ಮನುಸ್ಮೃತಿ ದಹಿಸಿ ಹೋರಾಟಕ್ಕೆ ದಿಕ್ಕು ತೋರಿಸಿದ್ದ ಕ್ಷಣ
The moment when Manusmriti was burnt and the struggle was shown the direction
ಕಂಪ್ಲಿ 25 : 1927ರ ಡಿಸೆಂಬರ್ 25ರಂದು ಡಾ. ಬಿ.ಆರ್. ಅಂಬೇಡ್ಕರ್ ಅವರು ಸಾರ್ವಜನಿಕವಾಗಿ ಮನುಸ್ಮೃತಿ ದಹಿಸಿದ ದಿನದ ಸ್ಮರಣಾರ್ಥ ದಲಿತ ಪ್ರಗತಿಪರ ಸಂಘಟನೆಯ ಪದಾಧಿಕಾರಿಗಳು ಪಟ್ಟಣದ ಅಂಬೇಡ್ಕರ್ ವೃತ್ತದದಲ್ಲಿ ಗುರುವಾರ ಮನುಸ್ಮೃತಿ ದಹನ ದಿನ ಆಚರಿಸಿದರು.ನಂತರ ಮುಖಂಡ ಬಿ.ಲಕ್ಷ್ಮಣ ಮಾತನಾಡಿ, ಅಂಬೇಡ್ಕರ್ ಅವರು ಮನುಸ್ಮೃತಿ ದಹಿಸಿದ ಐತಿಹಾಸಿಕ ಘಟನೆಗೆ ಇಂದಿಗೆ 98 ವರ್ಷಗಳು ಪೂರ್ಣಗೊಂಡಿವೆ. ಶ್ರೇಣಿಕೃತ ಜಾತಿ ವ್ಯವಸ್ಥೆ, ಅಸ್ಪೃಶ್ಯತೆ, ಲಿಂಗಭೇದ, ಮಹಿಳೆಯರ ಮೇಲಿನ ದಬ್ಬಾಳಿಕೆ, ಸತಿ ಸಹಗಮನ, ಬಾಲ್ಯ ವಿವಾಹ, ದೇವದಾಸಿ ಪದ್ಧತಿ ಸೇರಿದಂತೆ ಅನಿಷ್ಠ ಸಾಮಾಜಿಕ ಪದ್ಧತಿಗಳ ಮೂಲವಾಗಿದ್ದ ಮನುಸ್ಮೃತಿಯನ್ನು ದಹಿಸಿ ಸಮಾನತೆ, ಸ್ವಾತಂತ್ರ ಹಾಗೂ ಭಾತೃತ್ವದ ಹೋರಾಟಕ್ಕೆ ದಿಕ್ಕು ತೋರಿಸಿದ್ದರು ಎಂದರು.
ಸಣಾಪುರ ಮರಿಸ್ವಾಮಿ ಮಾತನಾಡಿ, ಮೇಲು-ಕೀಳು, ಸ್ಪೃಶ್ಯ-ಅಸ್ಪೃಶ್ಯ, ಜಾತಿ ಹಾಗೂ ಲಿಂಗ ತಾರತಮ್ಯ ಮಾಡುವ, ದಲಿತ, ಹಿಂದುಳಿದ ಹಾಗೂ ಶೂದ್ರ ಸಮುದಾಯಗಳ ವಿರೋಧಿಯಾದ ‘ಮನುಸ್ಮೃತಿ ಸಮಾನತೆಗೆ ವಿರುದ್ಧವಾಗಿದೆ. ಎಲ್ಲರೂ ಎಚ್ಚೆತ್ತುಕೊಂಡು ಸಂವಿಧಾನವನ್ನು ಉಳಿಸಿ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯುವಂತಹ ಕೆಲಸ ಮಾಡೋಣ ಎಂದು ಹೇಳಿದರು.ಈ ಸಂದರ್ಭದಲ್ಲಿ ಮುಖಂಡರಾದ ವಸಂತರಾಜ್ ಕಹಳೆ, ಡಿ.ಬಸವರಾಜ, ಪುಟಾಣಿ ಅಂಜಿನಪ್ಪ, ರವಿ ಮಣ್ಣೂರು, ಅಕ್ಕಿ ಜಿಲಾನ್, ಮೆಟ್ರಿ ಬಸಪ್ಪ, ರಾಮಸಾಗರ ಬಸಪ್ಪ, ಸಣಾಪುರ ದುರುಗಪ್ಪ, ಯಲ್ಲಪ್ಪ, ಧನಕಾಯಿ ಬಸವರಾಜ, ಪುರುಷೋತ್ತಮ ಸೇರಿದಂತೆ ಅನೇಕರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 