ಏಷ್ಯಾಕಪ್ 2018 ವೇಳಾಪಟ್ಟಿ ಪ್ರಕಟ ಭಾರತ-ಪಾಕ್ ಕದನಕ್ಕೆ ಮುಹೂರ್ತ ಫಿಕ್ಸ್
ನವದೆಹಲಿ 25: ಏಷ್ಯಾ ಕಪ್ ಕ್ರಿಕೆಟ್ ಟೂನರ್ಿ 2018ರ ವೇಳಾಪಟ್ಟಿ ಪ್ರಕಟವಾಗಿದ್ದು, ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈ ವೋಲ್ಟೇಜ್ ಕದನಕ್ಕೆ ಸೆಪ್ಟೆಂಬರ್ 19ರಂದು ಮುಹೂರ್ತ ಫಿಕ್ಸ್ ಆಗಿದೆ.
2018ನೇ ಸಾಲಿನ ಏಷ್ಯಾ ಕಪ್ ಕ್ರಿಕೆಟ್ ಟೂನರ್ಿ ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಬಿಡುಗಡೆಗೊಳಿಸಿದೆ. ಯುಎಇ ಆತಿಥ್ಯ ವಹಿಸುತ್ತಿರುವ 2018ರ ಏಷ್ಯಾ ಕಪ್ನಲ್ಲಿ ಹಾಲಿ ಚಾಂಪಿಯನ್ ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾ, ಆಫ್ಘಾನಿಸ್ತಾನ ಸೇರಿದಂತೆ ಒಟ್ಟು ಆರು ತಂಡಗಳು ಭಾಗವಹಿಸುತ್ತಿದೆ. ಆರು ತಂಡಗಳನ್ನು ಒಟ್ಟು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. 'ಎ' ಗುಂಪಿನಲ್ಲಿ ಭಾರತ, ಪಾಕಿಸ್ತಾನ ಸೇರಿದಂತೆ ಕ್ವಾಲಿಫೈಯರ್ (ಇನ್ನಷ್ಟೇ ಅರ್ಹತೆ ಪಡೆಯಬೇಕಿದೆ) ತಂಡಮೊಂದು ಇರಲಿದೆ. ಹಾಗೆಯೇ 'ಬಿ' ಗುಂಪಿನಲ್ಲಿ ಶ್ರೀಲಂಕಾ, ಬಾಂಗ್ಲಾದೇಶ ಹಾಗೂ ಅಫಘಾನಿಸ್ತಾನ ತಂಡಗಳು ಸ್ಥಾನ ಗಿಟ್ಟಿಸಿಕೊಂಡಿದೆ.
ಇನ್ನು ಕ್ವಾಲಿಫೈಯರ್ ಹಂತದಲ್ಲಿ ಯುಎಇ, ಸಿಂಗಾಪುರ, ಒಮಾನ್, ನೇಪಾಳ, ಮಲೇಷ್ಯಾ ಹಾಗೂ ಹಾಂಕಾಂಗ್ ತಂಡಗಳು ಪೈಪೋಟಿ ನಡೆಸಲಿದ್ದು, ಈ ತಂಡಗಳ ಪೈಕಿ ಒಂದು ತಂಡ ಏಷ್ಯಾಕಪ್ ಟೂನರ್ಿಯಲ್ಲಿ ಪಾಲ್ಗೊಳ್ಳಲಿದೆ.
ಸೆಪ್ಟೆಂಬರ್ 15ರಂದು 2018ರ ಏಷ್ಯಾ ಕಪ್ ಟೂನರ್ಿಗೆ ಚಾಲನೆ ದೊರಕಲಿದ್ದು, ಟೂನರ್ಿಯ ಉದ್ಘಾಟನಾ ಪಂದ್ಯ ದುಬೈನಲ್ಲಿ ನಡೆಯಲಿದ್ದು, ಬಾಂಗ್ಲಾದೇಶ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗುತ್ತಿವೆ. ಇನ್ನು ದುಬೈನಲ್ಲಿ ಸೆಪ್ಟೆಂಬರ್ 28ರಂದು ಫೈನಲ್ ಪಂದ್ಯ ನಡೆಯಲಿದೆ. ಸೆಪ್ಟೆಂಬರ್ 18ರಂದು ಕ್ವಾಲಿಫೈಯರ್ ವಿರುದ್ಧ ಮೊದಲ ಪಂದ್ಯವನ್ನಾಡುವ ಭಾರತ ಸೆಪ್ಟೆಂಬರ್ 19ರಂದು ಸಾಂಪ್ರದಾಯಿಕ ಬದ್ಧ ವೈರಿ ಪಾಕಿಸ್ತಾನ ಸವಾಲನ್ನು ಎದುರಿಸಲಿದೆ.
ಈ ಮೂಲಕ ವಿರಾಮವಿಲ್ಲದೆ ಸತತ ಎರಡು ಪಂದ್ಯಗಳನ್ನು ಆಡಲಿದೆ. ಪ್ರತಿ ಗುಂಪಿನಿಂದಲೂ ಅಗ್ರ ಎರಡು ತಂಡಗಳು 'ಸೂಪರ್ ಫೋರ್ ಹಂತಕ್ಕೆ ತೇರ್ಗಡೆಯನ್ನು ಹೊಂದಲಿದೆ. ಬಳಿಕ ಅಗ್ರ ಎರಡು ತಂಡಗಳು ಪ್ರಶಸ್ತಿಗಾಗಿ ಸೆಣಸಲಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 