ವ್ಯಕ್ತಿಯ ವಿಕಸನಕ್ಕೆ ಕ್ರೀಡೆಗಳ ಪಾತ್ರ ಮಹತ್ವದ್ದು- ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್
The role of sports is important for the development of an individual - District Collector C.N. Sridh
ವ್ಯಕ್ತಿಯ ವಿಕಸನಕ್ಕೆ ಕ್ರೀಡೆಗಳ ಪಾತ್ರ ಮಹತ್ವದ್ದು- ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್
ಗದಗ 29: ವ್ಯಕ್ತಿಯ ಪೂರ್ಣ ಪ್ರಮಾಣದ ವಿಕಸವಾಗಬೇಕಾದರೆ ಕ್ರೀಡೆಗಳ ಪಾತ್ರ ಮಹತ್ವದ್ದಾಗಿದೆ. ವ್ಯಕ್ತಿಯ ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆಯಲ್ಲಿ ತೊಡಗುವುದು ಅವಶ್ಯವಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎಸ್.ಶ್ರೀಧರ್ ತಿಳಿಸಿದರು.
ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಗದಗ ಇವರ ಸಹಯೋಗದಲ್ಲಿ ಮೇಜರ್ ಧ್ಯಾನಚಂದರವರ ಜನ್ಮದಿನದ ಅಂಗವಾಗಿ ಶುಕ್ರವಾರ ಗದಗ ಬೆಟಗೇರಿಯ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಗದಗ ಜಿಲ್ಲೆಯ ಹಾಕಿ ಕ್ರೀಡಾಪಟುಗಳು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಮಿಂಚಿ ಪ್ರಶಸ್ತಿ ಪಡೆದಿದ್ದಾರೆ. ಹಾಕಿ, ಕುಸ್ತಿ ಮತ್ತು ಸೈಕ್ಲಿಂಗ್ ಪಂದ್ಯಾವಳಿಗಳು ಮೂರು ದಿನಗಳ ಕಾಲ ನಡೆಯಲಿವೆ. ಹಾಕಿ ಪಂದ್ಯಾವಳಿ ಅಗಸ್ಟ 29 ರಂದು ಶುಕ್ರವಾರ ಮಹಾತ್ಮ ಗಾಂಧಿ ಹಾಕಿ ಕ್ರೀಡಾಂಗಣ ಗದಗ ಬೆಟಗೇರಿಯಲ್ಲಿ 4 ತಂಡಗಳಿಂದ ಮೂರು ಪಂದ್ಯಗಳು ನಡೆ0ುಲಿವೆ. ಕುಸ್ತಿ ಪಂದ್ಯಾವಳಿಗಳು ಅಗಸ್ಟ 30 ರಂದು ಶನಿವಾರ ಬೆಳಗ್ಗೆ 10.30 ಗಂಟೆಗೆ ಸ್ಥಳ ಕೆ ಎಚ್ ಪಾಟೀಲ್ ಜಿಲ್ಲಾ ಕ್ರೀಡಾಂಗಣದ ಕುಸ್ತಿ ಮನೆ ಗದಗದಲ್ಲಿ ನಡೆ0ುಲಿದೆ. ಸೈಕ್ಲಿಂಗ್ ಜಾಥಾವು ದಿನಾಂಕ 31-8-2025ರ ಬೆಳಿಗ್ಗೆ 10:30 ಗಂಟೆಗೆ ನಗರದ ಕೆ ಎಚ್ ಪಾಟೀಲ್ ಜಿಲ್ಲಾ ಕ್ರೀಡಾಂಗಣದಿಂದ ಶ್ರೀ ಬಸವೇಶ್ವರ ಮೂರ್ತಿಯವರೆಗೆ ಜರುಗಲಿದೆ ಎಂದು ತಿಳಿಸಿದರು.
ಗದಗ ಬೆಟಗೇರಿಯ ಹನುಮಾನ್ ಬ್ಲೇಸ್ಸಿಂಗ್ ಕ್ಲಬ್ ಅಧ್ಯಕ್ಷರು ಹಾಗೂ ಸರ್ವ ಪದಾಧಿಕಾರಿಗಳು, ಸೈಕ್ಲಿಂಗ್ ಮತ್ತು ಕುಸ್ತಿ ಅಸೋಸಿಯೇಷನ್ , ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಅಧ್ಯಕ್ಷರು , ಪದಾಧಿಕಾರಿಗಳು ಉಪಸ್ಥಿತರಿದ್ದರು. ಕ್ರೀಡಾ ವಸತಿನಿಲಯದ ಕ್ರೀಡಾಪಟುಗಳು ಪ್ರಾರ್ಥಿಸಿದರು. ಪ್ರಾಧ್ಯಾಪಕರಾದ ಬಾಹುಬಲಿ ಜೈನರ್‌ರವರು ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಅಕ್ಬರ್‌ಸಾಬ್ ಬಬರ್ಜಿ, ನಗರಸಭೆ ಸದಸ್ಯರಾದ ಸುರೇಶ ಕಟ್ಟಿಮನಿ, ವೈ ಜಿ ಗಡಾದ, ಕೃಷ್ಣಪ್ಪ ಬಾಗಲಕೋಟೆ, ಹನುಮಂತಪ್ಪ ವೀರಾಪುರ್, ಚಂದ್ರು ಚೌಹಾನ್, ದೀಪಕ್ ಗಾಗಡೇ, ಪ್ರವೀಣ್ ಚಪ್ಪರಮನಿ, ಮಂಜುನಾಥ್ ಬಾಗಲಕೋಟಿ, ವಾಸು ಕಲ್ಕಂಬಿ, 0ುುವಜನ ಸಬಲೀಕರಣ ಕ್ರೀಡಾ ಇಲಾಖೆಯ ಅಧೀಕ್ಷಕ ಜಗದೀಶ್ ಹೊಳ್ಳಟ್ಟಿ ಇತರರು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 