ನ್ಯಾಯ ಸಾಧಿಸುವಲ್ಲಿ ಮಹಿಳೆಯರ ಪಾತ್ರ ಮುಖ್ಯವಾಗಿದೆ
The role of women is important in achieving justice
ಹಾವೇರಿ 10 : ನ್ಯಾಯ ಸಾಧಿಸುವಲ್ಲಿ ಮಹಿಳೆಯರ ಪಾತ್ರ ಅತೀ ಮುಖ್ಯವಾಗಿದೆ. ಮಹಿಳಾ ನ್ಯಾಯಾಧೀಶರು ಸಮಾಜದಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಹಾಗೂ ಇತರೆ ಮಹಿಳೆಯರಿಗೆ ಪ್ರೇರಣೆಯಾಗಿರುತ್ತಾರೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿರಾದಾರ ದೇವಿಂದ್ರಾ್ಪ ಎನ್. ಹೇಳಿದರು. ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಭವನದಲ್ಲಿ ಸೋಮವಾರ ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾ ಅಭಿಯೋಜನಾ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನ್ಯಾಯಾಂಗದ ಎಲ್ಲ ಹಂತಗಳಲ್ಲಿ ಕೆಲಸಮಾಡುವ ಮಹಿಳೆಯರು ಸಹ ಇತರರಿಗೆ ಮಾರ್ಗದರ್ಶಿ ಸ್ಥಾನದಲ್ಲಿ ನಿಲ್ಲಬೇಕು. ನಾಯಕತ್ವದ ಸ್ಥಾನವು ಭ್ರಷ್ಟಾಚಾರದ ವಿರುದ್ಧ ಹೋರಾಡಲು ಸಹಾಯಮಾಡಬಹುದು. ಸಮಾಜದಲ್ಲಿ ಪೋಕ್ಸೋ, ಬಾಲ್ಯವಿವಾಹ ಹಾಗೂ ವರದಕ್ಷಿಣೆ ಪಿಡುಗು ತಡೆಗೆ ಸಮಾಜದಲ್ಲಿ ಜಾಗೃತಿ ಮೂಡಿಸಿದಾಗ ಇಂತಹ ಪ್ರಕರಣಗಳ ಸಂಖ್ಯೆ ಕಡಿಮೆಯಾಗಲು ಸಾಧ್ಯ. ಜೊತೆಗೆ ಬೇಸಿಗೆ ಸಮಯದಲ್ಲಿ ಬಿಸಿಲಿನ ತಾಪ ಹೆಚ್ಚಿರುವುದರಿಂದ ಪ್ರಾಣಿ-ಪಕ್ಷಿಗಳಿಗೆ ನಮ್ಮ ನಮ್ಮ ಮನೆಯ ಆವರಣದಲ್ಲಿ ಆಹಾರ ಹಾಗೂ ನೀರಿನ ವ್ಯವಸ್ಥೆ ಮಾಡುವುದು ಮಾನವೀಯತೆ ಆಗಿದೆ ಎಂದು ಹೇಳಿದರು.
ಸನ್ಮಾನ: ಇದೇ ಸಂದರ್ಭದಲ್ಲಿ ಮಹಿಳಾ ನ್ಯಾಯಾಧೀಶರಾದ ಅಶ್ವಿನಿ ಶಿರಿಯಣ್ಣನವರ, ಶೋಭಾ ಬಿ.ಜಿ., ಶ್ರೀಶೈಲಜಾ ಎಚ್.ವಿ., ಸರ್ಕಾರಿ ಅಭಿಯೋಜಕರಾದ ಸರೋಜಾ ಕೂಡಲಗಿಮಠ, ಸಹಾಯಕ ಸರ್ಕಾರಿ ಅಭಿಯೋಜಕರಾದ ಇಂದುಮತಿ ಪಾಟೀಲ ಅವರನ್ನು ಸನ್ಮಾನಿಸಲಾಯತು.
ಬಹುಮಾನ ವಿತರಣೆ: ಮಹಿಳಾ ದಿನಾಚರಣೆ ಅಂಗವಾಗಿ ಆಯೋಜಿಸಲಾದ ರಂಗೋಲಿ ಹಾಗೂ ಮನೋರಂಜನೆ ಕಾರ್ಯಕ್ರಮದಲ್ಲಿ ವಿಜೇತಾರದ ಮಹಿಳೆಯರಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ನೀಡಲಾಯಿತು. ಕಾವೇರಿ ಬಿರಾದಾರ ದೇವಿಂದ್ರಾ್ಪ ಎನ್. ಅವರು ಉದ್ಘಾಟನೆ ನೆರವೇರಿಸಿದರು. ನ್ಯಾಯಾಧೀಶರಾದ ಎಂ.ಜಿ.ಶಿವಳ್ಳಿ, ಎನ್.ಎಂ.ರಮೇಶ, ಮಹಮ್ಮದ ಅನ್ವರ ಹುಸೇನ ಮೊಗಲಾನಿ, ಆಕರ್ಷ ಎಂ., ಬಿಪಿನ ಎಚ್.ಎಂ., ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಚ್.ಸಿ.ಸಿದ್ದನಗೌಡರ ಇತರರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 