ಹಾವೇರಿ: ಜೂನ್ 01: ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಆಯುಷ್ ಔಷಧಿಗಳ ಪಾತ್ರ ಮುಖ್ಯವಾಗಿದ್ದು, ಕೊರೊನಾ ಹಿಮ್ಮೆಟ್ಟಿಸಲು ಇದರ ಅವಶ್ಯಕತೆ ಇದೆ ಎಂದು ಶಾಸಕರಾದ ನೆಹರು ಓಲೇಕಾರ ಅವರು ಹೇಳಿದರು.
ನಗರದ ಸಕರ್ಾರಿ ಪ್ರಾಥಮಿಕ ಶಾಲೆ ನಂ.2ರಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಸೋಮವಾರ ಜರುಗಿದ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಯುಷ್ ಔಷಧಿಗಳ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕೊರೊನಾ ತಡೆಗಟ್ಟಲು ಸಕರ್ಾರ ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ ಆಯುಷ್ ಇಲಾಖೆ ಮೂಲಕ ಔಷಧಿಗಳನ್ನು ಪ್ರತಿ ಮನೆಗೆ ತಲುಪಿಸುವ ಉದ್ದೇಶ ಹೊಂದಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕತರ್ೆಯರು ಜಿಲ್ಲೆಯ ಪ್ರತಿ ಮನೆಮನೆಗೆ ತೆರಳಿ ರೋಗ ನಿರೋಧಕ ಮಾತ್ರೆಗಳನ್ನು ವಿತರಿಸಬೇಕು ಎಂದು ತಿಳಿಸಿದರು.
ಕೊರೊನಾ ರೋಗವು ಇಡಿ ಜಗತ್ತನ್ನೆ ತಲ್ಲಣಗೊಳಿಸಿದ್ದು, ಕೊರೊನಾ ವಿರುದ್ಧ ಹೋರಾಡಲು ಈ ಮಾತ್ರೆಗಳು ಪ್ರಯೋಜನಕಾರಿ, ಚಿಕ್ಕವರಿಂದ ವೃದ್ಧರವರೆಗೆ ಪ್ರತಿಯೊಬ್ಬರು ಆಯುಷ್ ಮಾತ್ರೆಗಳನ್ನು ಸೇವಿಸಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕು ಹಾಗೂ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು. ಕೋವಿಡ್ ಹರಡದಂತೆ ಎಲ್ಲರೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಖಡ್ಡಾಯವಾಗಿ ಮಾಸ್ಕನ್ನು ಧರಿಸಬೇಕು ಎಂದು ಈ ಸಂದರ್ಭದಲ್ಲಿ ಸಲಹೆ ನೀಡಿದರು.
ನಗರ ಹಾಗೂ ಗ್ರಾಮೀಣ ಪ್ರದೇಶಗಳಿಗೆ ಬೇರೆ ಊರುಗಳಿಂದ ಯಾರೇ ಆಗಮಿಸಿದರೂ ಸಹ ಅವರ ಬಗ್ಗೆ ಆರೋಗ್ಯ ಇಲಾಖೆಗೆ ಮಾಹಿತಿ ನೀಡುವ ಮೂಲಕ ಕೊರೊನಾ ಹರಡದಂತೆ ಮುಂಜಾಗ್ರತಾ ಕ್ರಮವಹಿಸುವ ಮೂಲಕ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ. ಎ.ಎಸ್.ಶಿರೂಳ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸುರೇಶ ಪೂಜಾರ, ಹಿರಿಯ ತಜ್ಞ ವೈದ್ಯ ಡಾ.ಎಲ್.ಎಲ್. ರಾಠೋಡ, ಆಯುಷ್ಯ ವೈದ್ಯಾಧಿಕಾರಿ ಡಾ. ರಾಜಶೇಖರ ಹೊಸಮನಿ, ಪ್ರಭಾರ ನಸರ್ಿಂಗ್ ಅಧಿಕ್ಷರಾದ ರಾಜೇಶ್ವರಿ ಭಟ್,, ಕ್ಷೇತ್ರ ಶಿಕ್ಷಣಾಧಿಕಾರಿ ಎಮ್.ಎಚ್.ಪಾಟೀಲ್, ಡಾ.ಆರ್.ಎನ್.ಕೆರೂರ್, ಡಾ.ರಾಕಿ ದೂಡ್ಡಮನಿ, ಸುಧಾಕರ ದೈವಜ್ಞ, ಜಿಲ್ಲಾ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.