ಬೆಂಗಳೂರು, ಮಾರ್ಚ್ 26, ಕೋವಿಡ್ -19 ಸೋಂಕು ಹರಡುವಿಕೆ ನಿಯಂತ್ರಿಸುವ ಪ್ರಯತ್ನವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಎಲ್ಲಾ ಸಚಿವ ಸಂಪು ಸಹೋದ್ಯೋಗಿಗಳಿಗೆ ಆಯಾ ಜಿಲ್ಲೆಗಳಲ್ಲೇ ಉಳಿಯುವಂತೆ ಸೂಚಿಸಿದ್ದರೆ. ಇಡೀ ದೇಶ ಲಾಕ್‍ಡೌನ್(ಸಂಪೂರ್ಣ ಸ್ತಬ್ಧ)ನಲ್ಲಿರುವಾಗ ತಮ್ಮನ್ನು ಭೇಟಿ ಮಾಡುವುದಕ್ಕಾಗಲಿ ಇಲ್ಲವೇ ಬೇರೆ ಇನ್ಯಾವುದೇ ಉದ್ದೇಶಕ್ಕೂ ಬೆಂಗಳೂರಿಗೆ ಬರಬಾರದು ಎಂದು ಯಡಿಯೂರಪ್ಪ ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ. ಮುಖ್ಯಮಂತ್ರಿವರನ್ನು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಲು ಯಾವುದೇ ಸಾರ್ವಜನಿಕರಿಗೂ ಅವಕಾಶ ನೀಡಲಾಗಿಲ್ಲ. ಮುಖ್ಯಮಂತ್ರಿಯವರ ಕಚೇರಿಯ ಸೂಚನೆಗಳಂತೆ ಪಕ್ಷದ ಯಾವುದೇ ಮುಖಂಡರನ್ನೂ ಸಹ ಅವರ ನಿವಾಸದಲ್ಲಿ ಭೇಟಿಯಾಗಲು ಅವಕಾಶ ನೀಡದಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ.