ರಾಮದುರ್ಗ :ಯುವ ಪೀಳಿಗೆ ಜಾಗೃತವಾದಲ್ಲಿ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಆ ನಿಟ್ಟಿನಲ್ಲಿ ದುಶ್ಚಟ ಮುಕ್ತ ಸಮಾಜ ನಿಮರ್ಾಣವಾಗಲು ವಿದ್ಯಾಥರ್ಿಗಳ ಪಾತ್ರ ಮುಖ್ಯವಾಗಿದೆ ಎಂದು ಪ್ರಾಚಾರ್ಯ ರಮೇಶ ಬಾರಕೇರಿ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅಖಿಲ ಕನರ್ಾಟಕ ಜನಜಾಗೃತಿ ವೇದಿಕೆ ನೇತೃತ್ವದಲ್ಲಿ ಕಟಕೋಳ ಪ್ರೌಢ ಶಾಲೆಯ ವಿದ್ಯಾಥರ್ಿಗಳಿಗೆ ಹಮ್ಮಿಕೊಂಡ ತಾಲೂಕಾ ಮಟ್ಟದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಯೋಜನೆಯ ಬೆಳಗಾವಿ ಜಿಲ್ಲಾ ನಿದರ್ೇಶಕ ಸುರೇಶ ಎಂ. ಮಾತನಾಡಿ, ಇತ್ತಿಚಿನ ದಿನಗಳಲ್ಲಿ ಯುವ ಜನತೆ ದುಶ್ಚಟಕ್ಕೆ ಅಂಟಿಕೊಂಡ ಪರಿಣಾಮ ಅನೇಕ ಕುಟುಂಬಗಳು ಬೀದಿಗೆ ಬಂದು ಸಮಾಜದಲ್ಲಿ ನೆಮ್ಮದಿ ಹಾಳಾಗುವಂತಾಗಿದೆ. ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ನೇತೃತ್ವದಲ್ಲಿ ರಾಜ್ಯಾದ್ಯಂತ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯುವಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ಈರನಗೌಡ ಪಾಟೀಲ, ಜನತೆ ಹಾಗೂ ಯುವಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಎಂದು ಹರ್ಷ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾ ಎಸ್.ಜಿ. ಬನ್ನೂರ ವಿಧ್ಯಾಥರ್ಿಗಳಿಗೆ ಪ್ರತಿಜ್ಞಾ ವಿಧಿ ಭೋದಿಸಿದರು. ಸಂಸ್ಥೆಯ ತಾಲೂಕಾ ಯೋಜನಾಧಿಕಾರಿ ಸತೀಶ ಎಂ, ಒಕ್ಕೂಟದ ಅಧ್ಯಕ್ಷೆ ದಮಯಂತಿ ಹಾಗೂ ಇತರರಿದ್ದರು.
ಶಿಕ್ಷಕ ವಿಠ್ಠಲ ಸ್ವಾಗತಿಸಿದರು. ಮೇಲ್ವಿಚಾರಕ ಮಹೇಶ ನಿರೂಪಿಸಿದರು. ಸೇವಾಪ್ರತಿನಿಧಿ ಕುಸುಮಾರ ವಂದಿಸಿದರು.