ಪ್ರತಿಷ್ಠಿತ ಖೇಲ್‌ ರತ್ನ ಪ್ರಶಸ್ತಿ ಪ್ರಕಟಿಸಿದ ಕ್ರೀಡಾ ಸಚಿವಾಲಯ

The prestigious Khel Ratna Award has been announced by the Ministry of Sports

ನವದೆಹಲಿ 02ಪ್ರತಿಷ್ಠಿತ ಖೇಲ್‌ ರತ್ನ ಪ್ರಶಸ್ತಿಯನ್ನು ಕ್ರೀಡಾ ಸಚಿವಾಲಯ ಗುರುವಾರ ಪ್ರಕಟಿಸಿದೆ.


ಪ್ಯಾರಿಸ್ ಒಲಿಂಪಿಕ್ಸ್‌ ಶೂಟಿಂಗ್‌ನಲ್ಲಿ 2 ಕಂಚಿನ ಪದಕ ಗೆದ್ದು ದೇಶದ ಕೀರ್ತಿ ಪತಾಕೆಯನ್ನು ಹಾರಿಸಿದ ಮನು ಭಾಕರ್‌ ಮತ್ತು ವಿಶ್ವ ಚೆಸ್‌ ಚಾಂಪಿಯನ್‌ ಶಿಪ್‌ ಗೆದ್ದ ಡಿ ಗುಕೇಶ್‌‌ ಸೇರಿದಂತೆ ನಾಲ್ವರಿಗೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಘೋಷಣೆಯಾಗಿದೆ.


ಒಲಿಂಪಿಕ್ಸ್‌ನಲ್ಲಿ ಉತ್ತಮ ಸಾಧನೆಗೈದು ಕಂಚು ಗೆದ್ದ ಭಾರತದ ಪುರುಷರ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ಪ್ಯಾರಾಲಿಂಪಿಯನ್ ಪ್ರವೀಣ್ ಕುಮಾರ್, ಶೂಟರ್ ಮನು ಭಾಕರ್‌, ‌ ವಿಶ್ವ ಚೆಸ್‌ ಚಾಂಪಿಯನ್‌ ಡಿ. ಗುಕೇಶ್‌ ಅವರು ಖೇಲ್ ರತ್ನ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.

ಜನವರಿ 17 ರಂದು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಖೇಲ್ ರತ್ನ ಪ್ರಶಸ್ತಿಯನ್ನು ಆಥ್ಲೀಟ್ಸ್‌ಗಳು ಸ್ವೀಕರಿಸಲಿದ್ದಾರೆ.

ಖೇಲ್‌ ರತ್ನ ಪ್ರಶಸ್ತಿಯ ಮೊದಲ ಪಟ್ಟಿಯಲ್ಲಿ ಶೂಟರ್‌ ಮನು ಭಾಕರ್‌ ಅವರ ಹೆಸರು ಇರಲಿಲ್ಲ. ಇದರಿಂದ ಅವರ ತಂದೆ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ಇದೀಗ ಅಧಿಕೃತ ಪಟ್ಟಿಯಲ್ಲಿ ಮನು ಭಾಕರ್‌ ಅವರ ಹೆಸರನ್ನು ಸೇರಿಸಲಾಗಿದೆ.

ಕ್ರೀಡಾ ಸಚಿವಾಲಯವು ಜನವರಿ 17 ರಂದು ಖೇಲ್ ರತ್ನ, ಅರ್ಜುನ ಮತ್ತು ದ್ರೋಣಾಚಾರ್ಯ ಪ್ರಶಸ್ತಿಗಳನ್ನು ನೀಡಲಾಗುವ ಕ್ರೀಡಾಪಟುಗಳ ಪಟ್ಟಿಯನ್ನು ಪ್ರಕಟಿಸಿದೆ.


ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಮತ್ತು ಸರಿಯಾದ ಪರಿಶೀಲನೆಯ ನಂತರ ಕ್ರೀಡಾಪಟುಗಳು ತರಬೇತುದಾರರು, ವಿಶ್ವವಿದ್ಯಾಲಯ ಮತ್ತು ಘಟಕಗಳಿಗೆ ಪ್ರಶಸ್ತಿಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.