ಇತ್ತೀಚಿನ ಬೆಳವಣಿಗೆಯಿಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕೆಲ ಜೆಡಿಎಸ್
ಬೆಂಗಳೂರು, ಅ.12: ಇತ್ತೀಚಿನ ಬೆಳವಣಿಗೆಯಿಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕೆಲ ಜೆಡಿಎಸ್ ಶಾಸಕರು ಅಸಮಾಧಾನಗೊಂಡಿದ್ದಾರೆ.
ನವೆಂಬರ್ 3 ರಂದು ನಡೆಯುತ್ತಿರುವ ಮೂರು ಲೋಕಸಭೆ ಹಾಗೂ ಜಮಖಂಡಿ ಹಾಗೂ ರಾಮನಗರ ವಿಧಾನಸಭಾಕ್ಷೇತ್ರಗಳ ಉಪ ಚುನಾವಣೆ ಸಂದರ್ಭದಲ್ಲೇ ಶಾಸಕರ ವಲಯದಲ್ಲಿ ಎದ್ದಿರುವ ಈ ಅಸಮಾಧಾನ ಎಲ್ಲಿಗೆ ಮುಟ್ಟುತ್ತದೆ ಎಂಬ ಆತಂಕ ಶುರುವಾಗಿದೆ.
ಸಿಎಂ ನಮ್ಮವರಾಗಿದ್ದರೂ ನಮ್ಮ ಕ್ಷೇತ್ರದ ಸಮಸ್ಯೆಗಳು, ಕೆಲಸ ಕಾರ್ಯಗಳನ್ನು ಹೇಳಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಶಾಸಕರೆಂಬ ಕನಿಷ್ಠ ಗೌರವವೂ ನಮಗೆ ಸಿಗುತ್ತಿಲ್ಲ ಎಂದು ಕೆಲ ಶಾಸಕರು ಗರಂ ಆಗಿದ್ದಾರೆ.
ಮುಂದಿನ ದಿನಗಳಲ್ಲಿ ಹೀಗೇ ಮುಂದುವರೆದರೆ ನಾವು ಕ್ಷೇತ್ರದ ಜನರಿಗೆ ಮುಖ ತೋರಿಸುವುದಾದರೂ ಹೇಗೆ ? ಒಂದಲ್ಲ ಒಂದು ಸಮಸ್ಯೆಗಳು ಎದುರಾಗುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಎಲ್ಲರ ಮುಂದೆಯೇ ತಮ್ಮ ಕೋಪ ತೋರ್ಪಡಿಸುತ್ತಾರೆ. ಸಿಟ್ಟಿನಿಂದಲೇ ಉತ್ತರಿಸುತ್ತಾರೆ. ಅವರು ತಾಳ್ಮೆ ಕಳೆದುಕೊಳ್ಳುತ್ತಿದ್ದಾರೆ ಎಂಬ ಭಾವನೆ ನಮಗೆ ಮೂಡುತ್ತಿದೆ ಎಂದು ಕೆಲ ಶಾಸಕರು ಅಳಲು ತೋಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 