ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಕರ ಸಂಕಲ್ಪ ಅಗತ್ಯ

ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಕರ ಸಂಕಲ್ಪ ಅಗತ್ಯ  The resolve of the youth is essential for building an addiction-free society

ಲೋಕದರ್ಶನ ವರದಿ 

 ಧಾರವಾಡ 01: ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ವ್ಯಸನ ಮುಕ್ತ ಸಮಾಜ ಅಭಿಯಾನಕ್ಕೆ ವಿದ್ಯಾರ್ಥಿಗಳು ಕೈಜೋಡಿಸಬೇಕು ಎಂದು ಜನತಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಅಜಿತ್ ಪ್ರಸಾದ್ ಕರೆ ನೀಡಿದರು. ಜೆ.ಎಸ್‌.ಎಸ್‌.  ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯ ಮಾನವ ಹಕ್ಕುಗಳ ಸಂಘ ಹಾಗೂ ಎನ್‌ಎಸ್‌ಎಸ್ ಘಟಕದ ವತಿಯಿಂದ ಆಯೋಜಿಸಿದ್ದ ವ್ಯಸನ ಮುಕ್ತ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರ ಮತ್ತು ವಿಶ್ವವಿದ್ಯಾಲಯಗಳು ಪೂಜ್ಯ ಡಾ. ಮಹಂತ ಶಿವಯೋಗಿಗಳ ಜನ್ಮದಿನವನ್ನು ವ್ಯಸನ ಮುಕ್ತ ದಿನವನ್ನಾಗಿ ಆಚರಿಸಲು ಸೂಚಿಸಿದ್ದು, ಯುವ ಪೀಳಿಗೆಯಲ್ಲಿ ದುಶ್ಚಟಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದರು.

ಮುಖ್ಯ ಅತಿಥಿ ಪ್ರೊ. ಎಸ್‌.ಕೆ. ಸಜ್ಜನ್ ಮಾತನಾಡಿ, ಡಾ. ಮಹಂತ ಶಿವಯೋಗಿಗಳ ಜೋಳಿಗೆ ಅಭಿಯಾನದಲ್ಲಿ ತಾವು ಸಹ ಭಾಗಿಯಾಗಿದ್ದು, ದುಶ್ಚಟಗಳ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಶ್ಲಾಘಿಸಿದರು. ದೇಶದ ಯುವಜನತೆ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಹೇಳಿದರು. ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ಆದರ್ಶ ಜೀವನ ನಡೆಸುವ ಪ್ರತಿಜ್ಞೆ ಕೈಗೊಳ್ಳಬೇಕು ಎಂದು ಅವರು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಉಪಪ್ರಾಚಾರ್ಯ ಡಾ. ಸೂರಜ್ ಜೈನ್, ಮಹಾವೀರ ಉಪಾಧ್ಯಾಯ, ಡಾ. ಆರಿ​‍್ವ. ಚಟಗುಪ್ಪಿ, ಶೃತಿ ಶೆಟ್ಟಿ, ಪ್ರೊ. ಬಲಭೀಮ ಹಾವನೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕು. ಗೀತಾ ದೇಶಾಯಿ ಗಣ್ಯರನ್ನು ಪರಿಚಯಿಸಿ ಸ್ವಾಗತಿಸಿದರು. ಪ್ರೊ. ಮಹಾಂತ ಎಂ. ದೇಶಾಯಿ ನಿರೂಪಿಸಿದರು.