ಕಾರ್ಮಿಕರ ಆರೋಗ್ಯ ಸಂರಕ್ಷಣೆಯೇ ಮುಖ್ಯ ಉದ್ದೇಶ : ಸಚಿವ ಎಚ್.ಕೆ.ಪಾಟೀಲ
The main objective is to protect the health of workers: Minister H.K. Patil
ಕಾರ್ಮಿಕರ ಆರೋಗ್ಯ ಸೇವೆಗಾಗಿ ವಾಹನ ಲೋಕಾರ್ಪಣೆ
ಗದಗ 8: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದಲ್ಲಿ ಕಾರ್ಮಿಕ ಸಚಿವರಾದ ಸಂತೋಷ ಲಾಡ್ ಅವರಿಂದ ಕಾರ್ಮಿಕರ ಆರೋಗ್ಯ ರಕ್ಷಣೆ ಆಗುತ್ತಿದೆ. ಕಾರ್ಮಿಕರ ಆರೋಗ್ಯ ರಕ್ಷಣೆಯನ್ನೇ ಮುಖ್ಯ ಗುರಿಯಾಗಿಟ್ಟುಕೊಂಡು ಅವರಿಗೆ ಆರೋಗ್ಯ ಸೇವೆಯನ್ನು ಒದಗಿಸುವುದಕ್ಕಾಗಿ ಈ ವಾಹನವನ್ನು ಲೋಕಾರೆ್ಣಗೊಳಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಗುರುವಾರ ಕಾರ್ಮಿಕ ಇಲಾಖೆಯ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ಒದಗಿಸುವ ವಾಹನವನ್ನು ಲೋಕಾರೆ್ಣಗೊಳಿಸಿ ಅವರು ಮಾತನಾಡಿದರು. ಈ ಹಿಂದೆ ಅರಬೈಲ್ ಶಿವರಾಂ ಹೆಬ್ಬಾರ ಅವರು ಕಾರ್ಮಿಕ ಸಚಿವರಾಗಿದ್ದಾಗ ಕಾರ್ಮಿಕರ ಆರೋಗ್ಯ ಸೇವೆಗಾಗಿ ವಾಹನ ಕುರಿತು ಪ್ರಸ್ತಾವನೆಯನ್ನು ಸಲ್ಲಿಸಿದ್ದು ಅದು ಈಗ ಕಾರ್ಯರೂಪಕ್ಕೆ ಬಂದಿದ್ದು ಅವರಿಗೆ ಈ ಸಂದರ್ಭದಲ್ಲಿ ಧನ್ಯವಾದಗಳನ್ನಪಿಸುತ್ತೇನೆ ಎಂದರು.
ಕಾರ್ಮಿಕರಿಗೆ ಆರೋಗ್ಯ ಸಮಸ್ಯೆ ಉಂಟಾದಲ್ಲಿ ಅವರಿದ್ದ ಕಡೆಗೇ ಈ ವಾಹನವು ಸಂಚರಿಸಿ ಅವರಿಗೆ ಆರೋಗ್ಯ ಸೇವೆ ಒದಗಿಸಲಿದೆ. ಒಂದು ವರ್ಷದಲ್ಲಿ ಅವರು ಗುಣಮಟ್ಟದ ಸುಧಾರಣೆಯಾಗಬೇಕು. ಸರ್ಕಾರದ ಈ ಯೋಜನೆಯ ಸೌಲಭ್ಯವನ್ನು ಎಲ್ಲ ಕಾರ್ಮಿಕರು ಸದುಪಯೋಗಪಡಿಸಿಕೊಳ್ಳಬೇಕೆಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ಹೇಳಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ, ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಗಣ್ಯರಾದ ಸಿದ್ದು ಪಾಟೀಲ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ, ಕಾರ್ಮಿಕ ಇಲಾಖೆಯ ಅಧಿಕಾರಿ ಶ್ರೈಶೈಲ ಸೋಮನಕಟ್ಟಿ, ಯುವಜನ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ ಸೇರಿದಂತೆ ಇತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 