ನಗರದಾದ್ಯಂತ ಮಹಾನ್ ಮಾನವತಾವಾದಿ ಜ್ಯೋತಿರಾವ್ ಪುಲೆ ಸ್ಮರಣೆ
The memory of the great humanitarian Jyoti Rao Pule across the city
ಧಾರವಾಡ 28: ಶಿಕ್ಷಣವು ಸಾರ್ವತ್ರಿಕವಾಗಿರಬೇಕು ಮತ್ತು ಎಷ್ಟೇ ಸಂಖ್ಯೆಯಿದ್ದರೂ, ಅದು ಎಲ್ಲರನ್ನೂ ತಲುಪುವಂತೆ ಇರಬೇಕು ಎಂದು ಬಲವಾಗಿ ಪ್ರತಿಪಾದಿಸಿದ ಮಹಾತ್ಮ ಜ್ಯೋತಿಬಾ ಫುಲೆ ಅವರು ಈ ದೇಶದ ಬಡವರಿಂದ ಸುಂಕ ವಸೂಲಿ ಮಾಡುತ್ತಿದ್ದ ಪರಕೀಯ ಬ್ರಿಟಿಷ್ ಸರ್ಕಾರವು ಶಿಕ್ಷಣಕ್ಕೆ ಮತ್ತು ನೀಡುವಂತೆ ಧ್ವನಿ ಎತ್ತಿದರು. ಅಜ್ಞಾನದ ಅಂಧಕಾರವನ್ನು ಹೊಡೆದೋಡಿಸಲು ಮಹಿಳೆ ಮತ್ತು ದಲಿತರಿಗೆ ಜ್ಞಾನದ ಬೆಳಕನ್ನು ನೀಡಲು ಅವರು ಶಾಲೆಗಳನ್ನು ಆರಂಭಿಸಿದರು. ಕೇವಲ ಶಿಕ್ಷಣದಿಂದ ಮಾತ್ರವೇ ಮನುಷ್ಯರು ವಿಮರ್ಶಾತ್ಮಕ ಧೋರಣೆ ಮತ್ತು ಆತ್ಮ ಸಮ್ಮಾನವನ್ನು ಹೊಂದಲು ಸಾಧ್ಯ ಎಂಬುದನ್ನು ಜ್ಯೋತಿಬಾ ಬಲವಾಗಿ ಪ್ರತಿಪಾದಿಸಿದರು ಎಂದು ಎಐಡಿಎಸ್‌ಓ ಜಿಲ್ಲಾ ಕಾರ್ಯದರ್ಶಿ ಶಶಿಕಲಾ ಮೇಟಿ ಹೇಳಿದರು.
ಅವರು ಶಿಕ್ಷಣ ಕ್ರಾಂತಿಕಾರಿ ಹರಿಕಾರ ಮಹಾತ್ಮ ಜ್ಯೋತಿಬಾ ಪುಲೆ ಅವರ ಸ್ಮರಣ ದಿನದ ಅಂಗವಾಗಿ ಇಂದು ಧಾರವಾಡ ಜಿಲ್ಲೆಯ ಕೆಸಿಡಿ ಮೈದಾನ, ಆರ್ ಎನ್ ಶೆಟ್ಟಿ ಮೈದಾನ, ಸೇರಿದಂತೆ ಹಲವಾರು ಶಾಲಾ-ಕಾಲೇಜುಗಳಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇಂದು ಕರ್ನಾಟಕ ರಾಜ್ಯ ಸರ್ಕಾರವು ಕೆಪಿಎಸ್ ಮ್ಯಾಗ್ನೆಟ್ ಶಾಲೆ ಯೋಜನೆಯಡಿ 40,000ಕ್ಕೂ ಅಧಿಕ ಶಾಲೆಗಳನ್ನು ಮುಚ್ಚಲು ಹೊರಟಿದೆ. ಸಮೂಹ ಶಿಕ್ಷಣಕ್ಕಾಗಿ ತೆರೆದ ಹಳ್ಳಿಯ ಶಾಲೆಗಳನ್ನು ಮುಚ್ಚಿ, ಕೇವಲ ಗ್ರಾಮ ಪಂಚಾಯಿತಿಗೆ ಒಂದರಂತೆ ಆರಂಭವಾಗಲಿರುವ ಈ ಮ್ಯಾಗ್ನೆಟ್ ಶಾಲೆಗಳಡಿ ವೀಲೀನಗೊಳಿಸಲಾಗುತ್ತದೆ. ವಿದೇಶಿ ಬ್ಯಾಂಕಿನಿಂದ ಸಾಲ ಪಡೆದು ಮೊದಲ ಹಂತದಲ್ಲಿ, 800 ಶಾಲೆಗಳನ್ನು ಮ್ಯಾಗ್ನೆಟ್ ಶಾಲೆಗಳು ಎಂದು ಗುರುತಿಸಲಾಗಿದೆ. ಅಂದರೆ ಕರ್ನಾಟಕ ಪಬ್ಲಿಕ್ ಶಾಲೆಯ ಸುತ್ತಮುತ್ತಲಿನ 6ರಿಂದ 7ಕಿ.ಮೀ ವ್ಯಾಪ್ತಿಯ ಶಾಲೆಗಳನ್ನು ತನ್ನಲ್ಲಿ ವೀಲೀನಗೊಳಿಸಿಕೊಳ್ಳಲಿದೆ.
