ದುರದುಂಡಿ ಗ್ರಾಮದಲ್ಲಿ ಬಿಜೆಪಿ ಶಕ್ತಿಕೇಂದ್ರದ ಪ್ರಮುಖರ ಸಭೆ

ಗೋಕಾಕ 30: ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸಕರ್ಾರದ ಸಾಧನೆಗಳನ್ನು ಗಮನಿಸಿ ಬೆಳಗಾವಿ ಲೋಕಸಭಾ ಚುನಾವಣೆಗೆ ಸ್ಪಧರ್ಿಸಿರುವ ಸಂಸದ ಸುರೇಶ ಅಂಗಡಿ ಅವರನ್ನು ಭಾರಿ ಬಹುಮತದಿಂದ ಆಯ್ಕೆ ಮಾಡುವಂತೆ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಕೋರಿದರು.

ಶುಕ್ರವಾರದಂದು ಇಲ್ಲಿಗೆ ಸಮೀಪದ ದುರದುಂಡಿ ಗ್ರಾಮದ ತಾಂಬಡಿ ಅವರ ತೋಟದಲ್ಲಿ ಶಕ್ತಿಕೇಂದ್ರದ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಸಕರ್ಾರ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಳೆದ 15 ವರ್ಷಗಳಿಂದ ಅರಭಾವಿ ಮತಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಪಣತೊಟ್ಟು ನಿರಂತರವಾಗಿ ಜಾತ್ಯಾತೀತವಾಗಿ ಶ್ರಮಿಸುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಅಭಿವೃದ್ಧಿ ಕಾರ್ಯಗಳನ್ನು ಗುಣಗಾನ ಮಾಡಿದ ಅವರು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಸಕರ್ಾರ ರಚನೆಯಾದರೆ ಬಾಲಚಂದ್ರ ಜಾರಕಿಹೊಳಿ ಅವರು ಮತ್ತೇ ಸಚಿವ ಪದವಿಯನ್ನು ಅಲಂಕರಿಸಲಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಸ್ಥಳೀಯ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸಾಧನೆಗಳ ಆಧಾರದ ಮೇಲೆ 4ನೇ ಅವಧಿಗೆ ಸ್ಪಧರ್ಿಸುತ್ತಿರುವ ಸುರೇಶ ಅಂಗಡಿ ಅವರನ್ನು ಬೆಂಬಲಿಸಿ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವಂತೆ ಕೋರಿಕೊಂಡರು.

ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಹಾಗೂ ರಾಜ್ಯ ಬಿಜೆಪಿ ಕಾರ್ಯದಶರ್ಿ ಜಗದೀಶ ಹಿರೇಮನಿ ಮಾತನಾಡಿ, ನರೇಂದ್ರ ಮೋದಿ ಅವರಿಂದ ಮಾತ್ರ ದೇಶದ ಪ್ರಗತಿ ಸಾಧ್ಯ. ಇಡೀ ಜಗತ್ತು ಭಾರತದತ್ತ ನೋಡುತ್ತಿದೆ. ಇದಕ್ಕೆ ಮೋದಿ ಅವರು ಹಾಕಿಕೊಂಡ ಜನಪ್ರೀಯ ಕಾರ್ಯಕ್ರಮಗಳೆ ಕಾರಣವೆಂದು ಹೇಳಿದ ಅವರು, ರಾಜ್ಯದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಬಿಜೆಪಿ ಅಭ್ಯಥರ್ಿಗಳು ಆಯ್ಕೆಯಾಗಲಿದ್ದಾರೆ ಎಂದರು.

ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದಶರ್ಿ ಗೂಳಪ್ಪ ಹೊಸಮನಿ, ಅರಭಾವಿ ಮಂಡಲ ಬಿಜೆಪಿ ಅಧ್ಯಕ್ಷ ಸುಭಾಸ ಪಾಟೀಲ, ಜಿಲ್ಲಾ ಪಂಚಾಯತ ಸದಸ್ಯ ಗೋವಿಂದ ಕೊಪ್ಪದ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ ಮಾದರ,  ಘಯೋನೀಬಮ ಮಂಡಳದ ಅಧ್ಯಕ್ಷ ಅಶೋಕ ಖಂಡ್ರಟ್ಟಿ, ಗ್ರಾಪಂ ಅಧ್ಯಕ್ಷ ಭೀಮಶಿ ಹುಕ್ಕೇರಿ, ಪ್ರಭಾಶುಗರ ಮಾಜಿ ನಿದರ್ೇಶಕ ರಾಮಣ್ಣಾ ಬಂಡಿ, ಮಹಾದೇವ ತಾಂಬಡಿ, ದುಂಡಪ್ಪ ನಿಂಗನ್ನವರ, ನಿಂಗಪ್ಪ ಮಾಳ್ಯಾಗೋಳ, ಸಿದ್ದಪ್ಪ ಅಂತರಗಟ್ಟಿ, ಡಾ.ಶಂಕರ ಗೋರಖನಾಥ, ಸೋಮಯ್ಯಾ ಮಠದ, ಗ್ರಾಪಂ ಸದಸ್ಯರು, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.