ಪತ್ರಿಕಾರಂಗ ಪ್ರಜಾಪ್ರಭುತ್ವದ ನಾಲ್ಕನೇ ಆಧಾರ ಸ್ತಂಭ: ಶಾಸಕ ಅಶೋಕ ಮನಗೂಳಿ

ಪತ್ರಿಕಾರಂಗ ಪ್ರಜಾಪ್ರಭುತ್ವದ ನಾಲ್ಕನೇ ಆಧಾರ ಸ್ತಂಭ: ಶಾಸಕ ಅಶೋಕ ಮನಗೂಳಿ   The press is the fourth pillar of democracy: MLA Ashok Managuli

ಲೋಕದರ್ಶನ ವರದಿ 

ಸಿಂದಗಿ 27 : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕಾ ರಂಗವು ನಾಲ್ಕನೇ ಆಧಾರ ಸ್ತಂಭವಾಗಿ ಕಾರ್ಯನಿರ್ವಹಿಸುತ್ತಿದ್ದು, ಸಮಾಜದ ಒಳಿತುಹಿಕೆಡುಕುಗಳನ್ನು ಜನರ ಮುಂದಿಡುವ ಜವಾಬ್ದಾರಿಯನ್ನು ಅತ್ಯಂತ ಪ್ರಾಮಾಣಿಕವಾಗಿ ನಿರ್ವಹಿಸಬೇಕಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು. ಸಿಂದಗಿ ನಗರದ   ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಿಂದಗಿ ತಾಲೂಕು ಘಟಕದ ವತಿಯಿಂದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,

ಸಮಾಜದಲ್ಲಿ ನಡೆಯುವ ಬೆಳವಣಿಗೆಗಳನ್ನು ನಿಷ್ಪಕ್ಷಪಾತವಾಗಿ ಜನರಿಗೆ ತಲುಪಿಸುವುದರ ಜೊತೆಗೆ ಸರ್ಕಾರದ ಜನಪರ ಯೋಜನೆ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಲ್ಲಿ ಪರ್ತಕರ್ತರ ಪಾತ್ರ ಮಹತ್ವದ್ದಾಗಿದೆ. ಪತ್ರಕರ್ತರ ಬಹುದಿನ ಬೇಡಿಕೆಯಾಗಿದ ಪತ್ರಿಕಾ ಭವನವನ್ನು ಅತೀ ಶೀಘ್ರದಲ್ಲಿಯೇ ಮಾಡುಕೊಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಜನರ ಸಂಕಷ್ಟ, ರೈತರ ಸಮಸ್ಯೆಗಳು, ವಿದ್ಯಾರ್ಥಿಗಳ ಆಶಯಗಳು ಹಾಗೂ ಅಭಿವೃದ್ಧಿಯ ವಿಚಾರಗಳನ್ನು ಆಡಳಿತದ ಗಮನಕ್ಕೆ ತರುವಲ್ಲಿ ಪತ್ರಕರ್ತರ ಸೇವೆ ಅನನ್ಯವಾಗಿದೆ ಎಂದು ಹೇಳಿದರು. 

ಈ ವೇಳೆ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ ಮಾತನಾಡಿ, ಪತ್ರಕರ್ತರು ಸಾಕಷ್ಟು ಸೌಲಭ್ಯಗಳ ಕೊರತೆಯ ನಡುವೆಯೂ ಸಮಾಜದ ಪರವಾಗಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜನರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದ್ದಾರೆ. ಆದ್ದರಿಂದ ಸಿಂದಗಿಯಲ್ಲಿ ಪತ್ರಕರ್ತರ ಭವನ ನಿರ್ಮಾಣಕ್ಕೆ ಶಾಸಕ ಅಶೋಕ ಮನಗೂಳಿ ಅವರು ವಿಶೇಷ ಆದ್ಯತೆ ನೀಡಿ ಶೀಘ್ರ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.