ಕೇವಲ ಕೆಪಿಎಸ್ ಶಾಲೆಯಿಂದ ಸಮಸ್ಯೆಯಿಲ್ಲ. ಆದರೆ ಕೇವಲ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ತೆರೆಯುವ ಕೆಪಿಎಸ್- ಮ್ಯಾಗ್ನೆಟ್ ಶಾಲೆ ಅತ್ಯಂತ ಅಪಾಯಕಾರಿಯಾಗಿದೆ. ಏಕೆಂದರೆ, ಕರ್ನಾಟಕದಲ್ಲಿ ಒಟ್ಟು 49,600 ಸರ್ಕಾರಿ ಶಾಲೆಗಳಿದೆ. ರೂ.30,000 ಗ್ರಾಮಗಳಿರುವ ನಮ್ಮ ರಾಜ್ಯದಲ್ಲಿ ಕೇವಲ 5,900 ಗ್ರಾಮ ಪಂಚಾಯಿತಿಗಳಿದೆ. ಸರ್ಕಾರದ ಯೋಜನೆಯ ಪ್ರಕಾರ ರಾಜ್ಯದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಸೇರಿದಂತೆ 5,900 ಶಾಲೆಗಳು ಮಾತ್ರ ಉಳಿಯುತ್ತದೆ.
ಶೋಷಿತರ ಮಕ್ಕಳಿಗೆ ಶಿಕ್ಷಣವನ್ನು ಒದಗಿಸುವುದು ಸ್ವಾತಂತ್ರ್ಯಾನಂತರ ಗದ್ದುಗೆ ಏರಿರುವ ಈ ನೆಲದ ಸರ್ಕಾರಗಳ ಆದ್ಯ ಕರ್ತವ್ಯವಲ್ಲವೆ!? ಆನರ ತೆರಿಗೆಯ ಮೇಲೆ ನಡೆಯುವ ಸರ್ಕಾರಗಳೇ ಶಿಕ್ಷಣದ ಮಾರಾಟಕ್ಕೆ ನಿಂತಿರುವೆ. ಮಹಾತ್ಮ ಜ್ಯೋತಿಬಾ ನಮ್ಮನ್ನಗಲಿ 135 ವರ್ಷಗಳಾದರೂ ಈ ನೆಲದ ಬಡವರ ಮಕ್ಕಳಿಗೆ ಶಿಕ್ಷಣವು ಗಗನ ಕುಸುಮವಾಗಿದೆ! ಸಾವಿರಾರು
ಶಾಲೆಗಳನ್ನು ಮುಚ್ಚುತ್ತಿರುವ ಸರ್ಕಾರದ ನೀತಿಯ ವಿರುದ್ಧ ನಾವೆಲ್ಲರೂ ಧ್ವನಿ ಎತ್ತಬೇಕಾಗಿದೆ ಎಂದು ಕರೆ ನೀಡಿದರು. ಜಿಲ್ಲಾ ಕಛೇರಿ ಕಾರ್ಯದರ್ಶಿ ಸ್ಫೂರ್ತಿ ಚಿಕ್ಕಮಠ, ಕಾರ್ಯಕರ್ತರಾದ ಸಿದ್ದು, ರವಿ ಹಾಗೂ ನೂರಾರು ವಿದ್ಯಾರ್ಥಿಗಳು, ಜನಸಾಮಾನ್ಯರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 