ಬೆಳಗಾವಿ, ಮೇ 7,ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಮೂಲಕ ಗುರುವಾರ ಸೋಂಕಿತರ ಸಂಖ್ಯೆ 74ಕ್ಕೆ ಏರಿಕೆ ಆಗಿದೆ.ಗುರುವಾರ ಮತ್ತೆ ಒಬ್ಬರಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆ ಸ್ಪಷ್ಟಪಡಿಸಿದೆ.ಈ ಒಂದು ಹೊಸ ಪ್ರಕರಣ ಸೇರಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟಾರೆ 74 ಕ್ಕೆ ಏರಿದಂತಾಗಿದೆ. ರೋಗಿ ಸಂಖ್ಯೆ 364ರ ಸಂಪರ್ಕದಲ್ಲಿ ಬಂದಿದ್ದ 13 ವರ್ಷದ ( ರೋಗಿ ಸಂಖ್ಯೆ-700) ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿಯ ಓರ್ವ ಬಾಲಕಿಯಲ್ಲಿ ಸೋಂಕು ತಗುಲಿದೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟಾರೆ ಒಟ್ಟು 74 ಪ್ರಕರಣಗಳು ದೃಢಪಟ್ಟಿದ್ದು, 34 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಓರ್ವರು ಮೃತಪಟ್ಟಿದ್ದಾರೆ.