ನವದೆಹಲಿ, ಜೂ 22,ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿನ 14.821 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 445 ಮಂದಿ ಮೃತಪಟ್ಟಿದ್ದಾರೆ. ಇದು ಇದುವರೆಗೆ ಒಂದು ದಿನದಲ್ಲಿ ದಾಖಲಾದ ಅತಿ ಹೆಚ್ಚಿನ ಪ್ರಕರಣವಾಗಿವೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 4.25 ಲಕ್ಷಕ್ಕೇರಿಕೆಯಾಗಿದೆ. ದೇಶದಲ್ಲಿ ಒಟ್ಟು 13,699 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಆದರೆ, ದೇಶದಲ್ಲಿ ಚೇತರಿಕೆಯ ಪ್ರಮಾಣ ಕೂಡ ಏರಿಕೆಯಾಗುತ್ತಿದ್ದು, ಶೇ.55.77ರಷ್ಟಿದೆ. ಇಲ್ಲಿಯವರೆಗೆ 2,37,195 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ ದೇಶದಲ್ಲಿ 1,74,384 ಸಕ್ರಿಯ ಕೋವಿಡ್ ಪ್ರಕರಣಗಳಿವೆ.