ಯುವ ಸಮೂಹದ ಪಾತ್ರ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಮುಖ: ರುದ್ರ​‍್ಪ ಲಮಾಣಿ

ಯುವ ಸಮೂಹದ ಪಾತ್ರ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಮುಖ: ರುದ್ರ​‍್ಪ ಲಮಾಣಿ  The role of the youth is crucial in a democratic system: Rudrappa Lamani

ಲೋಕದರ್ಶನ ವರದಿ 

ಹಾವೇರಿ, ಸೆ.15 (ಕರ್ನಾಟಕ ವಾರ್ತೆ): ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯುವ ಸಮೂಹದ ಪಾತ್ರ ಅತ್ಯಂತ ಪ್ರಮುಖವಾಗಿದ್ದು, ಸಂವಿಧಾನದ ಆಶಯಗಳನ್ನು ಅರಿತು ದೇಶದ ಏಕತೆ ಹಾಗೂ ರಾಷ್ಟ್ರಭಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ಕಾನೂನು ಮತ್ತು ಜವಳಿ ಖಾತೆ ಸಚಿವ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ರುದ್ರ​‍್ಪ ಲಮಾಣಿ ಹೇಳಿದರು.  

ನಗರದ ಡಾ. ಬಿ.ಆರ್‌. ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ‘ಯುವ ಸಂಸತ್‌’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.  

ವಿದ್ಯಾರ್ಥಿಗಳು ಕಾಲೇಜು ಹಂತದಿಂದಲೇ ಸಂಘಟನೆ, ನಾಯಕತ್ವ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರಿತುಕೊಳ್ಳಬೇಕು. ಯುವಜನರಲ್ಲಿ ರಾಷ್ಟ್ರಾಭಿಮಾನ ಬೆಳೆಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದರು.