ಗದಗ 25: ಲಿಂಗಾನುಪಾತ ವ್ಯತ್ಯಾಸವಾಗದಂತೆ ಸಮಾನತೆ ಕಾಪಾಡುವದೇ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಜಿ. ಸಲಗರೆ ನುಡಿದರು.
ಗದಗ ಸರಕಾರಿ ಮಹಿಳಾ ಕಾಲೇಜಿನಲ್ಲಿ ಜರುಗಿದ ಬೇಟಿ ಬಚಾವೋ ಬೇಟಿ ಪಡಾವೋ ಜಾಗೃತಿ ಸಪ್ತಾಹದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹೆಣ್ಣು ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಸರಕಾರಗಳು ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು ಅವುಗಳ ಸದುಪಯೋಗ ಪಡಿಸಿಕೊಳ್ಳಬೇಕು. ಇವತ್ತಿನ ಸ್ಪರ್ಧಾತ್ಮಕ ಯುಗದಲ್ಲಿ ಮಹಿಳೆಯರಿಗಾಗಿ ಇರುವಂತಹ ಅವಕಾಶಗಳನ್ನು ಬಳಸಿಕೊಳ್ಳಲು ಪ್ರತಿಯೊಬ್ಬರು ಮುಂದಾಗಬೇಕು ಎಂದು ನುಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಎಚ್.ಎಚ್.ಕುಕನೂರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶೈಲಾ ಕುರಹಟ್ಟಿ, ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಮಂಜುನಾಥ ಬಮ್ಮನಕಟ್ಟಿ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ವಿದ್ಯಾಧರ ದೊಡ್ಡಮನಿ, ಕಾಲೇಜಿನ ಪ್ರಾಚಾರ್ಯ ಡಾ. ಪ್ರಕಾಶ ದೇಶಪಾಂಡೆ, ಉಪನ್ಯಾಸಕರುಗಳಾದ ಅನ್ನಪೂಣರ್ಾ ಗಾಣಿಗೇರ, ಡಾ.ರೂಪಾ ಶ್ರೀನಿವಾಸ, ಶಾಂತಾ ಪೂಜಾರ, ಪ್ರೊ. ಬಡೇಖಾನವರ ಸೇರಿದಂತೆ ಕಾಲೇಜು ಸಿಬ್ಬಂದಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಕಲೇಜು ವಿದ್ಯಾಥರ್ಿನಿಯರು ಕಾರ್ಯಕ್ರಮದಲ್ಲಿ ಉಪ್ಥಿತರಿದ್ದರು.