ಆರೋಗ್ಯದ ರಕ್ಷಣೆಯೇ ವಿಶ್ವ ಆರೋಗ್ಯ ದಿನದ ಉದ್ದೇಶ
The purpose of World Health Day is to protect health
ವಿಜಯಪುರ 08 : ಗೊಳಸಂಗಿಯ ಚನ್ನಮಲ್ಲಪ್ಪ ಚನ್ನವೀರ್ಪ ಹೆಬ್ಬಾಳ ಪ್ರಥಮ ದರ್ಜೆ ಕಾಲೇಜಿನ ಸಭಾಭವನದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಯುವರ್ ರೆಡ್ ಕ್ರಾಸ್ ಘಟಕ, ರೆಡ್ ರಿಬ್ಬನ್ ಹಾಗೂ ಐಕ್ಯೂ ಏ ಸಿ ಇವರ ಸಂಯುಕ್ತ ಆಶ್ರಯದಲ್ಲಿ ದಿ: 07.04.2026 ರಂದು ‘ವಿಶ್ವ ಆರೋಗ್ಯ ದಿನ, ಪ್ರಾಥಮಿಕ ಚಿಕಿತ್ಸೆ ಹಾಗೂ ಹೆಚ್‌ಐವಿ ಏಡ್ಸ್’ ಕುರಿತು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಬಸವನ ಬಾಗೇವಾಡಿಯ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಸ್. ಎಸ್. ಮೇಟಿ ಕಾರ್ಯಕ್ರಮ ವಿಷಯದ ಕುರಿತು ಮಾತನಾಡುತ್ತ “ವಿಶ್ವ ಆರೋಗ್ಯ ಸಂಸ್ಥೆ ಸ್ಥಾಪನೆಯಾದ ನೆನಪಿನಾರ್ಥವಾಗಿ ಪ್ರತಿ ವರ್ಷ ವಿಶ್ವ ಆರೋಗ್ಯ ದಿನಾಚರಣೆಯನ್ನು ದೇಶಾದ್ಯಂತ ಆಚರಿಸಲಾಗುತ್ತಿದೆ. “ಜಾಗತಿಕ ಮಟ್ಟದಲ್ಲಿ ಮಾನವನ ಆರೋಗ್ಯದ ರಕ್ಷಣೆಯೇ ವಿಶ್ವ ಆರೋಗ್ಯ ದಿನದ ಉದ್ದೇಶ” ಎಂದು ಸ್ಪಷ್ಟಪಡಿಸಿದರು.
ಹೆಚ್‌ಐವಿ ಹರಡುವ ವಿಧಾನಗಳು ಹಾಗೂ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಯ ಬಗ್ಗೆ ಮಾತನಾಡಿ, “ನಮ್ಮ ದೈನಂದಿನ ಜೀವನದಲ್ಲಿ ಆಕಸ್ಮಿಕವಾಗಿ ಅನೇಕ ಅವಗಡಗಳು ಉಂಟಾದಾಗ ಪ್ರಾಥಮಿಕ ಚಿಕಿತ್ಸೆಯಿಂದ ಮಾನವನ ಜೀವ ರಕ್ಷಣೆಯನ್ನು ಮಾಡಬಹುದು” ಎಂದು ತಿಳಿಸಿದರು.
ಗೊಳಸಂಗಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನೀರೀಕ್ಷಣಾಧಿಕಾರಿ ಜಗದೀಶ್ ಮುಚ್ಚಂಡಿ ಮಾತನಾಡಿ, ‘ಮಹಿಳೆಯರ ಗರ್ಭಕೋಶದ ಕ್ಯಾನ್ಸರ್’ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ಒದಗಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಪ್ರೊ . ಎಸ್. ಆರ್. ಕುಂಬಾರರವರು “ವಿದ್ಯಾರ್ಥಿಗಳು ಅಧ್ಯಯನದ ಜೊತೆಗೆ ಆರೋಗ್ಯದ ಕಡೆಗೂ ಕೂಡ ಗಮನ ಹರಿಸಬೇಕೆಂದು” ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಹಿರಿಯ ಸಹ ಪ್ರಾಧ್ಯಾಪಕ ಹಾಗೂ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಚಂದ್ರಕಾಂತ ನಾಯಕ್, ಐಕ್ಯೂಎಸಿ ಘಟಕದ ಸಂಚಾಲಕರು ಹಾಗೂ ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ. ಶ್ರೀಶೈಲ ಬಬಲಾದ, ಎನ್‌ಎಸ್‌ಎಸ್ ಘಟಕ ಹಾಗೂ ರೆಡ್ ಕ್ರಾಸ್ ವಿಭಾಗದ ಸಂಚಾಲಕ ಪ್ರೊ. ನಂಜುಂಡಸ್ವಾಮಿ ಎಂ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿ/ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 