ನವದೆಹಲಿ, ಫೆ 4 - ದೆಹಲಿಯ ಶಾಹೀನ್ ಬಾಗ್ ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಕಳೆದ 50 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ಪ್ರಶ್ನಿಸಿ ಬಿಜೆಪಿ ರಾಷ್ಟ್ರೀಯ ಕಾರ್ಯನಿರ್ವಾಹಕ ಸದಸ್ಯ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ಅರ್ಜಿದಾರರಾದ ಡಾ.ಎನ್.ಎ.ಗಾರ್ ಸಲ್ಲಿಸಿದ್ದ ಅರ್ಜಿ ಕ್ರಮಬದ್ಧವಾಗಿಯೇ ಪೀಠದ ಮುಂದೆ ವಿಚಾರಣೆಗೆ ಬರಲಿ ಎಂದು ಮುಖ್ಯ ನ್ಯಾಯಮೂರ್ತಿ ಎಸ್. ಎ. ಬೋಬ್ಡೆ ನೇತೃತ್ವದ ನ್ಯಾಯಪೀಠ ಸ್ಪಷ್ಟಪಡಿಸಿತು.
ಶಾಹೀನ್ ಬಾಗ್ ನ ಪ್ರತಿಭಟನಾಕಾರರು ದೆಹಲಿ ಹಾಗೂ ನೊಯ್ಡ ನಗರಗಳ ನಡುವಿನ ಜನರ ಸಂಚಾರಕ್ಕೆ ಅಡ್ಡಿಯುಂಟಾಗುತ್ತಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.
ಪ್ರತಿಭಟನಾಕಾರರನ್ನು ಸ್ಥಳದಿಂದ ತೆರವುಗೊಳಿಸುವಂತೆ ಕೇಂದ್ರ, ರಾಜ್ಯ ಸರ್ಕಾರ ಹಾಗೂ ಪೊಲೀಸರಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.