ರೈತರು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಕೃಷಿ ಪಾತ್ರ ಮುಖ್ಯ
The role of agriculture is important for the economic development of farmers
ವಿಜಯಪುರ 25: ಆರ್ಥಿಕ ಅಭಿವೃದ್ಧಿಯಲ್ಲಿ ರೈತರು ಮತ್ತು ಕೃಷಿಯ ಪಾತ್ರ ಮುಖ್ಯವಾಗಿದೆ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.
ಇಂದು ಸೋಮವಾರ ಬಬಲೇಶ್ವರ ತಾಲೂಕಿನ ಹೆಬ್ಬಾಳಟ್ಟಿ ಗ್ರಾಮದಲ್ಲಿ ನೂತನ ಶ್ರೀ ನಂದಿ ಬಸವೇಶ್ವರ ದೇವಸ್ಥಾನ ಉದ್ಘಾಟನೆ ಮತ್ತು ಕಳಸಾ ರೋಹಣದ ಅಂಗವಾಗಿ ಆಯೋಜಿಸಲಾಗಿದ್ದ ಕುಂಭ ಮೇಳ ಹಾಗೂ ಧರ್ಮ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಸಚಿವ ಎಂ. ಬಿ. ಪಾಟೀಲ ಅವರು ಮಾಡಿರುವ ನೀರಾವರಿಯಿಂದಾಗಿ ಜಿಲ್ಲೆಯ ಚಿತ್ರಣ ಬದಲಾಗಿದೆ. ವಿಜಯಪುರ ರಾಜ್ಯದಲ್ಲಿ ಶ್ರೀಮಂತ ಜಿಲ್ಲೆಗಳಲ್ಲಿ ಒಂದಾಗುವ ಕಾಲ ಬಂದಿದೆ. ನೀರಾವರಿಯಿಂದಾಗಿ ರೈತರು ಆರ್ಥಿಕವಾಗಿ ಸಬಲರಾಗುತ್ತಿದ್ದಾರೆ.
ರೈತರಲ್ಲಿ ಖರೀದಿ ಸಾಮರ್ಥ್ಯ ಹೆಚ್ಚುತ್ತಿರುವುದರಿಂದ ಕಿರಾಣಿ ವ್ಯಾಪಾರ, ಹೊಟೇಲುಗಳು, ರಸಗೊಬ್ಬರ ವ್ಯಾಪಾರ ಸೇರಿದಂತೆ ವ್ಯಾಪಾರ ವಹಿವಾಟಿದಾರ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ಸಿಗುತ್ತಿದೆ. ಇದುರಾಜ್ಯದ ಸರ್ವಾಂಗೀಣ ಅಭಿವೃದ್ಧಿಗು ಕೊಡುಗೆ ನೀಡುತ್ತಿದೆ. ಆರ್ಥಿಕವಾಗಿ ಸಬಲರಾಗುತ್ತಿರುವ ರೈತರು ತಮ್ಮ ಕುಟುಂಬಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಮನಗೂಳಿ ಸಂಸ್ಥಾನ ಹಿರೇಮಠದ ಅಭಿನವ ಸಂಗನಬಸವ ಶಿವಾಚಾರ್ಯ ಮಹಾಸ್ವಾಮಿಗಳು, ಕಾಖಂಡಕಿ ಶ್ರೀ ಗುರುದೇವಆಶ್ರಮದ ಶಿವಯೋಗಿಶ್ವರ ಸ್ವಾಮಿಗಳು, ಗುಣದಾಳ ಕಲ್ಯಾಣೇಶ್ವರ ಮಠದಡಾ. ವಿವೇಕಾನಂದದೇವರು, ಹೆಬ್ಬಾಳಟ್ಟಿ ಚಂದ್ರಗಿರಿ ಸಿದ್ರಾಮೇಶ್ವರ ಮಠದ ಶ್ರೀ ಸಿದ್ದಲಿಂಗಯ್ಯ ರು.ಹಿರೇಮಠ, ಅರ್ಜುಣಗಿಯ ಶಿವಕುಮಾರ ಮಠ, ಹೆಬ್ಬಾಳಟ್ಟಿಯ ಶಣ್ಮುಖಯ್ಯ ಮಠಪತಿ, ಸಿದ್ದರಾಮ ಮ.ಕಾಖಂಡಕಿ ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 