ಹಾವೇರಿ27: ಕಾನೂನುಗಳ ಅರಿವನ್ನು ಜನಸಾಮಾನ್ಯರಿಗೆ ಮೂಡಿಸುವುದು ಹಾಗೂ ಅಗತ್ಯವಿದ್ದರಿಗೆ ಕಾನೂನು ನೆರವು ಒದಗಿಸುವುದು ಕಾನೂನು ಸೇವೆಗಳ ಪ್ರಾಧಿಕಾರದ ಉದ್ದೇಶವಾಗಿದೆ ಎಂದು ದಿವಾಣಿ ನ್ಯಾಯಾಧೀಶರಾದ ಎಂ.ಬಿ.ಪಾಟೀಲ ಅವರು ಹೇಳಿದರು.
ಶನಿವಾರ ನಗರದ ಸ್ತ್ರೀ ಶಕ್ತಿ ಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಅಭಿಯೋಜನಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತಾಶ್ರಯದಲ್ಲಿ ಜರುಗಿದ ಮಕ್ಕಳಿಗೆ ಬಾಲ ಸ್ನೇಹಿ ಕಾನೂನು ಸೇವೆಗಳು ಮತ್ತು ಅವುಗಳ ಸಂರಕ್ಷಣೆಯ ರಾಷ್ಟ್ರೀಯ ಯೋಜನೆ 2015, ಪೋಕ್ಸೊ ಕಾಯ್ದೆ-2012 ಹಾಗೂ ಜೆ.ಜೆ.ಕಾಯ್ದೆ 2015ರ ಕುರಿತು ಕಾನೂನು ಸಾಕ್ಷರತಾ ಕಾಯರ್ಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಹಾಗೂ ವಾಷರ್ಿ 1.25 ಲಕ್ಷ ರೂ.ಗಳಿಗಿಂತ ಕಡಿಮೆ ಆದಾಯ ಹೊಂದಿದ ಎಲ ಜಾತಿ ವರ್ಗದವರು, ಪ್ರವಾಹ-ಭೂಕಂಪದಂತಹ ಪ್ರಕೃತಿ ವಿಕೋಪಗಳಿಗೆ ತುತ್ತಾಗಿ ಸಂತ್ರಸ್ಥರಾದವರು, ದೌರ್ಜನ್ಯಕ್ಕೊಳಗಾದವರು ಪ್ರಾಧಿಕಾರದಿಂದ ಉಚಿತ ಕಾನೂನು ಸೇವೆ ಪಡೆಯಬಹುದು. ತಾಲೂಕು, ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರದಲ್ಲಿ ಕಾನೂನು ಸೇವೆಗಳ ಪ್ರಾಧಿಕಾಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ. ಪ್ರತಿಯೊಬ್ಬರು ಪ್ರಾಥಮಿಕ ಕಾನೂನುಗಳ ಅರಿವನ್ನು ಹೊಂದಬೇಕು ಎಂದು ಕರೆ ನೀಡಿದರು.
ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಲೋಕ ಅದಾಲತ್ಗಳನ್ನು ನಡೆಸಲಾಗುತ್ತಿದ್ದು, ಬಾಕಿ ಇರುವ ಎಲ್ಲ ಸಿವಿಲ್ ಪ್ರಕರಣಗಳು, ರಾಜೀ ಮಾಡಬಹುದಾದ ಕ್ರಿಮಿನಲ್ ಪ್ರಕರಣಗಳು ಹಾಗೂ ಎಲ್ಲ ವಿವಿಧ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಈ ಲೋಕ ಅದಾಲತ್ಗಳಲ್ಲಿ ರಾಜೀ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಕೆ.ಸಿ.ಪಾವಲಿ ಅವರು ಮಾತನಾಡಿ, ಪ್ರಸ್ತುತ ಬಾಲಾಪರಾಧಗಳ ಸಂಖ್ಯೆ ಹೆಚ್ಚಾಗುತ್ತಿವೆ ಹಾಗೂ ಬಾಲಕಿಯರಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಅಧಿಕವಾದ ಹಿನ್ನೆಲೆಯಲ್ಲಿ ಬಾಲನ್ಯಾಯ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಮನೆಯೇ ಮೊದಲ ಪಾಠಶಾಲೆ, ಜನಿನಿ ಮೊದಲ ಗುರು. ತಂದೆ-ತಾಯಿ, ಪೋಷಕರು ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲೆ ಸಂಸ್ಕಾರ ಹಾಗಚಿಛಿೂ ನೈತಿಕ ಪಾಠ ಕಲಿಸಿ ಸಮಾಜದ ಪ್ರಜ್ಞಾವಂತ ನಾಗರಿಕರನ್ನಾಗಿ ಮಾಡಬೇಕು ಎಂದು ಹೇಳಿದರು.
ಇಂದು ಅಪರಾಧಗಳ ಸಂಖ್ಯೆ ಹೆಚ್ಚಾಗಿ ಸಮಾಜ ಅಧೋಗತಿಗೆ ಸಾಗುತ್ತಿರುವುದು ವಿಷಾಧನೀಯ. ಟಿವಿ ಹಾಗೂ ಸಿನಿಮಾ ಹಾವಳಿಯಿಂದ ಬಾಲಾಪರಾಧಗಳು ಹೆಚ್ಚಗುತ್ತಿವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಅಧ್ಯಕ್ಷತೆ ವಹಿಸಿದ್ದ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾಜರ್ುನ ಬಾಲದಂಂಡಿ ಅವರು ಮಾತನಾಡಿ, ಆಶಾ ಹಾಗೂ ಅಂಗನವಾಡಿ ಕಾರ್ಯಕತರ್ೆಯರು ಚಿಕ್ಕಮಕ್ಕಳಿಗೆ ಪೋಷಕಾಂಶಯುಕ್ತ ಆಹಾರ ನೀಡುವುದರೊಂದಿಗೆ ಉತ್ತಮ ನೀತಿ ಕಥೆಗಳನ್ನು ಹೇಳುವ ಮೂಲಕ ಉತ್ತಮ ಸಂಸ್ಕಾರ ನೀಡಬೇಕು.
ತಮ್ಮ ಗ್ರಾಮ ವ್ಯಾಪ್ತಿಯ ಗ್ರಾಮಗಳಲ್ಲಿ ಬಾಲಕರು ಶಿಕ್ಷಣದಿಂದ ವಂಚಿತರಾಗದಿರುವಂತೆ ನೋಡಿಕೊಳ್ಳಬೇಕು. ಬಾಲ್ಯವಿವಾಹಗಳು ಅಥವಾ ಚಿಕ್ಕ ಮೇಲೆ ಯಾವುದೇ ರೀತಿಯ ದೌರ್ಜನ್ಯಗಳು ನಡೆದರೆ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಹೇಳಿದರು.
ಅಭಿಯೋಜನಾ ಇಲಾಖೆ ಸರಕಾರಿ ಹಿರಿಯ ಸಹಾಯಕ ಅಭಿಯೋಜಕರಾದ ಸುನಂದಾ ಮಡಿವಾಳರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಲ್ಲಿಕಾಜರ್ುನ ಮಠದ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕುಮಾರಿ ಉಮಾ ಕೆ.ಎಸ್. ಅವರು ಉಪಸ್ಥಿತರಿದ್ದರು.
ಬಾಲ ನ್ಯಾಯ ಮಂಡಳಿ ಪೆನಲ್ ವಕೀಲರಾದ ಎಂ.ಸಿ.ಭರಮಣ್ಣನವರ ಅವರು ಜೆ.ಜೆ.ಕಾಯ್ದೆ 2015ರ ಕುರಿತು ಹಾಗೂ ಜಿಲ್ಲಾ ಪೊಲೀಸ್ ಕಾಯರ್ಾಲಯದ ಸಂಪನ್ಮೂಲ ವ್ಯಕ್ತಿ ಎಂ.ಆರ್.ಜಾಲಗಾರ ಅವರು ಮಕ್ಕಳಿಗೆ ಬಾಲ ಸ್ನೇಹಿ ಕುರಿತು ಉಪನ್ಯಾಸ ನೀಡಿದರು.