ಅಫ್ಘಾನಿಸ್ತಾನದಲ್ಲಿ ಕೊರೊನಾ ಪೀಡಿತರ ಸಂಖ್ಯೆ 20 ಸಾವಿರಕ್ಕೂ ಹೆಚ್ಚು

ನವದೆಹಲಿ, ಜೂನ್ 7, ಅಫ್ಘಾನಿಸ್ತಾನದಲ್ಲಿ 791 ಕೊರೊನಾ ವೈರಸ್ “ಕೋವಿಡ್-19” ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 20,345 ಕ್ಕೆ ತಲುಪಿದೆ ಎಂದು ಆರೋಗ್ಯ ಸಚಿವಾಲಯ ಭಾನುವಾರ ದೃಢಪಡಿಸಿದೆ."ಕಳೆದ 24 ಗಂಟೆಗಳಲ್ಲಿ ಒಟ್ಟು 1,427 ಪರೀಕ್ಷೆಗಳನ್ನು ನಡೆಸಲಾಗಿದ್ದು, ಅದರಲ್ಲಿ 791 ಜನರಲ್ಲಿ ಸೋಂಕು ದೃಢಪಟ್ಟಿದೆ" ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.ಈ ಅವಧಿಯಲ್ಲಿ ಮೂವತ್ತು ಕೊರೊನಾ ರೋಗಿಗಳು ಸಾವನ್ನಪ್ಪಿದ್ದು, ದೇಶದಲ್ಲಿ ಸಾಂಕ್ರಾಮಿಕ ರೋಗದಿಂದ ಸಾವನ್ನಪ್ಪಿದವ ಸಂಖ್ಯೆ 357 ಕ್ಕೆ ತಲುಪಿದೆ. ಶನಿವಾರದ ಒಟ್ಟು 45 ಜನರು ಚೇತರಿಸಿಕೊಂಡಿದ್ದು, ಒಟ್ಟು ಗುಣಮುಖರಾದ ರೋಗಿಗಳ ಸಂಖ್ಯೆ 1,875 ಕ್ಕೆ ತಲುಪಿಸಲಾಗಿದೆ.