ಯಾದಗಿರಿಯಲ್ಲಿ ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆ

ಯಾದಗಿರಿ, ಮೇ 18, ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10ಕ್ಕೆ‌ ಏರಿಕೆ ಆಗಿದೆ.ಸೋಮವಾರ  ಮಧ್ಯಾಹ್ನದವರೆಗೆ ಓರ್ವ ಮಹಿಳೆ ಸೇರಿ ಮತ್ತೆ ಐದು ಜನರಿಗೆ ಕೊರೊನಾ ಸೋಂಕು  ದೃಢಪಟ್ಟಿದ್ದು, ಇದರಿಂದ ಕೋವಿಡ್-19 ಸೋಂಕಿತರ ಸಂಖ್ಯೆ 10ಕ್ಕೆ ಏರಿದೆ ಎಂದು ಅಪರ  ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್ ತಿಳಿಸಿದ್ದಾರೆ.25  ವರ್ಷದ ಮಹಿಳೆ (ರೋಗಿ ಸಂಖ್ಯೆ -1188), 25 ವರ್ಷದ ಪುರುಷ (ರೋಗಿ ಸಂಖ್ಯೆ-1189), 30  ವರ್ಷದ ಪುರುಷ (ರೋಗಿ ಸಂಖ್ಯೆ-1190), 15 ವರ್ಷದ ಯುವಕ (ರೋಗಿ ಸಂಖ್ಯೆ-1191) ಮತ್ತು  30 ವರ್ಷದ ಪುರುಷ (ರೋಗಿ ಸಂಖ್ಯೆ-1192) ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ ಎಂದರು.ಇವರೆಲ್ಲರೂ  ಮಹಾರಾಷ್ಟ್ರದ ಮುಂಬೈನಿಂದ ಯಾದಗಿರಿ ಜಿಲ್ಲೆಗೆ ಆಗಮಿಸಿದ್ದರು. ಸೋಂಕು ದೃಢಪಟ್ಟ  ಹಿನ್ನೆಲೆಯಲ್ಲಿ  ಯಾದಗಿರಿಯ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ  ನೀಡಲಾಗುತ್ತಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.