ವಿದ್ಯಾರ್ಥಿಗಳ ಬದುಕಿನ ವಿಕಾಸಕ್ಕೆ ಹಿರಿಯರ ಆದರ್ಶ ಮುಖ್ಯ
The role model of elders is important for the development of students' lives.
ವಿದ್ಯಾರ್ಥಿಗಳ ಬದುಕಿನ ವಿಕಾಸಕ್ಕೆ ಹಿರಿಯರ ಆದರ್ಶ ಮುಖ್ಯ
ಹಾವೇರಿ: ಬೆಳೆಯುತ್ತಿರುವ ವಿದ್ಯಾರ್ಥಿಗಳ ಬದುಕಿನ ವಿಕಾಸಕ್ಕೆ ಹಿರಿಯರ ಆದರ್ಶ ಸ್ಪೂರ್ತಿಯಾಗಬೇಕು.ಸಾಧನೆ ಮಾಡಲು ಸತತ ಪರಿಶ್ರಮ ಮುಖ್ಯ. ಪರಿಶ್ರಮದ ಬದುಕು ಪಲ್ಲವಿಸುತ್ತದೆ. ಉನ್ನತ ಸ್ಥಾನ ಹೊಂದುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ತಮ್ಮ ಕನಸುಗಳನ್ನು ನನಸು ಮಾಡಿಕೊಳ್ಳಲು ಜಾಗೃತವಾಗಿರಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ ಅಭಿಪ್ರಾಯಪಟ್ಟರು.
ನಗರದ ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ 2025-26 ನೇ ಶೈಕ್ಷಣಿಕ ವರ್ಷದ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಆಧುನಿಕ ವ್ಯವಸ್ಥೆಗೆ ತಕ್ಕಂತೆ ವಿದ್ಯಾರ್ಥಿಗಳ ಮನೋಸಾಮರ್ಥ್ಯವೂ ಬದಲಾಗುತ್ತಿದೆ. ಕೇವಲ ಐಷಾರಾಮಿ ಜೀವನಕ್ಕೆ ಪೂರಕವಾಗುವಂತಹ ಚಿಂತನಗಳು ಬದುಕನ್ನು ಗುರಿಗಾಣಿಸದು.ರೈತ ಈ ದೇಶದ ಬೆನ್ನೆಲುಬು. ಅನ್ನ ನೀಡುವ ಕೈ ಇಂದು ಬೇಡುವ ಪರಿಸ್ಥಿತಿ ಬಂದಿದೆ. ಇದಕ್ಕೆಲ್ಲ ಕಾರಣ ಏನೆಂಬುದನ್ನು ವಿವೇಚಿಸಿ ಪ್ರಜ್ಞಾವಂತ ವಿದ್ಯಾರ್ಥಿಗಳ ಹೊಸ ಆವಿಷ್ಕಾರದೊಂದಿಗೆ ಕೃಷಿಯತ್ತ ಒಲವು ಮೂಡಿಸಿಕೊಂಡು ಭಾರತದ ಭವಿತವ್ಯವನ್ನು ಪುನರುಜ್ಜೀವನಗೊಳಿಸುವ ಅಗತ್ಯವಿದೆ. ಮೋಜಿನ ಗೀಳಿಗೆ ಹೋಗದೇ ಜಾಣತನದ ಹೆಜ್ಜೆ ಹಾಕುವ ಮನಸ್ಥಿತಿಗೆ ಯುವಕರು ಬದಲಾದಾಗ ಸಮಾಜ ಸಮೃದ್ಧಗೊಳ್ಳಲು ಸಾಧ್ಯವಿದೆ ಎಂದರು.
ಅಧ್ಯಕ್ಷತೆವಹಿಸಿದ್ದ ಬೆಳಗಾವಿ ಕೆ.ಎಲ್.ಇ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಎಂ.ಸಿ. ಕೊಳ್ಳಿ ಮಾತನಾಡಿ ವಿದ್ಯಾರ್ಥಿಗಳು ಬೌದ್ಧಿಕ ವಿಕಾಸದೊಂದಿಗೆ ಶಾರೀರಿಕ,ದೈಹಿಕ ವಿಕಾಸವನ್ನು ಸಹ ಮಾಡಿಕೊಳ್ಳಲು ಉತ್ತಮ ಅವಕಾಶಗಳು ಇಂದು ಹೆಚ್ಚಾಗಿವೆ. ಸೂಕ್ತ ಮಾರ್ಗದರ್ಶನದೊಂದಿಗೆ ಉತ್ತಮ ಹಾದಿ ಹಿಡಿಯುವ ಅಗತ್ಯವಿದೆ. ಸತತ 60 ವರ್ಷಗಳಿಂದ ನಮ್ಮ ಕಾಲೇಜು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಸಹಾಯಕ ಮಾರ್ಗದರ್ಶನವಿತ್ತಯ ಸಾಧನೆ ಮಾಡುತ್ತ ಸಾಗಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.
ವೇದಿಕೆಯಲ್ಲಿ ಕಾಲೇಜು ಸ್ಥಾನಿಕ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಡಾ.ಎಸ್.ಎಲ್.ಬಾಲೇಹೊಸೂರ,ಸದಸ್ಯರಾದ ಬಸವರಾಜ ಮಾಸೂರ, ಜೆ. ಎಸ್. ಅರಣಿ, ಐಕ್ಯುಎಸಿ ಸಂಯೋಜಕಿ ಪ್ರೊ. ರೂಪಾ ಕೋರೆ, ದೈಹಿಕ ಶಿಕ್ಷಣ ನಿರ್ದೇಶಕಿ ಪೂಜಾ ಎಂ. ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಉಪಸ್ಥಿತರಿದ್ದರು. ಪ್ರಾಚಾರ್ಯ ಪ್ರೊ. ಎಂ. ಎಂ. ಹೊಳ್ಳಿಯವರ ಸ್ವಾಗತಿಸಿದರು. ಕಾಲೇಜು ಸಾಂಸ್ಕೃತಿಕ ವೇದಿಕೆಯ ಉಪಾಧ್ಯಕ್ಷೆ ಡಾ. ಮಹಾದೇವಿ ಕಣವಿ ಪರಿಚಯಿಸಿದರು. ಪ್ರೊ. ಶ್ರೀದೇವಿ ದೊಡ್ಡಮನಿ ನಿರ್ವಹಿಸಿದರು. ಕ್ರೀಡಾ ವಿಭಾಗದ ಉಪಾಧ್ಯಕ್ಷ ಡಾ. ಎಸ್. ಆರ್. ನಾಯಕ್ ವಂದಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 