ಭಕ್ತಿಯ ಆಚರಣೆ ಜೀವನದಲ್ಲಿ ಅತ್ಯಗತ್ಯ: ಶ್ರೀಗಳು
The practice of devotion is essential in life: Shri
ಶಿರಹಟ್ಟಿ 20: ಭಕ್ತಿ ಆಚರಣೆಯಿಂದ ಮನುಷ್ಯನ ಆತ್ಮ ಶುದ್ದಿಯಾಗಲಿದ್ದು, ಪ್ರತಿಯೊಬ್ಬರೂ ಜೀವನದಲ್ಲಿ ಸದಾಚಾರ ಸಂಪನ್ನರಾಗಿ ಬಾಳಬೇಕಿದೆ ಎಂದು ಬೆಳ್ಳಟ್ಟಿಯ ರಾಮಲಿಂಗೇಶ್ವರ ಮಠದ ಬಸವರಾಜ ಶ್ರೀಗಳು ಹೇಳಿದರು.
ಶುಕ್ರವಾರ ತಾಲೂಕಿನ ಬೆಳ್ಳಟ್ಟಿ ಗ್ರಾಮದ ಎಪಿಎಂಸಿ ಸಭಾಭವನದಲ್ಲಿ ಶ್ರೀಕ್ಷೇತ್ರಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಸತ್ಯನಾರಾಯಣ ಪೂಜಾ ಸಮಿತಿ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾದ ಸತ್ಯನಾರಾಯಣ ಪೂಜಾ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಧಾರ್ಮಿಕ ಕಾರ್ಯಕ್ರಮಗಳಿಂದ ಎಲ್ಲರಿಗೂ ನೆಮ್ಮದಿ ದೊರೆಯುತ್ತದೆ. ಮನುಷ್ಯನ ಜೀವನ ಅತ್ಯಂತ ಪವಿತ್ರ. ಇಂತಹ ಪವಿತ್ರವಾದ ಮನುಷ್ಯ ಜನ್ಮವೆತ್ತಿ ಬಂದ ಮೇಲೆ ಪ್ರತಿಯೊಬ್ಬರೂ ಶ್ರದ್ದೆ ಮತ್ತು ನಿಷ್ಠೆ ಅಳವಡಿಸಿಕೊಂಡು ಬದುಕಬೇಕು. ಸತ್ಯದ ಮಾರ್ಗದಲ್ಲಿ ನಡೆಯಬೇಕಾದರೆ ಭಕ್ತಿ ಬಹಳ ಮುಖ್ಯ. ಅದಕ್ಕಾಗಿ ಭಕ್ತಿಯ ಆಚರಣೆ ಜೀವನದಲ್ಲಿ ಅತ್ಯಗತ್ಯ ಎಂದರು.
ಯುವ ಪೀಳಿಗೆ ಧಾರ್ಮಿಕಾಚರಣೆ ಬಗ್ಗೆ ನಿರ್ಲಕ್ಷಿಸದೇ ಶ್ರದ್ದೆ ಭಕ್ತಿಯಿಂದ ನಾಡಿನ ಆಚಾರ ವಿಚಾರ ಮುಂದಿನ ಪೀಳಿಗೆಗೆ ಕಲಿಸಿಕೊಡುವ ಪ್ರಯತ್ನ ಮಾಡಬೇಕು. ಧಾರ್ಮಿಕ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು. ಮಹಿಳೆಯರ ಆರ್ಥಿಕ ಸಬಲೀಕರಣದಲ್ಲಿ ಧರ್ಮಸ್ಥಳ ಸಂಸ್ಥೆಯದ್ದು ಬಹುದೊಡ್ಡ ಪಾತ್ರವಿದೆ. ಸರ್ಕಾರ ಮಾಡಬೇಕಾದ ಬಹುತೇಕ ಕೆಲಸವನ್ನು ಧರ್ಮಸ್ಥಳದ ಧರ್ಮಧಿಕಾರಿಗಳು ಮಾಡುತ್ತಿದ್ದು, ಧರ್ಮಸ್ಥಳ ಸಂಘ ಕೈಗೊಳ್ಳುವ ಸಮಾಜಮುಖಿ ಕಾರ್ಯಗಳು ನಿಜಕ್ಕೂ ಶ್ಲಾಘನೀಯ ಎಂದರು.
ಗ್ರಾಪಂ ಅಧ್ಯಕ್ಷ ರಮೇಶ ನಿರ್ವಾಣಶೆಟ್ಟರ ಅಧ್ಯಕ್ಷತೆ ವಹಿಸಿದ್ದರು. ಧರ್ಮಸ್ಥಳ ಸಂಸ್ಥೆಯ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ, ಶಿವಪ್ರಕಾಶ ಮಹಾಜಶೆಟ್ಟರ, ತಿಮ್ಮರಡ್ಡಿ ಮರಡ್ಡಿ, ಮೋಹನ್ ಗುತ್ತೆಮ್ಮನವರು, ಪರಶುರಾಮ ಮಲ್ನಾಡದ, ಗಂಗವ್ವ ತಳವಾರ, ತಾಲೂಕು ಯೋಜನಾಧಿಕಾರಿ ಪುನೀತ್ ಓಲೇಕಾರ್, ಚಂದ್ರಹಾಸ ವಲಯ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ವಿಎಲ್ವಿ ಸೇವಾದಾರರು, ತಾಲೂಕು ನೋಡಲ್ ಅಧಿಕಾರಿಗಳು, ಕೃಷಿ ಅಧಿಕಾರಿಗಳು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 