ಸಾಧನೆಯ ಹಾದಿ ಸುಗಮವಲ್ಲ: ಸಾಹಿತಿ ಸಂಕಣ್ಣನವರು
The path to success is not easy: Writer Sankannanavar
ಬ್ಯಾಡಗಿ 24: ಸಾಧನೆಯ ಹಾದಿ ಸುಗಮವಲ್ಲ. ಛಲವಿದ್ದವರೆ ಮಾತ್ರ ಆ ಹಾದಿಯಲ್ಲಿ ಸಾಗಲು ಸಾಧ್ಯ. ನಮ್ಮ ಕ್ರಿಯೆಗಳಿಗೆ ಪೂರಕವಾಗಿ ಪ್ರತಿಕ್ರಿಯೆ ಇರುತ್ತದೆ. ಅದೇ ರೀತಿ ನಾವು ಅಪೇಕ್ಷೆ ಪಟ್ಟಂತ ಫಲಿತಾಂಶವನ್ನು ಪಡೆಯಲು ಅತೀ ವೇಗವಾಗಿ ಸಾಧನೆಯ ಹಾದಿಯಲ್ಲಿ ಸಾಗಬೇಕಾಗಿದೆ ಎಂದು ಸಾಹಿತಿ ಸಂಕಮ್ಮ ಸಂಕಣ್ಣನವರು ಹೇಳಿದರು.ಅವರು ಪಟ್ಟಣದ ಎಸ್‌ಎಸ್‌ಪಿಎನ್ ಶಾಲೆಯಲ್ಲಿ ಪ್ರಸಕ್ತ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ 2000, 2001ನೇ ಸಾಲಿನ ವತಿಯಿಂದ ನೀಡಲ್ಪಡುವ ಗುರುವಂದನಾ ಪುರಸ್ಕಾರ ಕಾರ್ಯಕ್ರಮವನ್ನುದ ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪ್ರತಿಭೆ ಎಲ್ಲರಲ್ಲೂ ಇದೆ. ಆದರೆ ಈಗಿನ ಆಧುನಿಕ ಜಗತ್ತಿನಲ್ಲಿ ಸ್ಪರ್ಧೆ ಅನಿವಾರ್ಯ. ಇವೆರಡರ ನಡುವೆ ಸಾಮಾಜಿಕ ಜವಾಬ್ದಾರಿಯ ಜೊತೆಗೆ ಹೊಂದಾಣಿಕೆ ಮಾಡಿಕೊಂಡು ಹೋದರೆ ಮಾತ್ರ ಯಶಸ್ಸು ನಿಶ್ಚಿತ ಎಂದು ಹೇಳಿದರು.ಶಾಲೆಯ ಅಧ್ಯಕ್ಷರಾದ ಸಿ ಕೆ ಶೆಟ್ಟರ್ ಮಾತನಾಡಿ ಮಾಡುವ ಕೆಲಸದಲ್ಲಿ ಶ್ರದ್ಧೆ,ನಿಷ್ಠೆ ಮತ್ತು ನೈತಿಕ ಮೌಲ್ಯ ಇರಬೇಕು. ಮರಳಿ ಯತ್ನವ ಮಾಡು ಎಂಬ ಮಾತಿನಂತೆ ನಿರಂತರ ಪ್ರಯತ್ನದಿಂದ ಮಾತ್ರ ಯಶಸ್ಸು ಸಿಗಬಲ್ಲದು. ಅದರ ಜೊತೆಗೆ ಜೀವನದ ಸವಾಲನ್ನು ಎದುರಿಸುವ ಶಕ್ತಿ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು. ಸಾಧನೆಯ ಮೆಟ್ಟಿಲನ್ನು ಏರುವ ತುಡಿತ ನಮ್ಮಲ್ಲಿರಬೇಕು. ನಮ್ಮ ಸಾಧನೆ ಮುಂದಿನ ಜನಾಂಗಕ್ಕೆ ಪ್ರೇರಣೆಯಾಗಬೇಕು. ಎಂದು ಹೇಳಿದರು.ಈ ವೇಳೆ ಶಾಲೆ ಮುಖ್ಯಸ್ಥರಾದ ಎಸ್ ಸಿ ಎಲಿ ಗುರುಗಳು ಮಾತನಾಡಿ ನಮ್ಮ ಶಾಲೆಯ 2000 2001ನೇ ಸಾಲಿನಲ್ಲಿ ಕಲಿತ ವಿದ್ಯಾರ್ಥಿಗಳು ಗುರುವಂದನ ಕಾರ್ಯಕ್ರಮವನ್ನು ಮಾಡಿ ಅದರ ಉಳಿದ ದುಡ್ಡಿನಿಂದ ಪ್ರತಿ ವರ್ಷ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಗುರುವಂದನ ಪುರಸ್ಕಾರ ಎಂಬ ಪ್ರತಿಯನ್ನು ನೀಡುವುದಲ್ಲದೆ ಅವರಿಗೆ ನಗದು ರೂಪದಲ್ಲಿ ಅವರ ಮುಂದಿನ ಭವಿಷ್ಯಕ್ಕಾಗಿ ಪುರಸ್ಕಾರವನ್ನು ಮಾಡುತ್ತಾರೆ ಇದು ನಮಗೆ ಹೆಮ್ಮೆಯ ಸಂಗತಿ ಎಂದರು.
ಪ್ರಸಕ್ತ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶಾಲೆಯ ವಿದ್ಯಾರ್ಥಿ ಪ್ರವೀಣ್ ಸಂಕಣ್ಣನವರ್ 84ಅ ರಷ್ಟು ಅಂಕವನ್ನು ಪಡೆದಿದ್ದು ಮತ್ತು ಇನ್ನೊಬ್ಬ ವಿದ್ಯಾರ್ಥಿನಿ ಕಾವ್ಯ ಹಳೆ ರೀತಿ ಇವಳು ಸರಿಸುಮಾರು 83ಅ ರಷ್ಟು ಅಂಕ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ ಇವರಿಬ್ಬರಿಗೂ ಗೌರವಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರವನ್ನು ನೀಡಲಾಯಿತು.
ಈ ಸಂದರ್ಭದಲ್ಲಿ 2000.01 ಸಾಲಿನ ವಿದ್ಯಾರ್ಥಿಗಳಾದ ಹರೀಶ್ ಮಾಳಪ್ಪನವರ್, ಪ್ರವೀಣ್ ಕುಲಕರ್ಣಿ, ಪರಮೇಶ್ವರ್ ಬಿದರಿ, ಶಶಿಧರಯ್ಯ ಹೀರೆಮಠ, ಚಂದ್ರು ಬಣಕಾರ್, ಸಂತೋಷ ತೊಪ್ಪಲ, ಶಾಲೆಯ ಗುರುಗಳಾದ ಪಿ ಎಫ್ ಕರಿಯಣ್ಣನವರ್ ಹಾಗೂ ಶಾಲೆಯ ಮುದ್ದು ಮಕ್ಕಳು ಉಪಸ್ಥಿತರಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 