ಸಚಿವರ ಖಾತೆ ಪಟ್ಟಿ ಸಿದ್ಧವಾಗಿದ್ದು, ರಾಜಭವನಕ್ಕೆ ಕಳುಹಿಸುತ್ತೇನೆ:ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು,ಫೆ 10 :   ನೂತನ ಸಚಿವರಿಗೆ ಖಾತೆ ಹಂಚಿಕೆ ಪಟ್ಟಿ ಸಿದ್ಧವಾಗಿದ್ದು ಪಟ್ಟಿಯನ್ನು ರಾಜಭವನಕ್ಕೆ ಕಳುಹಿಸುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.  

ವಿಧಾನ ಸೌಧದಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯ ಅವರ 112ನೇ  ಜನ್ಮದಿನ ಹಿನ್ನೆಲೆ ಕೆಂಗಲ್ ಪ್ರತಿಮೆಗೆ ಯಡಿಯೂರಪ್ಪ ಪುಷ್ಪಾರ್ಚನೆ ಮಾಡಿದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನೂತನ ಸಚಿವರ ಖಾತೆ ಪಟ್ಟಿ ಸಿದ್ಧವಾಗಿದೆ.ಈಗ ರಾಜಭವನಕ್ಕೆ ಪಟ್ಟಿ ಕಳುಹಿಸುತ್ತೇನೆ ಎಂದು ತಿಳಿಸಿದರು.  

ದಿವಂಗತ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಭಾರತ ಕಂಡ ಅತ್ಯಂತ ಮುತ್ಸದ್ದಿ ನಾಯಕ. ಕರ್ನಾಟಕ ಏಕೀಕರಣದಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಗ್ರಾಮೀಣ ಪ್ರದೇಶದ ಜನರು ಹಾಗೂ ದುರ್ಬಲ ಜನರ ಸುಧಾರಣೆಗೆ ಶ್ರಮಿಸಿದ್ದರು ಎಂದು ಅವರನ್ನು ಸ್ಮರಿಸಿದರು.