ದೇವರ ದಾಸಿಮಯ್ಯರ ಕಾಯಕ ಮಾದರಿ: ತಡವಲ

The model of the work of God's handmaidens: Tadavala

ದೇವರ ದಾಸಿಮಯ್ಯರ ಕಾಯಕ ಮಾದರಿ: ತಡವಲ  


ದೇವರಹಿಪ್ಪರಗಿ 2 : ಸದಾ ಕಾಲ ಬಟ್ಟೆ ನೇಯುವ ಕಾಯಕ ಮಾಡುತ್ತಾ ಅದರಲ್ಲೇ ಭಗವಂತನನ್ನು ಕಾಣುತ್ತಿದ್ದ ದೇವರ ದಾಸಿಮಯ್ಯರ ಕಾಯಕ ನಿಷ್ಠೆ ಎಲ್ಲರಿಗೂ ಮಾದರಿ ಎಂದು ಬಸವಶರಣ ಸಂಸ್ಥೆ ತಾಲೂಕು ಘಟಕದ ಅಧ್ಯಕ್ಷರಾದ ಸಂಗಪ್ಪ ತಡವಲ ಹೇಳಿದರು. ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ತಾಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ನಿಷ್ಕಳಂಕ ಬದುಕು ರೂಪಿಸಿಕೊಂಡಿದ್ದ ದಾಸಿಮಯ್ಯರವರು ಕಾಯಕ ನಿಷ್ಠೆ ಮಾತ್ರವಲ್ಲ, ಸಮಾಜದಲ್ಲಿ ಸಮಾನತೆ ತರುವುದಕ್ಕಾಗಿ ಹೋರಾಡಿದರು. ಶರಣರಲ್ಲಿ ಪ್ರಥಮವಾಗಿ ವಚನಗಳನ್ನು ರಚಿಸಿದವರು ದೇವರ ದಾಸಿಮಯ್ಯ. ಅನಂತರ ಬಂದ ಶರಣರ ವಚನಗಳಲ್ಲೂ ವಚನಗಳ ಗಾಢ ಪ್ರಭಾವವನ್ನು ಕಾಣಬಹುದು ಎಂದು ಹೇಳಿದರು. ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದಲ್ಲಿ ವಚನಕಾರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ತಹಶೀಲ್ದಾರ್ ಪ್ರಕಾಶ ಸಿಂದಗಿ ಅದ್ಯ ವಚನಕಾರರಾದ ದೇವರ ದಾಸಿಮಯ್ಯ 12ನೇ ಶತಮಾನದಲ್ಲಿಯೇ ನೂರಾರು ವಚನಗಳನ್ನು ಬರೆದಿದ್ದಾರೆ ಅವುಗಳ ತಿರುಳನ್ನು ಅರ್ಥ ಮಾಡಿಕೊಂಡು ನಾವು ಜೀವನವನ್ನು ಸಾಗಿಸಿದರೆ ಜಯಂತಿ ಅಚರಣೆ ಅರ್ಥಪೂರ್ಣವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಪ್ರಾಸ್ತಾವಿಕವಾಗಿ ಕಂದಾಯ ಶಿರಸ್ತೇದಾರ ಸುರೇಶ ಮ್ಯಾಗೇರಿ ಮಾತನಾಡಿ ಎಲ್ಲರನ್ನು ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಪಟ್ಟಣದ ಪ್ರಮುಖರು ಗಣ್ಯರು ಸಮುದಾಯದ ಮುಖಂಡರು ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.