ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಬದುಕಲು ಬದುಕನ್ನು ರೂಪಿಸಿಕೊಟ್ಟ ದೇವರಾಜ ಅರಸು
The king of Devaraja, who shaped life for even the most marginalized person in society,
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಬದುಕಲು ಬದುಕನ್ನು ರೂಪಿಸಿಕೊಟ್ಟ ದೇವರಾಜ ಅರಸು
ಶಿಗ್ಗಾವಿ 21: ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಬದುಕಲು, ಬದುಕನ್ನು ರೂಪಿಸಿಕೊಟ್ಟ ದೇವರಾಜ ಅರಸು ಅವರ ಆದರ್ಶಗಳು ಇಂದಿಗೂ ಮಾದರಿಯಾಗಿವೆ ಎಂದು ಗ್ಯಾರಂಟಿ ಅಧ್ಯಕ್ಷ ಎಸ್.ಎಫ್.ಮಣಕಟ್ಟಿ ಹೇಳಿದರು. ಪಟ್ಟಣದ ಡಾ. ಬಿ. ಆರ್. ಅಂಬೇಡ್ಕರ್ ಆಡಳಿತ ಸಂಕೀರ್ಣದಲ್ಲಿ ನಡೆದ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪುರಸಭೆ ಶಿಗ್ಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಡಿ. ದೇವರಾಜ ಅರಸು ಅವರ 110 ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಅರಸು ಅವರು ತಮ್ಮ ಆಡಳಿತಾವಧಿಯಲ್ಲಿ ಭೂ ನ್ಯಾಯಮಂಡಳಿ ರಚಿಸುವ ಮೂಲಕ ಬಡವರ ಧ್ವನಿಯಾಗಿ, ಹಿಂದುಳಿದ ವರ್ಗಗಳ ಮಕ್ಕಳನ್ನು ಶೈಕ್ಷಣಿಕವಾಗಿ ಮುನ್ನೆಲೆಗೆ ತರಲು ವಸತಿ ನಿಲಯಗಳನ್ನು ಪ್ರಾರಂಭಿಸುವ ಜೊತೆಗೆ ದೂರದೃಷ್ಟಿಯ ನಿರ್ಧಾರಗಳ ಮೂಲಕ ಕ್ರಾಂತಿಕಾರಿ ಬದಲಾವಣೆಗಳೊಂದಿಗೆ ಇಂದಿನ ಪೀಳಿಗೆಗಳಿಗೆ ಉಸಿರನ್ನು ಕೊಟ್ಟ ಮಹಾನ್ ಚೇತನ ಎಂದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲೂಕು ಅಧಿಕಾರಿ ಇಂದೂಧರ ಮುತ್ತಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ. ಶಿವಪ್ರಕಾಶ್ ಬಳಿಗಾರ ಉಪನ್ಯಾಸ ನೀಡಿ ದಿವಂಗತ ದೇವರಾಜು ಅರಸು ಅವರ ದೂರದೃಷ್ಟಿಯ ಆಡಳಿತದ ನಿರ್ಧಾರಗಳು ಕ್ರಾಂತಿಕಾರಿ ಬದಲಾವಣೆಗೆ ನಾಂದಿಯಾದವು. ಗೇಣಿ ಶಾಸನ, ಹಾವನೂರ ಆಯೋಗದಂತಹ ಪ್ರಮುಖ ನಿರ್ಧಾರಗಳನ್ನು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ತೆಗೆದುಕೊಂಡ ಹಿನ್ನೆಲೆಯಲ್ಲಿ ಅದರ ಪ್ರತಿಫಲ ಇಂದಿನ ಪೀಳಿಗೆಗೆ ಆಗುತ್ತಿದೆ ಎಂದರು. ತಹಸೀಲ್ದಾರ್ ಯಲ್ಲಪ್ಪ ಗೋಣೆಣ್ಣವರ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಂಜುನಾಥ ಸಾಳೊಂಕಿ, ಗುಡ್ಡಪ್ಪ ಜಲದಿ, ಅರುಣ ಹುಡೆದಗೌಡ್ರ, ಡಾ.ಮಲ್ಲೇಶಪ್ಪ ಹರಿಜನ, ಅಶೋಕ ಕಾಳೆ, ಹನುಮಂತಪ್ಪ ಬಂಡಿವಡ್ಡರ, ಫಕ್ಕೀರ್ಪ ಕುಂದೂರ, ಕರೆಪ್ಪ ಕಟ್ಟಿಮನಿ, ಮಲ್ಲಿಕಾರ್ಜುನ ಹಡಪದ, ಎಲ್ಲಪ್ಪ ಹರಿಜನ, ಬಸವರಾಜ ಜೇಕಿನಕಟ್ಟಿ,ಮುತ್ತಣ್ಣ ಗುಡಗೇರಿ, ಮಾನಪ್ಪ ಬಡಿಗೇರ, ಬಸಲಿಂಗಪ್ಪ ನರಗುಂದ ಸೇರಿದಂತೆ ಇತರರಿದ್ದರು. ನಿಲಯ ಪಾಲಕ ರಮೇಶ ಹರಿಜನ ಕಾರ್ಯಕ್ರಮ ನಿರ್ವಹಿಸಿದರು.್ಷ್ಷ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 