂಟದಿಂದ ಶಿಕ್ಷಕರ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆ ಹಾಗೂ ಅಂಗವಿಕಲ ವಿಧವಾ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಹಾಗೂ ಇತರ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ 1 ಹಾಗೂ ಅಂಗವಿಕಲ, ವಿಧವಾ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇತರ ಎಲ್ಲ ವರ್ಗದ ಅಭ್ಯರ್ಥಿಗಳಿಗೆ ಶುಲ್ಕ ರಿಯಾಯ್ತಿಗೆ ಆಗ್ರಹಿಸಿ ಮನವಿ ಸಲ್ಲಿಸಿ ಮಾತನಾಡಿದರು.
ಈಗಾಗಲೇ ಕೆಇಎ ನಡೆಸುತ್ತಿರುವ ವಸತಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರ ನೇಮಕಾತಿಯಲ್ಲಿ ಭೂಮಾಪಕರ ನೇಮಕಾತಿ ಹಾಗೂ ಕೆಪಿಎಸ್ಸಿಯ ಗೆಜಿಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿಯಲ್ಲಿ ವಯೋಮಿತಿಯಲ್ಲಿ ಎಲ್ಲ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದ್ದಾರೆ. ಶಿಕ್ಷಕರ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆ ಏಕೆ ಮಾಡಿಲ್ಲ ಎಂದು ಪ್ರಶ್ನಿಸಿದ ಅವರು ಕೂಡಲೇ ಸರ್ಕಾರ ಶಿಕ್ಷಕರ ನೇಮಕಾತಿಯ ವಯೋಮಿತಿ ಸಡಿಲಿಕೆ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ನೊಂದ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಪದವಿಧರ ಒಕ್ಕೂಟದ ಮುಖಂಡರಾದ ಭೀಮರಾಯ ಢವಳೇಶ್ವರ, ನಾರಾಯಣ ಮುಧೋಳ ಅವರು ಮಾತನಾಡಿ, ರಾಜ್ಯದಲ್ಲಿ ನಡೆಯುತ್ತಿರುವ ಇತರ ಎಲ್ಲ ನೇಮಕಾತಿಗಳಲ್ಲಿ ಎಲ್ಲ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಿ ಸರ್ಕಾರ ಉದ್ಯೋಗ ಆಕಾಂಕ್ಷಿಗಳಲ್ಲಿ ಭರವಸೆ ತುಂಬಿದ್ದು ಶಿಕ್ಷಕರ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆ ನೀಡದೆ ಇರುವುದರಿಂದ ಕಳೆದ 15 ವರ್ಷಗಳಿಂದ ನೇಮಕಾತಿಗಾಗಿ ಕಾಯುತ್ತಿರುವ ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ನಿರಾಸೆ ಉಂಟಾಗಿದೆ.
ಕೂಡಲೇ ನಮ್ಮ ಮನವಿಗೆ ಸ್ಪಂದಿಸಿ ವಯೋಮಿತಿ ಸಡಿಲಿಕೆ ಮಾಡಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಬೇಕೆಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಪದವಿಧರ ಒಕ್ಕೂಟದ ಮುಖಂಡರಾದ ಕಲ್ಲಪ್ಪ ಶಿವಶರಣ ಹಾಗೂ ಚಂದ್ರಶೇಖರ ಹೊಸಮನಿ ಮಾತನಾಡಿ, ಉದ್ಯೋಗಾಂಕ್ಷಿಗಳ ಭವಿಷ್ಯದ ಹಿತ ದೃಷ್ಟಿಯಿಂದ ಸರ್ಕಾರ ಕೂಡಲೇ ಎಲ್ಲ ನೇಮಕಾತಿಗಳಂತೆ ಶಿಕ್ಷಕರ ನೇಮಕಾತಿಯಲ್ಲಿ ಕೂಡಾ ಇತರ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 45 ವರ್ಷ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 48 ವರ್ಷ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಂಗವಿಕಲ ಅಭ್ಯರ್ಥಿಗಳಿಗೆ 50 ವರ್ಷಗಳ ಗರಿಷ್ಠ ವಯೋಮಿತಿ ಸಡಿಲಿಕೆ ಮಾಡಿ ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ಅಧ್ಯಕ್ಷ ವಿನೋದ ಖೇಡ, ಶರಣು ಬಿರಾದಾರ, ಕಾಶೀನಾಥ ಜಾಧವ, ವಿರೇಶ ಗೋಠೆ, ಎನ್.ಡಿ.ಜಾಧವ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 