‘ವಾಲ್ಮೀಕಿಯವರು ರಾಮಾಯಣದಲ್ಲಿ ಉಲ್ಲೇಖಿಸಿರುವ ಅಂಶಗಳು ಎಂದೆಂದಿಗೂ ಪ್ರಸ್ತುತ’
The points mentioned by Valmiki in the Ramayana are ever relevant'
‘ವಾಲ್ಮೀಕಿಯವರು ರಾಮಾಯಣದಲ್ಲಿ ಉಲ್ಲೇಖಿಸಿರುವ ಅಂಶಗಳು ಎಂದೆಂದಿಗೂ ಪ್ರಸ್ತುತ’
ಯರಗಟ್ಟಿ 07: ರಾಮಾಯಣ ಮಹಾಕಾವ್ಯವ ರಚಿಸಿದವರು ಮಹರ್ಷಿ ವಾಲ್ಮೀಕಿಯವರು. ಅವರು ರಾಮಾಯಣದಲ್ಲಿ ಉಲ್ಲೇಖಿಸಿರುವ ಅಂಶಗಳು ಇಂದಿಗೂ ಎಂದೆಂದಿಗೂ ಪ್ರಸ್ತುತವಾಗಿವೆ. ರಾಮಾಯಣದ ಮೌಲ್ಯಗಳು ಭವಿಷ್ಯಕ್ಕೆ ದಾರೀದೀಪವಾಗಿವೆ. ಆದಿಕವಿ ಹೇಳಿಕೊಟ್ಟ ಆದರ್ಶಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳೋಣ ಎಂದು ಉಪ ತಹಶೀಲ್ದಾರ ಎಸ್ ಬಿ ಕುಲಕರ್ಣಿಹೇಳಿದರು.ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ವಾಲ್ಮೀಕಿ ಸಮುದಾಯದ ಮುಖಂಡರ ಸಹಯೋಗದಲ್ಲಿ ಮಂಗಳವಾರ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು. ನಿಸರ್ಗದೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಮಹರ್ಷಿ ವಾಲ್ಮೀಕಿ ಅವರಲ್ಲಿ ಕವಿತ್ವ ಭಾವನೆ ಇತ್ತು. ರಾಮಾಯಣ ಎಂಬ ಮಹಾಕಾವ್ಯವು ಇವರ ಕವಿತ್ವ ಭಾವನೆಯ ಕೊಡುಗೆಯಾಗಿದೆ. ಭ್ರಾತೃತ್ವ ಭಾವನೆ, ರಾಜನೀತಿ, ಮನೋಧರ್ಮ, ಮಾನವೀಯ ಮೌಲ್ಯ,ಪ್ರಜಾಪ್ರಭುತ್ವ ರಾಮಾಯಣ ಮಹಾಕಾವ್ಯವು ಪರಿಚಯಿಸಿದೆ ಎಂದು ಹೇಳಿದರು. ವಿಶ್ವಕ್ಕೆ ರಾಮಾಯಣ ಎಂಬ ಅತಿದೊಡ್ಡದಾದ ಕಾವ್ಯವನ್ನು ಕೊಡುಗೆ ನೀಡಿದ್ದಾರೆ. ರಾಮಾಯಣದಲ್ಲಿ ಒಳಗೊಂಡಿರುವ ತತ್ವಾದರ್ಶ ಕೊಡುಗೆ ಅಪಾರವಾಗಿದ್ದು, ಅವರು ನೀಡಿರುವ ಆದರ್ಶ ವಿಚಾರ-ತತ್ವಾದಾರ್ಶಗಳು ನಮ್ಮ ದೇಶ ಮಾತ್ರವಲ್ಲದೇ ಮಲೇಶಿಯಾ, ಕಾಂಬೋಡಿಯಾ ಸೇರಿದಂತೆ ಬೇರೆ-ಬೇರೆ ದೇಶಗಳಲ್ಲಿ ಪ್ರಚಲಿತದಲ್ಲಿವೆ. ಲವ-ಕುಶರಿಗೆ ಗುರುವಾಗಿದ್ದವರು ವಾಲ್ಮೀಕಿ. ಅವರ ತತ್ವಗಳನ್ನು ಜೀವನದಲ್ಲಿ ಪಾಲನೆ ಮಾಡಬೇಕು ಎಂದರು.ಈ ವೇಳೆ ಪ. ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ, ಪ. ಪಂ. ಸದಸ್ಯ ನಿಖಿಲ ಪಾಟೀಲ, ಹನಮಂತ ಹಾರೂಗೊಪ್ಪ, ಎಸ್. ಎಚ್. ನಾಯ್ಕರ, ಬಾಬಣ್ಣಾ ತಳವಾರ, ವಿಠ್ಠಲ ನಾಯ್ಕರ, ಶಂಕರೆಪ್ಪ ಕುರುಬಗಟ್ಟಿ, ಈರಣ್ಣಾ ಜಗಮೈನ್ನವರ, ಹೊನ್ನಪ್ಪ ಖಂಡ್ರಿ, ವಿಠ್ಠಲ ಆಲದಕಟ್ಟಿ, ಬಸವರಾಜ ಸತ್ತೂರಿ, ಸೋಮನಗೌಡ ಪಾಟೀಲ, ಅಶೋಕ ನಾಯ್ಕರ, ತಮ್ಮಣ್ಣಾ ಸೊನ್ನದ, ಶಂಕರ ದಂಡಯನ್ನವರ, ಬಸು ಪೂಜೇರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 