ಆಸ್ಪತ್ರೆಗಳಲ್ಲಿ ಜನಸಂಪರ್ಕ ಅಧಿಕಾರಿಗಳ ಪಾತ್ರ ಮಹತ್ವದ್ದು
The role of public relations officers in hospitals is significant
ಲೋಕದರ್ಶನ ವರದಿ
ಬೆಳಗಾವಿ 17: ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ಹಲವು ಸಮಸ್ಯೆಗಳು, ಒತ್ತಡಗಳು ಮತ್ತು ಸವಾಲುಗಳು ಎದುರಾಗುತ್ತವೆ. ಇಂತಹ ಸಂದರ್ಭಗಳನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಜನಸಂಪರ್ಕ ಅಧಿಕಾರಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ. ಕರ್ನಲ್ ಎಂ. ದಯಾನಂದ ಹೇಳಿದರು.
ವಿಶ್ವ ಜನಸಂಪರ್ಕ ದಿನಾಚರಣೆ ಅಂಗವಾಗಿ ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಆಸ್ಪತ್ರೆಗಳ ಕುರಿತು ಜನರಲ್ಲಿ ಇರುವ ನಕಾರಾತ್ಮಕ ಭಾವನೆಗಳನ್ನು ದೂರ ಮಾಡಿ, ಸೂಕ್ತ ಚಿಕಿತ್ಸೆ ಪಡೆಯಲು ಅರಿವು ಮೂಡಿಸುವ ಕಾರ್ಯವನ್ನು ಜನಸಂಪರ್ಕ ಅಧಿಕಾರಿಗಳು ಮಾಡುತ್ತಿದ್ದಾರೆ ಎಂದರು.
ಆಸ್ಪತ್ರೆಗಳಲ್ಲಿ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುವುದು ಸುಲಭದ ಕೆಲಸವಲ್ಲ. ಆದರೆ ಜನಸಂಪರ್ಕ ಅಧಿಕಾರಿಗಳು ಸದಾ ಲಭ್ಯವಿದ್ದು, ರೋಗಿಗಳು, ವೈದ್ಯರು ಹಾಗೂ ಆಡಳಿತದ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದು ಹೇಳಿದರು.
ಆಸ್ಪತ್ರೆ ನಿರ್ವಹಣೆ ಸುಲಭವಲ್ಲ. ಹಲವು ನಿಯಮಗಳು ಮತ್ತು ಮಾನದಂಡಗಳನ್ನು ಪಾಲಿಸಬೇಕಾಗುತ್ತದೆ. ಸರ್ಕಾರದಿಂದ ವಿಶೇಷ ಆರ್ಥಿಕ ನೆರವು ಇಲ್ಲದಿದ್ದರೂ ಗುಣಮಟ್ಟದ ವೈದ್ಯಕೀಯ ಸೇವೆ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 