ಹೆಸ್ಕಾಂ ಕಚೇರಿ ಮುಂಭಾಗದ ರಸ್ತೆ ಹದಗೆಟ್ಟಿದ್ದು ಸಾರ್ವಜನಿಕರಿಗೆ ನರಕಯಾತನೆ
The road in front of the HESCOM office has deteriorated, causing hell for the public.
ಸವದತ್ತಿ 14 : ನಗರದ ಎಸ್.ಎಲ್.ಎ.ಓ ಕ್ರಾಸ್ನಲ್ಲಿರುವ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಕಾರ್ಯ ಮತ್ತು ಪಾಲನೆ ವಿಭಾಗದ ಕಚೇರಿಗಳ ಮುಂಭಾಗದ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ.ಹೆಸ್ಕಾಂನ ಪಟ್ಟಣ ಶಾಖೆ, ಗ್ರಾಮೀಣ ಹಾಗೂ ಚುಳಕಿ ಶಾಖೆಗಳಿಗೆ ಸಂಪರ್ಕ ಕಲ್ಪಿಸುವ ಈ ಪ್ರಮುಖ ರಸ್ತೆಯಲ್ಲಿ ಸಣ್ಣ ಮಳೆಯಾದರೂ ಸಾಕು, ಗುಂಡಿಗಳಲ್ಲಿ ನೀರು ನಿಂತು ಕೆಸರು ಗದ್ದೆಯಂತಾಗುತ್ತಿದೆ. ಕಚೇರಿಯ ಮುಂಭಾಗದಲ್ಲೇ ಗಣೇಶ ದೇವಸ್ಥಾನವಿದ್ದು, ಪೂಜೆಗೆ ಬರುವ ಭಕ್ತರು ಹಾಗೂ ದ್ವಿಚಕ್ರ ವಾಹನ ಸವಾರರು ಈ ಗುಂಡಿಗಳನ್ನು ದಾಟಲು ಹರಸಾಹಸ ಪಡುತ್ತಿದ್ದಾರೆ. ರಸ್ತೆಯ ಕಲ್ಲುಗಳು ಮೇಲೆದ್ದಿರುವುದರಿಂದ ವಾಹನ ಸವಾರರು ನಿಯಂತ್ರಣ ತಪ್ಪಿ ಬೀಳುವ ಘಟನೆಗಳು ಇಲ್ಲಿ ಸಾಮಾನ್ಯವಾಗಿದೆ. ಪ್ರತಿನಿತ್ಯ ನೂರಾರು ಗ್ರಾಹಕರು ವಿದ್ಯುತ್ ಬಿಲ್ ಪಾವತಿಸಲು ಹಾಗೂ ವಿವಿಧ ಕೆಲಸಗಳಿಗಾಗಿ ಈ ಕಚೇರಿಗಳಿಗೆ ಆಗಮಿಸುತ್ತಾರೆ.
ವಿಶೇಷವಾಗಿ ವಯಸ್ಸಾದವರು ಈ ಹದಗೆಟ್ಟ ರಸ್ತೆಯಲ್ಲಿ ನಡೆಯಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.ತಾಲೂಕು ಆಡಳಿತದ ಪ್ರಮುಖ ಕಚೇರಿಗಳಿರುವ ಭಾಗದಲ್ಲೇ ಇಂತಹ ಹೀನಾಯ ಸ್ಥಿತಿ ಇರುವುದು ದುರದೃಷ್ಟಕರ. ಕನಿಷ್ಠ ಸುಗಮ ರಸ್ತೆಯ ವ್ಯವಸ್ಥೆಯೂ ಇಲ್ಲದಿರುವುದು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.ಈ ಸಮಸ್ಯೆಯ ಕುರಿತು ಪ್ರತಿಕ್ರಿಯಿಸಿರುವ ಹೆಸ್ಕಾಂ ಇಲಾಖೆಯ ಎಇಇ ವಿಶಾಪೂರಕರ ಅವರು, ಸಮಸ್ಯೆಯ ಕುರಿತು ಈಗಾಗಲೇ ನಗರಸಭೆ ಪೌರಾಯುಕ್ತರಿಗೆ ಮಾಹಿತಿ ನೀಡಲಾಗಿದೆ. ಪೌರಾಯುಕ್ತ ಸಂಗನಬಸಯ್ಯ ಗದಗಿನಮಠ ಅವರು ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದ್ದು, ಶೀಘ್ರವೇ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ತಕ್ಷಣವೇ ಎಚ್ಚೆತ್ತುಕೊಂಡು, ಈ ಗುಂಡಿ ಬಿದ್ದ ರಸ್ತೆಯನ್ನು ಶಾಶ್ವತವಾಗಿ ದುರಸ್ತಿಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದರು.
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ
48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ 