ಸಂತ ಸೇವಾಲಾಲರ ಜೀವನ ಸಂದೇಶ ಶಾಂತಿ, ಏಕತೆ ಮತ್ತು ಧರ್ಮನಿಷ್ಠೆಯ ದಾರೀದೀಪ
The life message of Saint Sewalal is a beacon of peace, unity and piety.
ಹಾನಗಲ್ 17: ಸತ್ಯ, ಅಹಿಂಸೆ, ಮಾನವೀಯತೆ, ಸಮಾನತೆ ಮತ್ತು ಭ್ರಾತೃತ್ವದ ಸಂದೇಶ ಸಾರಿದ ಬಂಜಾರ ಸಮುದಾಯದ ಕುಲಗುರು ಸಂತ ಸೇವಾಲಾಲ ಮಹರಾಜರು ಅಂಧಶ್ರದ್ಧೆಗಳ ವಿರುದ್ಧ ಸಮಾಜದಲ್ಲಿ ಜಾಗೃತಿ ಮೂಡಿಸಿದರು ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ಇಲ್ಲಿನ ತಮ್ಮ ಜನಸಂಪರ್ಕ ಕಚೇರಿಯಲ್ಲಿ ನಡೆದ ಸಂತ ಸೇವಾಲಾಲ ಮಹರಾಜರ ಜಯಂತಿಯಲ್ಲಿ ಭಾಗವಹಿಸಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಅವರು ಸೇವಾಲಾಲ ಮಹರಾಜರ ಜೀವನ ಸಂದೇಶ ಸಮಾಜದಲ್ಲಿ ಶಾಂತಿ, ಏಕತೆ ಮತ್ತು ಧರ್ಮನಿಷ್ಠ ಬದುಕಿಗೆ ದಾರೀದೀಪವಾಗಿದೆ. ಯುವ ಸಮುದಾಯದ ಅವರ ಆದರ್ಶಗಳನ್ನು ಅನುಸರಿಸಿ ಶಿಕ್ಷಣ, ಶಿಸ್ತಿನ ಬದುಕು ಹಾಗೂ ಸೇವಾ ಮನೋಭಾವ ಮೈಗೂಡಿಸಿಕೊಳ್ಳಲು ಮುಂದಾಗಬೇಕಿದೆ. ತತ್ವಗಳನ್ನು ಪಾಲಿಸುವುದೇ ಸಂತರು, ಶರಣರು, ಸೂಫಿಗಳಿಗೆ ಸಲ್ಲಿಸುವ ನಿಜವಾದ ಗೌರವ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಂಜು ಗೊರಣ್ಣನವರ, ಹನುಮಂತಪ್ಪ ಮರಗಡಿ, ಕೆಪಿಸಿಸಿ ಸದಸ್ಯ ಟಾಕನಗೌಡ ಪಾಟೀಲ, ಜಿಪಂ ಮಾಜಿ ಸದಸ್ಯ ಮಹದೇವಪ್ಪ ಬಾಗಸರ, ಮುಖಂಡರಾದ ಮಂಜು ಚವ್ಹಾಣ, ರವೀಂದ್ರ ದೇಶಪಾಂಡೆ, ರಫೀಕ್ ಉಪ್ಪುಣಸಿ, ಮಾಲತೇಶ ವಾಲಿಕಾರ, ಪ್ರಕಾಶ ಭಾಗಣ್ಣನವರ, ಆದರ್ಶ ಶೆಟ್ಟಿ, ರಾಮಚಂದ್ರಕಲ್ಲೇರ ಸೇರಿದಂತೆ ಅನೇಕರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 