ಮುಂಬೈ 07: ಆತಿಥೇಯ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ ಸೋತರು ತಂಡದ ನಾಯಕ ವಿರಾಟ್ ಕೊಹ್ಲಿ ಮಾತ್ರ ಹಲವಾರು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.
ಮೊದಲ ಟೆಸ್ಟ್ ಪಂದ್ಯದ ಎರಡೂ ಇನ್ನಿಂಗ್ಸ್ ನಲ್ಲೂ ವಿರಾಟ್ ಕೊಹ್ಲಿ 200ಕ್ಕೂ ಹೆಚ್ಚು ರನ್ ಬಾರಿಸಿದ್ದರು. ಇದೀಗ 200ಕ್ಕೂ ಹೆಚ್ಚು ರನ್ ಅನ್ನು ಹೆಚ್ಚು ಬಾರಿ ಬಾರಿಸಿದ ಭಾರತೀಯ ಆಟಗಾರ ಎಂಬ ಕೀತರ್ಿಗೆ ವಿರಾಟ್ ಕೊಹ್ಲಿ ಭಾಜನರಾಗಿದ್ದಾರೆ.
ಇನ್ನು 67 ಪಂದ್ಯಗಳನ್ನು ಆಡಿರುವ ವಿರಾಟ್ ಕೊಹ್ಲಿ ಕಡಿಮೆ ಪಂದ್ಯಗಳಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ಕೀತರ್ಿಗೆ ಪಾತ್ರರಾಗಿದ್ದಾರೆ. ಇದೇ ವೇಳೆ ಟೀಂ ಇಂಡಿಯಾದ ಮಾಜಿ ಆಟಗಾರರಾದ ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್, ವಿವಿಎಸ್ ಲಕ್ಷ್ಮಣ್, ಸೆಹ್ವಾಗ್ ಮತ್ತು ಸುನೀಲ್ ಗವಾಸ್ಕರ್ ಅಂತಹ ಮಹಾನ್ ಘಟಾನುಗಟಿಗಳನ್ನು ಹಿಂದಿಕ್ಕಿದ್ದಾರೆ.
ಟೆಸ್ಟ್ ಕ್ರಿಕೆಟ್ ನಲ್ಲಿ ಕೊಹ್ಲಿ 11 ಬಾರಿ 200+ ರನ್ ಬಾರಿಸಿದ್ದಾರೆ. ಇನ್ನು ಸಚಿನ್ ಹಾಗೂ ದ್ರಾವಿಡ್ 10 ಬಾರಿ ಈ ಸಾಧನೆ ಮಾಡಿದ್ದು ಎರಡನೇ ಸ್ಥಾನದಲ್ಲಿದ್ದಾರೆ. ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ವೀರೇಂದ್ರ ಸೆಹ್ವಾಗ್ 9 ಬಾರಿ ಈ ಸಾಧನೆ ಮಾಡಿದ್ದಾರೆ.
ಟೆಸ್ಟ್ ಕ್ರಿಕೆಟ್ ನಲ್ಲಿ ಶ್ರೀಲಂಕಾದ ಮಾಜಿ ನಾಯಕ ಕುಮಾರ ಸಂಗಾಕ್ಕರ 17 ಬಾರಿ 200+ ರನ್ ಬಾರಿಸಿ ಮೊದಲ ಸ್ಥಾನದಲ್ಲಿದ್ದಾರೆ. ವೆಸ್ಟ್ ಇಂಡೀಸ್ ನ ಬ್ರಿಯಾನ್ ಲಾರಾ 15, ಆಸ್ಟ್ರೇಲಿಯಾ ಡೊನಾಲ್ಡ್ ಬ್ರಾಡ್ಮನ್ 14 ಹಾಗೂ ರಿಕಿ ಪಾಂಟಿಂಗ್ 13 ಬಾರಿ ಈ ಸಾಧನೆ ಮಾಡಿದ್ದಾರೆ.