ಮುಂದಿನ ಪೀಳಿಗೆ ಧರ್ಮವಂತರಾಗಿಸೋದೆ ಜೈನ ಧರ್ಮದ ಉದ್ದೇಶ: ಕುಲರತ್ನ
The purpose of Jainism is to make the next generation religious: Kulratna
ಲೋಕದರ್ಶನ ವರದಿ
ಮುಂದಿನ ಪೀಳಿಗೆ ಧರ್ಮವಂತರಾಗಿಸೋದೆ ಜೈನ ಧರ್ಮದ ಉದ್ದೇಶ: ಕುಲರತ್ನ
ರಬಕವಿ-ಬನಹಟ್ಟಿ 04: ಮುಂದಿನ ಪೀಳಿಗೆಗೆ ಧರ್ಮದ ಅರಿವು ಮೂಡಿಸುವ ಕುರಿತು ಜೈನ ಧರ್ಮದಲ್ಲಿ ಅನೇಕ ಧಾರ್ಮಿಕ ಕಾರ್ಯಗಳು ಆಗಾಗ ನಡೆಯುತ್ತಿರುತ್ತವೆ. ಇದರ ಉದ್ದೇಶವೇ ಮುಂದಿನ ಪೀಳಿಗೆಗೂ ಜೈನ ಧರ್ಮದ ಶ್ರೇಷ್ಠತೆ, ಆಚಾರ ವಿಚಾರ ಗೊತ್ತಾಗಲಿ ಎನುವುದೇ ಮೂಲ ಉದ್ದೇಶವಾಗಿದೆ. ಧರ್ಮ ಮರೆತರೆ ಬದುಕಿಲ್ಲ, ಸುಂದರ ಮತ್ತು ಮಹೋನ್ನತ ಬದುಕಿಗೆ ಧರ್ಮವೇ ಮೂಲ ಸೆಲೆಯಾಗಿದೆ. ನಾವು ಧರ್ಮ ಪಾಲಿಸಿದರೆ ನಮ್ಮನ್ನು ಧರ್ಮವೇ ಸಂರಕ್ಷಿಸುತ್ತದೆ ಎಂದು ಹಳಿಂಗಳಿ ಭದ್ರಗಿರಿ ಬೆಟ್ಟದ ಜೈನ ಮುನಿ ಆಚಾರ್ಯ 108 ಕುಲರತ್ನಭೂಷಣ ಮಹಾರಾಜರು ಹೇಳಿದರು.
ತಾಲೂಕಿನ ಭದ್ರಿಗಿರಿ ಬೆಟ್ಟದಲ್ಲಿ ಹಮ್ಮಿಕೊಂಡ ಜಿನ ಸಹಸ್ರಷ್ಟ ನಾಮ ಅರ್ಚನೆ ಆರಾಧನಾ ಮಹೋತ್ಸದಲ್ಲಿ ಪ್ರವಚನ ನೀಡಿ ಅವರು ಮಾತನಾಡಿದರು. ಹಳಿಂಗಳಿ ಭದ್ರಗಿರಿ ಬೆಟ್ಟ ಜೈನರ ಕಾಶಿಯಾಗಿದ್ದು, ಇಲ್ಲಿ ಸಾವಿರಾರು ವರ್ಷಗಳ ಹಿಂದೆ 772 ಮುನಿಗಳು ಚಾತುರ್ಮಾಸ ಗೈದಪುಣ್ಯ ಭೂಮಿಯಾಗಿದೆ. ಈ ಸ್ಥಳದಲ್ಲಿ ಇಂಥಹ ಪುಣ್ಯ ಕಾರ್ಯಗಳನ್ನು ಮಾಡುವುದು ಮತ್ತು ಭಾಗಿಯಾಗುವುದರಿಂದ ಅಗಣಿತ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದರು.
ಈ ಸಂದರ್ಭದಲ್ಲಿ 20 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಶ್ರಾವಕ-ಶ್ರಾವಕಿಯರು ಪೂಜೆಯಲ್ಲಿ ಭಾಗವಹಿಸಿದ್ದರು. ರಾಜ್ಯ ಸೇರಿದಂತೆ ಮಹಾರಾಷ್ಟ್ರ, ಗೋವಾ ರಾಜ್ಯಗಳಿಂದಲೂ ಸಾವಿರಾರು ಸಂಖ್ಯೆಯಲ್ಲಿ ಶ್ರಾವಕ-ಶ್ರಾವಕಿಯರು ಆಗಮಿಸಿ ಕೃತಾರ್ಥರಾದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 