ನವದೆಹಲಿ, ಏ 30, ದೇಶಾದ್ಯಂತ ಮಾರಕ ಕೊರೊನಾ ಹಾವಳಿ ತಲ್ಲಣ ಸೃಷ್ಟಿಸಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 1718 ಹೊಸ ಪ್ರಕರಣ ವರದಿಯಾಗಿದೆ .ಇನ್ನು ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 33,ಸಾವಿರಕ್ಕೆ ಏರಿಕೆಯಾಗಿದೆ. ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳಿಗ್ಗೆ ಬಿಡುಗಡೆ ಮಾಡಲಾದ ಮಾಹಿತಿ ತಿಳಿಸಿದೆ. ಇನ್ನು ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 33,050ಕ್ಕೆ ಏರಿಕೆಯಾಗಿದ್ದು, ಈ ಪೈಕಿ 8325 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಮನೆಗೆ ಹಿಂತಿರುಗಿದ್ದಾರೆ. ಇನ್ನು ಮಾರಕ ಕೊರೊನಾಗೆ ಈವರೆಗೆ 1074 ಮಂದಿ ಬಲಿಯಾಗಿದ್ದು, ಸದ್ಯ 23,651 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.