ಹೊರಗುತ್ತಿಗೆ ನೌಕರರ ಸಮಸ್ಯೆ ಆಲಿಸಿದ ಬಾಯಕ್ಕ ಮೇಟಿ

ಬಾಗಲಕೋಟೆ: ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರ ಸಮಸ್ಯೆಗಳನ್ನು ಆಲಿಸುವ ನಿಟ್ಟಿನಲ್ಲಿ ಹಮ್ಮಿಕೊಂಡ ಫೋನ್ ಇನ್ ಕಾರ್ಯಕ್ರಮದಲ್ಲಿ ಜಿ.ಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಬಂದಂತಹ ಸಮಸ್ಯೆಗಳನ್ನು ಆಲಿಸಿದರು.

ಗುರುವಾರ ಜಿ.ಪಂ ಅಧ್ಯಕ್ಷರ ಕಚೇರಿಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಬೆಳಿಗ್ಗೆ 11 ರಿಂದ 12.30 ಗಂಟೆವರೆಗೆ ಹಮ್ಮಿಕೊಂಡ ಪೋನ್ ಇನ್ ಕಾರ್ಯಕ್ರಮದಲ್ಲಿ ಒಟ್ಟು 52 ಕರೆಗಳು ಬಂದಿದ್ದರು. ಪ್ರತಿಯೊಂದು ಕರೆಗಳಲ್ಲಿ ಹೊರಗುತ್ತಿಗೆ ನೌಕರರು ತಮಗೆ ಪ್ರತಿ ತಿಂಗಳು ಸಂಬಳ ಸರಿಯಾಗಿ ಬರುತ್ತಿಲ್ಲ. ಜೀವನ ನಿರ್ವಹಣೆ ಮಾಡಲು ಬಹಳ ಕಷ್ಟವಾಗುತ್ತಿದೆ. ಹೆಚ್ಚಿಗೆ ಕೇಳಿದರೆ ಕೆಲಸದಿಂದ ತೆಗೆಯುವ ಬೆದರಿಕೆ, ಕಳೆದ 8 ರಿಂದ 10 ತಿಂಗಳವರೆಗೆ ಸಂಬಳ ಆಗದಿರುವ ಕುರಿತ ಸಮಸ್ಯೆಗಳು ಇದ್ದವು.

ಕರೆಗಳಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸವರ್ೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವವರ ಹೊರಗುತ್ತಿಗೆ ನೌಕರರ ಸಮಸ್ಯೆಗಳು ಹೆಚ್ಚಾಗಿದ್ದವು. ಹುನಗುಂದ ತಾಲೂಕಿನ ಸವರ್ೇ ಇಲಾಖೆಯಲ್ಲಿ ಕಳೆದ 13 ತಿಂಗಳಿನಿಂದ ಸಂಬಳ ಬರದೇ ಇರುವುದು, ಅಧಿಕಾರಿಗಳನ್ನು ಕೇಳಿದರೆ ಏಜೇನ್ಸಿಯವರನ್ನು ಕೇಳಿ ಎನ್ನುತ್ತಾರೆ. ಏಜೇನ್ಸಿಯವರನ್ನು ಕೇಳಿದರೆ ಇಲಾಖೆಯವರು ವೇತನ ಪಾವತಿಸಿಲ್ಲವೆಂದು ಹೇಳುತ್ತಿದ್ದಾರೆ. ಈ ರೀತಿ ಸಮಸ್ಯೆ ಇರುವದರಿಂದ ಜೀವನ ನಡೆಸಲು ತುಂಬಾ ಕಷ್ಟವಾಗುತ್ತಿದೆ ಎಂದು ಕರೆಯ ಮೂಲಕ ಅಳಲನ್ನು ತೋಡಿಕೊಂಡರು.

ಇದೇ ರೀತಿ ಜಿಲ್ಲಾ ಆಸ್ಪತ್ರೆ, ತಾಲೂಕಾ ಆಸ್ಪತ್ರೆ, ಗ್ರಾಮ ಪಂಚಾಯತ, ಕೂಡಲಸಂಗಮ ಅಭಿವೃದ್ದಿ ಪ್ರಾಧಿಕಾರ, ಹೆಸ್ಕಾಂ, ಅರಣ್ಯ ಇಲಾಖೆ, ಪಶುಸಂಗೋಪನ ಇಲಾಖೆ, ತಾಲೂಕಾ ಪಂಚಾಯತ, ಪುರಸಭೆ, ಶಿಶು ಅಭಿವೃಧ್ದಿ ಯೋಜನಾಧಿಕಾರಿಗಳ ಕಚೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅತಿಥಿ ಶಿಕ್ಷಕರ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರರ ಸಮಸ್ಯೆಗಳನ್ನು ಜಿ.ಪಂ ಅಧ್ಯಕ್ಷರು ಆಲಿಸುವ ಮೂಲಕ ಸಂಬಂಧಿಸಿದ ಅಧಿಕಾರಿಗಳಿಗೆ ಕ್ರಮಕೈಗೊಳ್ಳಲು ಸ್ಥಳದಲ್ಲಿಯೇ ಸೂಚಿಸಿದರು. 

ಬಾದಾಮಿ, ಹುನಗುಂದ ಹಾಗೂ ಬಾಗಲಕೋಟೆ ತಾಲೂಕಿನಿಂದ ಹೆಚ್ಚಾಗಿ ಕರೆಗಳು ಬಂದಿದ್ದವು. ಹೆಸ್ಕಾಂ ಮತ್ತು ಕೆಪಿಟಿಸಿಎಲ್ ನಲ್ಲಿ ಕೆಲಸಮಾಡುತ್ತಿರುವವರಿಗೆ ಸರಿಯಾಗಿ ಸಂಬಳ ನೀಡುತ್ತಿಲ್ಲ. ಇದರಿಂದ ಕುಟುಂಬದ ನಿರ್ವಹಣೆಗೆ ತುಂಬಾ ಕಷ್ಟವಾಗಿದೆ ಎಂದು ತಿಳಿಸಿದರೆ, ಕೂಡಲ ಸಂಗಮ ಅಭಿವೃದ್ದಿ ಪ್ರಾಧಿಕಾರದಲ್ಲಿ 119 ಜನ ಹೊರಗುತ್ತಿಗೆ ಮೇಲೆ ಕೆಲಸ ಮಾಡುತ್ತಿದ್ದೇವೆ. ಮೊದಲು ಪ್ರಾಧಿಕಾರದಿಂದ ಸರಿಯಾಗಿ ಸಂಬಳ ಬರುತ್ತಿತ್ತು. ಈಗ ಹೊರಗುತ್ತಿಗೆ ಸಂಸ್ಥೆಯ ಮೂಲಕ ಮಾಡಿರುವದರಿಂದ ಪ್ರತಿ ತಿಂಗಳು ಸರಿಯಾಗಿ ವೇತನ ಬರುತ್ತಿಲ್ಲವೆಂದು ಜಿ.ಪಂ ಅಧ್ಯಕ್ಷರಲ್ಲಿ ತಿಳಿಸಿದರು.

ಫೋನ್ ಇನ್ ಕಾರ್ಯಕ್ರಮ 11 ರಿಂದ 12.30ಕ್ಕೆ ಮುಕ್ತಾಯವಾಗಬೇಕಾಗಿತ್ತು, ಕರೆಗಳು ಹೆಚ್ಚಾಗಿ ಬರುತ್ತಿರುವದರಿಂದ ಮಧ್ಯಾಹ್ನ 1 ಗಂಟೆವರೆಗೆ ಜಿ.ಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಅವರು ಬಂದಂತಹ ಕರೆಗಳಿಗೆ ಸ್ಪಂಧಿಸಿ ಸಮಸ್ಯೆಗಳನ್ನು ಆಲಿಸಿದರು. ಅಲ್ಲದೇ ಕೆಲಸಕ್ಕೆ ತೊಂದರೆ ಕೊಡುತ್ತಿದ್ದರೆ ಹಾಗೂ ಇನ್ನೀತರ ಸಮಸ್ಯೆಗಳಿದ್ದರೆ ನೇರವಾಗಿ ನಮ್ಮ ಕಚೇರಿಗೆ ಬಂದು ದೂರು ನೀಡಬಹುದಾಗಿದೆ ಎಂದು ತಿಳಿಸಿದರು. 

ಫೋನ್ ಇನ್ ಕಾರ್ಯಕ್ರಮದಲ್ಲಿ ಜಿ.ಪಂ ಉಪಕಾರ್ಯದಶರ್ಿ ಎ.ಜಿ.ತೋಟದ, ಸಮಾಜ ಕಲ್ಯಾಣ ಇಲಾಖೆಯ ಉಪನಿದರ್ೇಶಕ ಜಗದೀಶ ಹೆಬ್ಬಳ್ಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿದರ್ೇಶಕ ಮಲ್ಲಿಕಾಜರ್ುನ ರೆಡ್ಡಿ, ಜಿಲ್ಲಾ ಕಾಮರ್ಿಕ ಅಧಿಕಾರಿ ಬಿ.ಆರ್.ಜಾದವ, ಕಾಮರ್ಿಕ ನಿರೀಕ್ಷಕ ಅಶೋಕ ಒಡೆಯರ, ಕೃಷಿ ಇಲಾಖೆಯ ಉಪನಿದರ್ೇಶಕ ಕೊಂಗವಾಡ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸವಿತಾ ಕಾಳೆ ಸೇರಿದಂತೆ ಇತರೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.