ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಯುವಕರ ಪಾತ್ರ ಮುಖ್ಯ
The role of youth is crucial in building an addiction-free society
ಲೋಕದರ್ಶನ ವರದಿ
ಧಾರವಾಡ 07 : ಆರೋಗ್ಯವಂತ ಯುವಶಕ್ತಿಯೇ ದೇಶದ ನಿಜವಾದ ಭವಿಷ್ಯ. ಯುವಕರು ಮಾದಕ ವಸ್ತುಗಳ ದಾಸರಾಗದೆ ನೈತಿಕ ಪ್ರಜ್ಞೆ ಬೆಳೆಸಿಕೊಳ್ಳಬೇಕು ಎಂದು ಧಾರವಾಡದ ಮನೋವೈದ್ಯಕೀಯ ಸಮಾಜಕಾರ್ಯಕರ್ತ ಪ್ರಶಾಂತ ಪಾಟೀಲ ಹೇಳಿದರು.
ಕರ್ನಾಟಕ ವಿದ್ಯಾವರ್ಧಕ ಸಂಘದ ಶಿಕ್ಷಣ ಮಂಡಳಿಯ ವತಿಯಿಂದ ಕಿಟೆಲ್ ಕಲಾ ಮಹಾವಿದ್ಯಾಲಯದ ಐಕ್ಯೂಎಸಿ, ಎನ್‌ಎಸ್‌ಎಸ್ ಘಟಕ ಹಾಗೂ ಯೂತ್ ರೆಡ್ಕ್ರಾಸ್ ಸಂಘಗಳ ಸಹಯೋಗದಲ್ಲಿ ಆಯೋಜಿಸಿದ್ದ ‘ಮಾದಕ ವಸ್ತುಗಳ ದುರ್ಬಳಕೆ ತಡೆಗಟ್ಟುವಲ್ಲಿ ಯುವ ವಿದ್ಯಾರ್ಥಿಗಳ ಪಾತ್ರ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯ ಹಾಗೂ ಸಾಮಾಜಿಕ ಬದುಕಿನ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಯುವಕರು ದುಶ್ಚಟಗಳಿಗೆ ಬಲಿಯಾಗದೆ ಆರೋಗ್ಯಕರ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಿಟೆಲ್ ಕಲಾ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ. ರೇಖಾ ಎಂ. ಜೋಗುಳ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ವ್ಯಸನಮುಕ್ತ ಸಮಾಜ ನಿರ್ಮಾಣದ ಕುರಿತು ಜಾಗೃತಿ ಮೂಡಿಸಲಾಯಿತು. ವಿದ್ಯಾರ್ಥಿಗಳು ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸುವಂತೆ ಪ್ರತಿಜ್ಞೆ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಣ ಮಂಡಳಿಯ ಸಂಚಾಲಕ ವೀರಣ್ಣ ಒಡ್ಡೀನ, ಡಾ. ಶರಣಪ್ಪ ಆಡಕರ್, ಡಾ. ಡ್ಯಾನಿಯಲ್ ಪ್ರವೀಣಕುಮಾರ್, ಡಾ. ಸುರೇಶ್ ನ್ಯಾಮತಿ ಸೇರಿದಂತೆ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 